ಅವನು ತನ್ನ ಸೇವಕರಿಗೆ, “ನೀವು ದಾವೀದನಿಗೆ ಗುಪ್ತವಾಗಿ, ‘ಅರಸನಿಗೆ ನಿನ್ನನ್ನು ಒಲಿಯುತ್ತಾನೆ, ಅವನ ಸೇವಕರು ನಿನ್ನನ್ನು ಪ್ರೀತಿಸುತ್ತಾರೆ. ನೀನು ಅರಸನ ಅಳಿಯನಾಗು’ ಎಂದು ಹೇಳಿರಿ” ಅಂದನು.
TSK
TSK · ಙ್ಞಾನೋಕ್ತಿಗಳು 29:12
Treasury of Scripture Knowledge references in ಕನ್ನಡ IRV.
¶ ಜೀಫ್ಯರು ಗಿಬೆಯಲ್ಲಿದ್ದ ಸೌಲನ ಬಳಿಗೆ ಬಂದು ಅವನಿಗೆ, “ಒಡೆಯಾ, ಕೇಳು ದಾವೀದನು ನಮ್ಮ ಪ್ರಾಂತ್ಯಕ್ಕೆ ಸೇರಿದ ಹೋರೆಷದ ಗಿರಿಗಳಲ್ಲಿ, ಅಂದರೆ ಯೆಷಿಮೋನಿನ ದಕ್ಷಿಣದಲ್ಲಿರುವ ಹಕೀಲಾ ಬೆಟ್ಟದಲ್ಲಿ ಅಡಗಿಕೊಂಡಿದ್ದಾನೆ.
¶ ಈಷ್ಬೋಶೆತನು ಮಧ್ಯಾಹ್ನದ ಬಿಸಿಲು ಹೊತ್ತಿನಲ್ಲಿ ಮನೆಯೊಳಗೆ ಮಲಗಿರುವಾಗ ಬೇರೋತಿನ ರಿಮ್ಮೋನನ ಮಕ್ಕಳಾದ ರೇಕಾಬ್, ಬಾಣ ಎಂಬುವರು ಅವನ ಮನೆಯ ಬಳಿಗೆ ಬಂದರು.
¶ ಆಗ ಯೇಹುವು ಇನ್ನೊಂದು ಪತ್ರದ ಮೂಲಕವಾಗಿ ಅವರಿಗೆ, “ನೀವು ನನ್ನ ಪಕ್ಷದವರಾಗಿದ್ದು ನನ್ನ ಆಜ್ಞಾನುಸಾರ ನಡೆದುಕೊಳ್ಳುವ ಮನಸ್ಸುಳ್ಳವರಾಗಿದ್ದರೆ, ನಾಳೆ ಇಷ್ಟು ಹೊತ್ತಿಗೆ ನಿಮ್ಮ ಯಜಮಾನನ ಸಂತಾನದವರ ತಲೆಗಳೊಡನೆ ಇಜ್ರೇಲಿಗೆ ಬನ್ನಿರಿ” ಎಂದು ಆಜ್ಞಾಪಿಸಿದನು. ಆಹಾಬನ ಎಪ್ಪತ್ತು ಮಂದಿ ರಾಜಪುತ್ರರು ಪಟ್ಟಣದ ಪ್ರಧಾನಪುರುಷರ ಪರಾಂಬರಿಕೆಯಲ್ಲಿದ್ದರು.
ಗುಪ್ತದಲ್ಲಿ ನೆರೆಯವನ ಮೇಲೆ ಚಾಡಿ ಹೇಳುವವನನ್ನು ಸಂಹರಿಸುವೆನು; ಸೊಕ್ಕಿನ ಕಣ್ಣೂ, ಉಬ್ಬಿದ ಮನಸ್ಸೂ ಉಳ್ಳವನನ್ನು ಸಹಿಸುವುದಿಲ್ಲ.
ಉತ್ತರದ ಗಾಳಿ ಮಳೆ ಬರಮಾಡುವುದು, ಚಾಡಿಯ ನಾಲಿಗೆ ಕೋಪದ ಮುಖ ಮಾಡುವುದು.