1 ಅರಸುಗಳು 1:6
TSK
ಅವನ ತಂದೆಯಾದ ದಾವೀದನು, “ನೀನು ಹೀಗೆ ಮಾಡಿದ್ದೇಕೆ” ಎಂದು ಅವನನ್ನು ಒಂದು ಸಾರಿಯಾದರೂ ಗದರಿಸಿ ಬೇಸರಪಡಿಸಿರಲಿಲ್ಲ. ಅವನು ಬಹು ಸುಂದರವಾಗಿದ್ದನು. ಅಬ್ಷಾಲೋಮನ ತರುವಾಯ ಅವನೇ ಹಿರಿಯನಾಗಿದ್ದನು.
TSK
Treasury of Scripture Knowledge references in ಕನ್ನಡ IRV.
ಅವನ ತಂದೆಯಾದ ದಾವೀದನು, “ನೀನು ಹೀಗೆ ಮಾಡಿದ್ದೇಕೆ” ಎಂದು ಅವನನ್ನು ಒಂದು ಸಾರಿಯಾದರೂ ಗದರಿಸಿ ಬೇಸರಪಡಿಸಿರಲಿಲ್ಲ. ಅವನು ಬಹು ಸುಂದರವಾಗಿದ್ದನು. ಅಬ್ಷಾಲೋಮನ ತರುವಾಯ ಅವನೇ ಹಿರಿಯನಾಗಿದ್ದನು.
ಸುಗ್ಗಿಯಲ್ಲಿ ಕೂಡಿಸುವವನು ಬುದ್ಧಿವಂತನು, ಕೊಯ್ಲಿನಲ್ಲಿ ತೂಕಡಿಸುವವನು ನಾಚಿಕೆಗೆಟ್ಟವನು.
ಮೂರ್ಖನನ್ನು ಹೆತ್ತವರಿಗೆ ವ್ಯಥೆ, ಮೂರ್ಖನ ತಂದೆಗೆ ವ್ಯಸನ.
ನಡೆಯಬೇಕಾದ ಮಾರ್ಗಕ್ಕೆ ತಕ್ಕಂತೆ ಮಕ್ಕಳನ್ನು ಶಿಕ್ಷಿಸು, ಮುಪ್ಪಿನಲ್ಲಿಯೂ ಓರೆಯಾಗರು.
ಹುಡುಗನ ಶಿಕ್ಷೆಗೆ ಹಿಂತೆಗೆಯಬೇಡ, ಅವನು ಬೆತ್ತದ ಏಟಿಗೆ ಸಾಯನು.
ಆಳನ್ನು ಬಾಲ್ಯದಿಂದ ಕೋಮಲವಾಗಿ ಸಾಕಿದರೆ, ತರುವಾಯ ಅವನು ಎದುರುಬೀಳುವನು.