TSK

TSK · ಙ್ಞಾನೋಕ್ತಿಗಳು 29:4

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ದಾವೀದನು ಇಸ್ರಾಯೇಲ್ಯರ ಅರಸನಾಗಿ, ಎಲ್ಲಾ ಪ್ರಜೆಗಳನ್ನು ನೀತಿನ್ಯಾಯಗಳಿಂದ ನಡೆಸುತ್ತಾ ಬಂದನು.

ಇವನು ಜೀವದಿಂದ ಇರುವವರೆಗೂ ಇಸ್ರಾಯೇಲರನ್ನು ಪಾಪಕ್ಕೆ ಪ್ರಚೋದಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ದುರ್ಮಾರ್ಗವನ್ನು ಬಿಡದೆ ತನ್ನ ಪೂರ್ವಿಕರಂತೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.

ನೀತಿ ಮತ್ತು ನ್ಯಾಯಗಳು ನಿನ್ನ ಸಿಂಹಾಸನದ ಅಸ್ತಿವಾರವು; ನಿನ್ನ ಸಾನ್ನಿಧ್ಯದೂತರು ಪ್ರೀತಿ ಮತ್ತು ಸತ್ಯತೆಗಳೇ.

ರಾಜನ ತುಟಿಗಳಲ್ಲಿ ದೈವೋಕ್ತಿ, ನ್ಯಾಯತೀರಿಸುವುದರಲ್ಲಿ ಅವನ ಬಾಯಿ ತಪ್ಪಿಹೋಗದು.

ರಾಜನು ನ್ಯಾಯಾಸನಾರೂಢನಾಗಿ, ತನ್ನ ದೃಷ್ಟಿಯಿಂದ ಸಕಲ ಕೆಟ್ಟತನವನ್ನು ತೂರುವನು.

ಆತನ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ದಿಯಾಗುವುದು. ದಾವೀದನ ರಾಜ್ಯದಲ್ಲಿ ನಿತ್ಯ ಸಮಾಧಾನವಿರುವುದು. ಆ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವುದು. ಸೇನಾಧೀಶ್ವರನಾದ ಯೆಹೋವನ ಅನುಗ್ರಹವು ಇದನ್ನು ನೆರವೇರಿಸುವುದು.

ತನ್ನ ಅರಮನೆಯನ್ನು ದುರ್ನೀತಿಯಿಂದಲೂ, ಮಹಡಿಗಳನ್ನು ಅನ್ಯಾಯದಿಂದಲೂ ಕಟ್ಟಿಸಿಕೊಳ್ಳುವವನ ಗತಿಯನ್ನು ಏನು ಹೇಳಲಿ! ಕೂಲಿಕೊಡದೆ ನೆರೆಯವನಿಂದ ಬಿಟ್ಟಿಕೆಲಸವನ್ನು ಮಾಡಿಸಿ,

ಎರಡು ಕೈಗಳನ್ನು ಹಾಕಿ ಕೆಟ್ಟ ಕೆಲಸವನ್ನು ಚೆನ್ನಾಗಿ ಮಾಡುತ್ತಾರೆ. ಪ್ರಭುವು ಧನವನ್ನು ಕೇಳುತ್ತಾನೆ. ನ್ಯಾಯಾಧಿಪತಿಯು ಲಂಚಕ್ಕೆ ಕೈಯೊಡ್ಡುತ್ತಾನೆ. ದೊಡ್ಡ ಮನುಷ್ಯನು ತನ್ನ ದುರಾಶೆಯನ್ನು ತಿಳಿಸುತ್ತಾನೆ. ಹೀಗೆ ಕುಯುಕ್ತಿಯನ್ನು ಹೆಣೆಯುತ್ತಾರೆ.