TSK

TSK · ಙ್ಞಾನೋಕ್ತಿಗಳು 3:16

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಇದಲ್ಲದೆ ನೀನು ಕೇಳಿದಂಥದ್ದನ್ನೂ ನಿನಗೆ ಅನುಗ್ರಹಿಸಿದ್ದೇನೆ. ನಿನ್ನ ಜೀವಮಾನದಲ್ಲೆಲ್ಲಾ ಐಶ್ವರ್ಯದಲ್ಲಿಯೂ, ಗೌರವ ಘನತೆಗಳಲ್ಲಿಯೂ ನಿನಗೆ ಸಮಾನನಾದ ಅರಸನು ಇನ್ನೊಬ್ಬನಿರುವುದಿಲ್ಲ.

ಅವನು ದೀರ್ಘಾಯುಷ್ಯವನ್ನು ಬೇಡಿಕೊಳ್ಳಲು, ನೀನು ಅವನಿಗೆ ಯುಗಯುಗಾಂತರಗಳ ಆಯುಷ್ಯವನ್ನು ಅನುಗ್ರಹಿಸಿದ್ದೀ.

ಅವು ನಿನ್ನ ದಿನಗಳನ್ನು ಹೆಚ್ಚಿಸಿ, ನಿನ್ನ ಆಯುಷ್ಯವನ್ನು ವೃದ್ಧಿಗೊಳಿಸಿ, ನಿನಗೆ ಸುಕ್ಷೇಮವನ್ನು ಉಂಟುಮಾಡುವವು.

ಜ್ಞಾನವೆಂಬಾಕೆಯು ಶ್ರೇಷ್ಠಳು ಎಂದು ನೀನು ಭಾವಿಸಿದರೆ ಆಕೆಯು ನಿನ್ನನ್ನು ಉನ್ನತಿಗೆ ತರುವಳು, ಆಕೆಯನ್ನು ಅಪ್ಪಿಕೊಂಡರೆ ನಿನ್ನನ್ನು ಘನಪಡಿಸುವಳು.

ಆದಕಾರಣ ಮನುಷ್ಯಮಾತ್ರದವರ ವಿಷಯದಲ್ಲಿ ಯಾರೂ ಹೊಗಳಿಕೊಳ್ಳದಿರಲಿ. ಯಾಕೆಂದರೆ ಸಮಸ್ತವೂ ನಿಮಗಾಗಿಯೇ ಇದೆ.

ದೇಹಸಾಧನೆಯು ಸ್ವಲ್ಪಮಟ್ಟಿಗೆ ಪ್ರಯೋಜನವಾಗಿದೆ, ಭಕ್ತಿಯಾದರೋ ಎಲ್ಲಾ ವಿಧದಲ್ಲಿ ಪ್ರಯೋಜನವಾದದ್ದು. ಅದಕ್ಕೆ ಇಹಪರಗಳಲ್ಲಿನ ಜೀವನಕ್ಕೆ ವಾಗ್ದಾನ ಉಂಟು.