TSK

TSK · ಙ್ಞಾನೋಕ್ತಿಗಳು 3:33

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ “ಆದರೆ ನೀವು ನನ್ನ ಮಾತನ್ನು ಕೇಳದೆ ಈ ಆಜ್ಞೆಗಳನ್ನೆಲ್ಲಾ ಅನುಸರಿಸದೆ,

ಈ ಆಜ್ಞೆಗಳಿಗೆ ಅವಿಧೇಯರಾಗಿ, ನಾನು ಈಗ ಬೋಧಿಸುವ ಮಾರ್ಗವನ್ನು ಬಿಟ್ಟು ನಿಮಗೆ ಗೊತ್ತಿಲ್ಲದ ಇತರ ದೇವರುಗಳನ್ನು ಅವಲಂಬಿಸಿದರೆ ಶಾಪವೂ ನಿಮಗುಂಟಾಗುವವು.

ನೀವಾದರೋ ಯೆಹೋವನಿಗೆ ಅರ್ಪಿಸುವ ವಸ್ತುಗಳ ವಿಷಯದಲ್ಲಿ ಜಾಗರೂಕತೆಯಿಂದಿರಬೇಕು. ನೀವು ಅವುಗಳಲ್ಲಿ ಯಾವುದನ್ನಾದರೂ ತೆಗೆದುಕೊಂಡರೆ, ಇಸ್ರಾಯೇಲ್ಯರ ಪಾಳೆಯವು ಶಾಪಕ್ಕೆ ಗುರಿಯಾಗಿ ನಾಶವಾದೀತು.

ಯೆಹೋವನ ಮಂಜೂಷವು ಗತ್ ಊರಿನ ಓಬೇದೆದೋಮನ ಮನೆಯಲ್ಲಿ ಮೂರು ತಿಂಗಳು ಇತ್ತು. ಆ ದಿನಗಳಲ್ಲಿ ಯೆಹೋವನು ಅವನನ್ನೂ ಅವನ ಮನೆಯವರನ್ನೂ ಆಶೀರ್ವದಿಸಿದನು.

(ನೀವು ಹೇಳುವುದೇನೆಂದರೆ) ದುಷ್ಟನು ಪ್ರವಾಹದಲ್ಲಿ ವೇಗವಾಗಿ ಕೊಚ್ಚಿಕೊಂಡು ಹೋಗುವನು, ಭೂಲೋಕದ ಅವನ ಆಸ್ತಿಯು ಶಾಪಗ್ರಸ್ತವಾಗಿರುವುದು. ದ್ರಾಕ್ಷಿತೋಟಗಳ ಕಡೆಗೆ ತಿರುಗಲಾರನು.

ನೀರಿನ ಕಾಲುವೆಗಳ ಬಳಿಯಲ್ಲಿ ಬೆಳೆದಿರುವ ಮರದ ಹಾಗೆ ಅವನಿರುವನು. ಅಂಥ ಮರವು ಸೂಕ್ತಕಾಲದಲ್ಲಿ ಫಲಕೊಡುತ್ತದಲ್ಲಾ. ಅದರ ಎಲೆ ಬಾಡುವುದೇ ಇಲ್ಲ. ಅದರಂತೆ ಅವನ ಕಾರ್ಯವೆಲ್ಲವೂ ಸಫಲವಾಗುವುದು.

ಯಾವ ಕೇಡೂ ನಿನಗೆ ಸಂಭವಿಸದು; ಉಪದ್ರವವು ನಿನ್ನ ಗುಡಾರದ ಸಮೀಪಕ್ಕೂ ಬಾರದು.

ನೀತಿಸ್ವರೂಪನು ಅಧರ್ಮಿಯ ಮನೆಯನ್ನು ಲಕ್ಷ್ಯಕ್ಕೆ ತಂದು, ಅಧರ್ಮಿಗಳನ್ನು ಕೆಡವಿ ಅವರನ್ನು ಕೇಡಿಗೆ ತಳ್ಳುವನು.

ನಾನು ಶಾಪವನ್ನು ಕಳುಹಿಸುತ್ತೇನೆ. ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, ‘ನನ್ನ ಅಪ್ಪಣೆಯಂತೆ ಅದು ಕಳ್ಳನ ಮನೆಯಲ್ಲಿಯೂ, ನನ್ನ ಹೆಸರೆತ್ತಿ ಸುಳ್ಳು ಸಾಕ್ಷಿಹೇಳುವವನ ಮನೆಯೊಳಗೆ ನುಗ್ಗಿ ಮತ್ತು ಅವನ ಮನೆಯಲ್ಲಿನ ಮರಗಳನ್ನೂ, ಅದರ ಕಲ್ಲುಗಳನ್ನೂ ನಾಶಮಾಡುವುದು’” ಎಂದು ಹೇಳಿದನು.