ಅವನ ಹೆಂಡತಿಯ ಹೆಸರು ಅಬೀಗೈಲ್. ಆಕೆಯು ಬಹು ಬುದ್ಧಿವಂತೆಯೂ, ಸುಂದರಿಯೂ ಆಗಿದ್ದಳು. ಕಾಲೇಬನ ವಂಶದವನಾದ ಆ ಮನುಷ್ಯನು ನಿಷ್ಠುರನೂ, ದುಷ್ಕರ್ಮಿಯೂ ಆಗಿದ್ದನು. ಅವನು ಬಹು ಶ್ರೀಮಂತನಾಗಿದ್ದನು. ಅವನಿಗೆ ಮೂರು ಸಾವಿರ ಕುರಿಗಳೂ, ಸಾವಿರ ಆಡುಗಳೂ ಇದ್ದವು. ಅವನು ಒಂದು ಸಾರಿ ಕರ್ಮೆಲಿನಲ್ಲಿ ಕುರಿಗಳ ಉಣ್ಣೆಯನ್ನು ಕತ್ತರಿಸುತ್ತಿದ್ದನು.
TSK
TSK · ಙ್ಞಾನೋಕ್ತಿಗಳು 30:22
Treasury of Scripture Knowledge references in ಕನ್ನಡ IRV.
1 ಸಮುವೇಲನು 25:3
TSK
1 ಸಮುವೇಲನು 25:25
TSK
ಸ್ವಾಮಿಯು ಆ ಮೂರ್ಖನಾದ ನಾಬಾಲನನ್ನು ಲಕ್ಷಿಸದಿರಲಿ. ಅವನ ಹೆಸರು ನಾಬಾಲ. ಹೆಸರಿಗೆ ತಕ್ಕಂತೆ ಅವನು ಮೂರ್ಖನೇ ಆಗಿದ್ದಾನೆ. ನಿನ್ನ ದಾಸಿಯಾದ ನಾನು ಸ್ವಾಮಿಯು ಕಳುಹಿಸಿದ ಸೇವಕರನ್ನು ನೋಡಲಿಲ್ಲ.
1 ಸಮುವೇಲನು 30:16
TSK
ಅವರು ಅಲ್ಲಿಗೆ ಹೋದಾಗ ಆ ಗುಂಪಿನವರು ತಮಗೆ ಫಿಲಿಷ್ಟಿಯ ಮತ್ತು ಯೆಹೂದ ಪ್ರಾಂತ್ಯಗಳಲ್ಲಿ ದೊರಕಿದ ದೊಡ್ಡ ಕೊಳ್ಳೆಯ ನಿಮಿತ್ತವಾಗಿ ಸಂತೋಷಿಸಿ, ಉಂಡು ಕುಡಿದು, ಕುಣಿದಾಡುತ್ತಾ ಅಲ್ಲಿನ ಬೈಲಿನಲ್ಲಿ ವ್ಯಾಪಿಸಿಕೊಂಡಿದ್ದರು.
ಬಡವರನ್ನು ಹಿಂಸಿಸುವ ದರಿದ್ರನು, ಒಂದು ಕಾಳೂ ಉಳಿಯದಂತೆ ಪೈರನ್ನು ಬಡಿಯುವ ಮಳೆಯ ಹಾಗೆ.
ಯೆಶಾಯ 3:4
TSK
ನಾನು, “ಬಾಲಕರನ್ನು ಪ್ರಭುಗಳನ್ನಾಗಿ ಆ ದೇಶಕ್ಕೆ ನೇಮಿಸುವೆನು, ಬಾಲಕರು ಅದನ್ನು ಆಳುವರು.