TSK

TSK · ಙ್ಞಾನೋಕ್ತಿಗಳು 31:31

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

‹ಅವರ ಫಲಗಳಿಂದ ಅವರನ್ನು ತಿಳಿದುಕೊಳ್ಳುವಿರಿ. ಮುಳ್ಳುಗಿಡಗಳಲ್ಲಿ ದ್ರಾಕ್ಷಿಹಣ್ಣುಗಳನ್ನೂ ದತ್ತೂರಿ ಗಿಡಗಳಿಂದ ಅಂಜೂರಗಳನ್ನೂ ಸಂಗ್ರಹಿಸುವುದುಂಟೇ?›

‹ಬಡವರು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುತ್ತಾರೆ. ನಿಮಗೆ ಮನಸ್ಸು ಬಂದಾಗ ನೀವು ಅವರಿಗೆ ಯಾವಾಗಲಾದರೂ ಉಪಕಾರ ಮಾಡಬಹುದು. ಆದರೆ ನಾನು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುವುದಿಲ್ಲ.›

ಆದರೆ ನೀವು ಮೊದಲು ಮಾಡಿದ್ದ ಕೃತ್ಯಗಳಿಂದ ನಿಮಗುಂಟಾದ ಫಲವೇನು? ಈಗ ಅವುಗಳ ವಿಷಯದಲ್ಲಿ ನಿಮಗೆ ನಾಚಿಕೆಯಾಗುತ್ತಿದೆ. ಕೊನೆಗೆ ಅವುಗಳಿಂದ ಬರುವುದು ಮರಣವಲ್ಲವೇ?

ನಾನು ನಿಮ್ಮಿಂದ ದಾನವನ್ನು ಅಪೇಕ್ಷಿಸುವುದಿಲ್ಲ, ನಿಮ್ಮ ಲೆಕ್ಕಕ್ಕೆ ಸಮೃದ್ಧಿಯುಂಟಾಗುವ ಫಲವನ್ನೇ ಅಪೇಕ್ಷಿಸುತ್ತೇನೆ.

ನೀವು ದೇವಜನರಿಗೆ ಉಪಚಾರ ಮಾಡಿದ್ದೀರಿ, ಇನ್ನೂ ಮಾಡುತ್ತಾ ಇದ್ದಿರಿ. ಈ ಕೆಲಸವನ್ನು ಮತ್ತು ಇದರಲ್ಲಿ ನೀವು ಆತನ ನಾಮದ ಕಡೆಗೆ ತೋರಿಸಿದ ಪ್ರೀತಿಯನ್ನು ಆತನು ಮರೆಯುವುದಿಲ್ಲ, ಯಾಕೆಂದರೆ ದೇವರು ಅನೀತಿಯುಳ್ಳವನಲ್ಲ.