TSK

TSK · ಙ್ಞಾನೋಕ್ತಿಗಳು 31:4

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

“ನೀನೂ ಹಾಗು ನಿನ್ನ ಮಕ್ಕಳೂ ದ್ರಾಕ್ಷಾರಸವನ್ನಾಗಲಿ ಅಥವಾ ಮದ್ಯವನ್ನಾಗಲಿ ಕುಡಿದು ದೇವದರ್ಶನದ ಗುಡಾರದೊಳಗೆ ಬರಬಾರದು; ಹಾಗೆ ಬಂದರೆ ಸಾಯುವಿರಿ. ಇದು ನಿನಗೂ ಮತ್ತು ನಿನ್ನ ಸಂತತಿಯವರೆಲ್ಲರಿಗೂ ಶಾಶ್ವತನಿಯಮ.

ತನ್ನ ಅರಸುಗಳ ಸಂಗಡ ಡೇರೆಗಳಲ್ಲಿ ಮದ್ಯಪಾನ ಮಾಡುತ್ತಿದ್ದ ಬೆನ್ಹದದನು ಈ ಉತ್ತರವನ್ನು ಕೇಳುತ್ತಲೇ ಪಟ್ಟಣಕ್ಕೆ ಮುತ್ತಿಗೆ ಹಾಕುವಂತೆ ಸೈನಿಕರಿಗೆ ಆಜ್ಞಾಪಿಸಿದನು. ಅವರು ಹಾಗೆಯೇ ಮಾಡಿದರು.

ಏಳನೆಯ ದಿನದಲ್ಲಿ ಅಹಷ್ವೇರೋಷ ರಾಜನು ದ್ರಾಕ್ಷಾರಸ ಪಾನಮಾಡಿ ಆನಂದಲಹರಿಯಲ್ಲಿದ್ದಾಗ ಬಹು ಸುಂದರಿಯಾದ ತನ್ನ ರಾಣಿಯ ಸೌಂದರ್ಯವನ್ನು ಜನರಿಗೂ, ಸರದಾರರಿಗೂ ತೋರಿಸಬೇಕೆಂದು ಬಯಸಿದನು. ಅವನು ತನ್ನ ಸಾನ್ನಿಧ್ಯಸೇವಕರಾದ ಮೆಹೂಮಾನ್, ಬಿಜೆತಾ, ಹರ್ಬೋನಾ, ಬಿಗೆತಾ, ಅಬಗೆತಾ, ಜೇತರ್, ಕರ್ಕಸ್ ಎಂಬ ಏಳು ಕಂಚುಕಿಗಳಿಗೆ,

ದ್ರಾಕ್ಷಾರಸವು ಪರಿಹಾಸ್ಯ, ಮದ್ಯವು ಕೂಗಾಟ, ಇವುಗಳಿಂದ ದಾರಿತಪ್ಪಿ ಹೋಗುವವನು ಜ್ಞಾನಿಯಲ್ಲ.

ದೇಶದ ಅರಸನು ಕುಲೀನನಾಗಿದ್ದರೆ, ಪ್ರಭುಗಳು ಅಮಲಿಗಾಗಿ ಅಲ್ಲ, ಆದರೆ ಶಕ್ತಿಗಾಗಿ ಸಕಾಲದಲ್ಲಿ ಊಟಕ್ಕೆ ಕುಳಿತರೆ ನಿನಗೆ ಭಾಗ್ಯವೇ!

ಈ ನನ್ನ ಜನರು ಸಹ ದ್ರಾಕ್ಷಾರಸದಿಂದ ಓಲಾಡುತ್ತಾರೆ, ಮದ್ಯದಿಂದ ತೂಗಾಡುತ್ತಾರೆ; ಯಾಜಕ ಪ್ರವಾದಿಗಳೂ ಮದ್ಯದಿಂದ ಓಲಾಡುತ್ತಾರೆ, ದ್ರಾಕ್ಷಾರಸವೇ ಅವರನ್ನು ನುಂಗಿಬಿಟ್ಟಿದೆ, ಮದ್ಯದಿಂದ ತೂಗಾಡುತ್ತಾರೆ.

ವ್ಯಭಿಚಾರ, ದ್ರಾಕ್ಷಾರಸ ಮತ್ತು ಮದ್ಯಗಳು ಬುದ್ಧಿಯನ್ನು ಕೆಡಿಸುತ್ತವೆ.

ಅಲ್ಲದೆ ಮದ್ಯಪಾನವು ಮೋಸಕರವಾದ ಕಾರಣ ದುಷ್ಟನನ್ನು ಮದವೇರಿಸುವುದು, ಸ್ವಸ್ಥಳದಲ್ಲಿ ನಿಲ್ಲಲು ಬಿಡುವುದಿಲ್ಲ; ಪಾತಾಳದಷ್ಟು ಅತಿ ಆಶೆಗೆ ಪ್ರೆರೇಪಿಸಿ ಮೃತ್ಯುವಿನಂತೆ ಅತೃಪ್ತನಾಗಿ ಜೀವಿಸುವನು. ಯೆಹೋವನ ಒಡಂಬಡಿಕೆಯ ವಿರುದ್ಧ ಜೀವಿಸುವವರನ್ನು ತನ್ನ ಕಡೆಗೆ ಆಕರ್ಷಿಸುವನು.