TSK

TSK · ಙ್ಞಾನೋಕ್ತಿಗಳು 4:13

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆ ಪುರುಷನು, “ನನ್ನನ್ನು ಬಿಡು, ಬೆಳಗಾಗುತ್ತಿದೆ” ಎನ್ನಲು, ಯಾಕೋಬನು, “ನೀನು ನನ್ನನ್ನು ಆಶೀರ್ವದಿಸದ ಹೊರತು ನಾನು ನಿನ್ನನ್ನು ಬಿಡುವುದಿಲ್ಲ” ಎಂದನು.

ಜ್ಞಾನವು ತನ್ನನ್ನು ಹಿಡಿದುಕೊಳ್ಳುವವರಿಗೆ ಜೀವವೃಕ್ಷವಾಗಿದೆ. ಅದನ್ನು ಅವಲಂಬಿಸುವ ಪ್ರತಿಯೊಬ್ಬನೂ ಧನ್ಯನು.

ಆಜ್ಞೆಯೇ ದೀಪ, ಉಪದೇಶವೇ ಬೆಳಕು, ಶಿಕ್ಷಣಪೂರ್ವಕವಾದ ಬೋಧನೆಯೇ ಜೀವದ ಮಾರ್ಗ.

ಶಿಕ್ಷೆಯನ್ನು ಕೈಕೊಳ್ಳುವವನು ಜೀವದ ಮಾರ್ಗವನ್ನು ತೋರಿಸುವನು, ಗದರಿಕೆಯನ್ನು ಕೈಕೊಳ್ಳದವನು ಸನ್ಮಾರ್ಗದಿಂದ ತಪ್ಪಿಸುವನು.

ಧನವು ಹೇಗೊ ಹಾಗೆ ಜ್ಞಾನವು ಆಶ್ರಯ. ಜ್ಞಾನಕ್ಕೆ ವಿಶೇಷವೇನೆಂದರೆ ತನ್ನನ್ನು ಹೊಂದಿದವನಿಗೆ ಅದು ಜೀವದಾಯಕವೆಂಬುದೇ.

ಮೋಶೆಯ ಮತ್ತು ಎಲ್ಲಾ ಪ್ರವಾದಿಗಳ ಗ್ರಂಥಗಳು ಮೊದಲುಗೊಂಡು ಸಮಸ್ತ ಗ್ರಂಥಗಳಲ್ಲಿ ತನ್ನ ವಿಷಯವಾಗಿರುವ ಸೂಚನೆಗಳನ್ನು ಅವರಿಗೆ ವಿವರಿಸಿದನು.

ಸೀಮೋನ್ ಪೇತ್ರನು ಆತನಿಗೆ “ಕರ್ತನೇ, ನಾವು ಯಾರ ಬಳಿಗೆ ಹೋಗೋಣ? ನಿನ್ನಲ್ಲಿ ನಿತ್ಯಜೀವದ ವಾಕ್ಯಗಳಿವೆಯಲ್ಲಾ.

¶ ಆದ್ದರಿಂದ ನಾವು ಕೇಳಿದ ಸಂಗತಿಗಳಿಗೆ ತಪ್ಪಿಹೋಗದಂತೆ ಅವುಗಳಿಗೆ ಹೆಚ್ಚಾಗಿ ಲಕ್ಷ್ಯಕೊಡುವವರಾಗಿರಬೇಕು.

ಅವರು ಮರಣದವರೆಗೆ ತಮ್ಮ ಪ್ರಾಣವನ್ನು ಪ್ರೀತಿಸದೆ, ಯಜ್ಞದ ಕುರಿಮರಿಯಾದಾತನ ರಕ್ತದಿಂದಲೂ ತಮ್ಮ ಸಾಕ್ಷಿಯ ವಾಕ್ಯದಿಂದಲೂ ಅವನನ್ನು ಜಯಿಸಿದರು.