ಮೋಡಗಳಿಲ್ಲದ ಪ್ರಾತಃಕಾಲದಲ್ಲಿ ತೇಜೋಮಯನಾಗಿ ಉದಯಿಸಿ, ಮೋಡಗಳನ್ನು ಚದುರಿಸಿಬಿಟ್ಟು, ಮಳೆಬಿದ್ದ ಭೂಮಿಯಿಂದ ಹುಲ್ಲನ್ನು ಮೊಳೆಯಿಸುವ ಸೂರ್ಯನಿಗೆ ಸಮಾನನಾಗಿದ್ದಾನೆ.
TSK
TSK · ಙ್ಞಾನೋಕ್ತಿಗಳು 4:18
Treasury of Scripture Knowledge references in ಕನ್ನಡ IRV.
ಆತನಾದರೋ ನನ್ನ ದಾರಿಯನ್ನು ಬಲ್ಲನು, ಆತನೇ ನನ್ನನ್ನು ಶೋಧಿಸಿ ನೋಡಿದರೆ ಚೊಕ್ಕ ಬಂಗಾರವಾಗಿ ಕಾಣಿಸುವೆನು.
ನೀತಿವಂತರಿಗೋಸ್ಕರ ಬೆಳಕು ಪ್ರಕಾಶಿಸುವುದು, ಯಥಾರ್ಥಹೃದಯವುಳ್ಳವರಿಗೆ ಸಂತೋಷವೂ ಕೊಡಲ್ಪಟ್ಟಿವೆ.
ನೀತಿವಂತನ ಮಾರ್ಗವು ಸಮವಾಗಿದೆ; ನೀನು ಅವನ ದಾರಿಯನ್ನು ಸರಿಪಡಿಸಿ ನೇರಮಾಡುತ್ತಿ.
ಯೆಹೋವನನ್ನು ತಿಳಿದುಕೊಳ್ಳೋಣ, ನಿರಂತರವಾಗಿ ಹುಡುಕಿ ತಿಳಿದುಕೊಳ್ಳೋಣ, ಆತನ ಆಗಮನವು ಉದಯದಂತೆ ನಿಶ್ಚಯ; ಆತನು ಮುಂಗಾರಿನಂತೆಯೂ, ಭೂಮಿಯನ್ನು ತಂಪುಮಾಡುವ ಹಿಂಗಾರಿನಂತೆಯೂ ನಮಗೆ ಸಿಕ್ಕುವನು” ಅಂದುಕೊಂಡು ನನ್ನನ್ನು ಮೊರೆಹೋಗುವರು.
‹ನೀವು ಲೋಕಕ್ಕೆ ಬೆಳಕಾಗಿದ್ದೀರಿ. ಬೆಟ್ಟದ ಮೇಲೆ ಕಟ್ಟಲ್ಪಟ್ಟಿರುವ ಊರು ಮರೆಯಾಗಿರಲಾರದು.›
‹ಹೀಗೆ ಮಾಡಿದರೆ, ನೀವು ಪರಲೋಕದಲ್ಲಿರುವ ನಿಮ್ಮ ತಂದೆಗೆ ಮಕ್ಕಳಾಗುವಿರಿ. ಆತನು ಕೆಟ್ಟವರ ಮೇಲೆಯೂ ಒಳ್ಳೆಯವರ ಮೇಲೆಯೂ ತನ್ನ ಸೂರ್ಯನು ಉದಯಿಸುವಂತೆ ಮಾಡುತ್ತಾನೆ. ನೀತಿವಂತರ ಮೇಲೆಯೂ ಅನೀತಿವಂತರ ಮೇಲೆಯೂ ಮಳೆ ಸುರಿಸುತ್ತಾನೆ.›
ನಾವೆಲ್ಲರೂ ಮುಸುಕು ತೆಗೆದಿರುವ ಮುಖದಿಂದ ಕರ್ತನ ಪ್ರಭಾವವನ್ನು ದರ್ಪಣದಲ್ಲಿ ಕಾಣಿಸುತ್ತದೋ ಎಂಬಂತೆ ದೃಷ್ಟಿಸುವವರಾಗಿದ್ದು ನಾವೆಲ್ಲರೂ ಕರ್ತನ ದಾನವಾಗಿರುವ ಆತ್ಮದ ಮಹಿಮೆಯಿಂದ ಅಧಿಕ ಮಹಿಮೆಗೆ ಹೋಗುತ್ತಾ, ಆ ಮಹಿಮೆಯ ಸಾರೂಪ್ಯವುಳ್ಳವರೇ ಆಗುತ್ತೇವೆ. ಇದು ಆತ್ಮನಾಗಿರುವ ಕರ್ತನ ಕಾರ್ಯವೇ ಸರಿ.
ಇದಲ್ಲದೆ ಪ್ರವಾದನವಾಕ್ಯವು ನಮಗೆ ಬಹುದೃಢವಾಗಿ ದೊರೆತಿದೆ. ಆ ದಿನವು ಅರುಣೋದಯವಾಗುವರೆಗೆ ಮತ್ತು ಉದಯ ನಕ್ಷತ್ರವು ನಿಮ್ಮ ಹೃದಯಗಳಲ್ಲಿ ಮೂಡುವತನಕ ಅದನ್ನು ಕತ್ತಲೆಯಾದ ಸ್ಥಳದಲ್ಲಿ ಪ್ರಕಾಶಿಸುವ ದೀಪವೆಂದೆಣಿಸಿ ಅದಕ್ಕೆ ಲಕ್ಷ್ಯಕೊಟ್ಟರೆ ಒಳ್ಳೆಯದು.
ಪಟ್ಟಣಕ್ಕೆ ಬೆಳಕು ಕೊಡಲು ಸೂರ್ಯನಾಗಲಿ ಚಂದ್ರನಾಗಲಿ ಬೇಕಾಗಿರಲಿಲ್ಲ, ಏಕೆಂದರೆ ಅದಕ್ಕೆ ದೇವರ ಮಹಿಮೆಯೇ ಪ್ರಕಾಶವನ್ನು ಕೊಡುತ್ತಿತ್ತು. ಯಜ್ಞದ ಕುರಿಮರಿಯಾದಾತನೇ ಅದರ ದೀಪವು.