“ಆತನು ತನ್ನ ನಂಬಿಗಸ್ತ ಭಕ್ತರ ಹೆಜ್ಜೆಗಳನ್ನು ಕಾಯುವನು; ಆದರೆ ದುಷ್ಟರನ್ನು ಅಂಧಕಾರದ ಮೌನದಲ್ಲಿ ಮುಳುಗಿಸುವನು, ಭುಜಬಲದಿಂದಲೇ ಯಾವನೂ ಜಯಹೊಂದಲಾರನು.
TSK
TSK · ಙ್ಞಾನೋಕ್ತಿಗಳು 4:19
Treasury of Scripture Knowledge references in ಕನ್ನಡ IRV.
ಅವರು ಬೆಳಕಿಲ್ಲದ ಕತ್ತಲಲ್ಲಿ ತಡಕಾಡುವರು; ಅವರನ್ನು ಅಮಲೇರಿದವರಂತೆ ಓಲಾಡಿಸಿ ತಡವರಿಸುವಂತೆ ಮಾಡುವನು.”
ಅವನನ್ನು ಬೆಳಕಿನಿಂದ ಕತ್ತಲೆಗೆ ನೂಕಿ, ಲೋಕದಿಂದಲೇ ಅಟ್ಟಿಬಿಡುವರು.
ಅವರಾದರೋ ಕತ್ತಲೆಯ ಮಾರ್ಗಗಳನ್ನು ಹಿಡಿಯಬೇಕೆಂದು, ಧರ್ಮಮಾರ್ಗಗಳನ್ನು ತೊರೆದುಬಿಡುವರು.
ಆದಕಾರಣ ಯೆಹೋವನ ನ್ಯಾಯನಿರ್ಣಯವು ನಮಗೆ ದೂರವಾಗಿದೆ. ಆತನ ರಕ್ಷಣಾಧರ್ಮದ ಕಾರ್ಯವು ನಮಗೆ ಲಭಿಸುವುದಿಲ್ಲ; ಬೆಳಕನ್ನು ಎದುರುನೋಡುತ್ತಿರುವ ನಮ್ಮನ್ನು ಕತ್ತಲೆಯೇ ಆವರಿಸಿದೆ, ಜ್ಯೋತಿಯನ್ನು ನಿರೀಕ್ಷಿಸುತ್ತಿರುವ ನಾವು ಅಂಧಕಾರದಲ್ಲೇ ನಡೆಯುತ್ತೇವೆ.
ನಿಮ್ಮ ದೇವರಾದ ಯೆಹೋವನನ್ನು ಘನಪಡಿಸಿರಿ; ಇಲ್ಲದಿದ್ದರೆ ಸ್ವಲ್ಪ ಕಾಲದೊಳಗೆ ಆತನು ಕತ್ತಲನ್ನು ಉಂಟುಮಾಡುವನು. ನಿಮ್ಮ ಕಾಲುಗಳು ಮೊಬ್ಬಿನ ಬೆಟ್ಟಗಳಲ್ಲಿ ಮುಗ್ಗರಿಸುವವು; ನೀವು ಬೆಳಕನ್ನು ನಿರೀಕ್ಷಿಸುತ್ತಿರುವಾಗ ಆತನು ಅದನ್ನು ಮರಣಾಂಧಕಾರದ ಕಾರ್ಗತ್ತಲನ್ನಾಗಿ ಮಾಡುವನು.
‹ಆಗ ನಾನು ಅವರಿಗೆ, ‘ನಿಮ್ಮ ಗುರುತೇ ನನಗಿಲ್ಲ; ದುಷ್ಟತನ ಮಾಡುವ ನೀವು, ನನ್ನಿಂದ ತೊಲಗಿಹೋಗಿರಿ,’ ಎಂದು ಹೇಳಿಬಿಡುವೆನು.›
‹ರಾತ್ರಿಯಲ್ಲಿ ನಡೆದರೆ ತನ್ನಲ್ಲಿ ಬೆಳಕಿಲ್ಲದ್ದರಿಂದ ಅವನು ಎಡವುತ್ತಾನೆ”› ಎಂದು ಉತ್ತರಕೊಟ್ಟನು.
ಆದರೆ ತನ್ನ ಸಹೋದರನನ್ನು ದ್ವೇಷಿಸುವವನು ಕತ್ತಲೆಯಲ್ಲಿದ್ದಾನೆ ಮತ್ತು ಕತ್ತಲೆಯಲ್ಲಿ ನಡೆಯುತ್ತಿದ್ದಾನೆ. ಕತ್ತಲೆಯು ಅವನ ಕಣ್ಣುಗಳನ್ನು ಕುರುಡುಮಾಡಿರುವುದರಿಂದ ತಾನು ಎಲ್ಲಿಗೆ ಹೋಗುತ್ತಿದ್ದೇನೆ ಎಂದು ಅವನಿಗೆ ತಿಳಿಯದು.