TSK

TSK · ಙ್ಞಾನೋಕ್ತಿಗಳು 5:21

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಈಗ ನೀನು ನನ್ನ ಹೆಜ್ಜೆಗಳನ್ನು ಲೆಕ್ಕಿಸಿ, ನನ್ನ ಪಾಪದ ಮೇಲೆ ಕಾವಲಾಗಿದ್ದೀಯಲ್ಲಾ!

ಆತನೇ ನನ್ನ ನಡತೆಯನ್ನು ನೋಡಿ ನನ್ನ ಹೆಜ್ಜೆಗಳನ್ನೆಲ್ಲಾ ಎಣಿಸುತ್ತಿದ್ದಾನೆ ಎಂದುಕೊಳ್ಳುತ್ತಿದ್ದೆನು.

ಯೆಹೋವನು ತನ್ನ ಪರಿಶುದ್ಧಮಂದಿರದಲ್ಲಿದ್ದಾನೆ; ಆತನು ತನ್ನ ಸಿಂಹಾಸನವನ್ನು ಪರಲೋಕದಲ್ಲಿ ಸ್ಥಾಪಿಸಿದ್ದಾನೆ. ಆತನ ಕಣ್ಣುಗಳು ಮಾನವರನ್ನು ನೋಡುತ್ತವೆ; ಆತನು ಅವರನ್ನು ಬಹು ಸೂಕ್ಷ್ಮವಾಗಿ ಪರಿಶೋಧಿಸುತ್ತಾನೆ.

ನಿನ್ನ ನಿಯಮಗಳನ್ನೂ, ಕಟ್ಟಳೆಗಳನ್ನೂ ಅನುಸರಿಸಿದ್ದೇನೆ, ನನ್ನ ನಡತೆಯೆಲ್ಲಾ ನಿನಗೆ ಗೋಚರವಾಗಿದೆ.

ನಾನು ನಡೆಯುವುದನ್ನು, ಮಲಗುವುದನ್ನು ಶೋಧಿಸಿ ಗ್ರಹಿಸಿಕೊಳ್ಳುತ್ತಿ, ನನ್ನ ನಡತೆಯೆಲ್ಲಾ ನಿನಗೆ ಗೋಚರವಾಗಿದೆ.

ನಾನು ಅವರ ನಡತೆಯನ್ನೆಲ್ಲಾ ದೃಷ್ಟಿಸುತ್ತೇನೆ, ಅದು ನನ್ನ ಮುಖಕ್ಕೆ ಮರೆಯಾಗಿಲ್ಲ; ಅವರ ಅಧರ್ಮವು ನನಗೆ ಗುಟ್ಟಾಗಿ ಇಲ್ಲ, ಪ್ರತ್ಯಕ್ಷವಾಗೇ ಇದೆ.

ದೂರದಲ್ಲಿಯೂ ಇರುವವನಲ್ಲವೋ? ನನ್ನ ಕಣ್ಣಿಗೆ ಬೀಳದಂತೆ ಯಾರಾದರೂ ಗುಪ್ತಸ್ಥಳಗಳಲ್ಲಿ ತನ್ನನ್ನು ತಾನೇ ಮರೆಮಾಡಿಕೊಂಡಾನೇ? ನಾನು ಭೂಮ್ಯಾಕಾಶಗಳಲ್ಲಿಯೂ ವ್ಯಾಪಿಸಿರುವವನಲ್ಲವೆ.”

ತಮ್ಮ ದುರ್ಮಾರ್ಗವೆಲ್ಲಾ ಯೆಹೋವನ ಜ್ಞಾಪಕದಲ್ಲಿರುತ್ತದೆ ಎಂದು ಅವರು ಮನದಟ್ಟು ಮಾಡಿಕೊಳ್ಳುವುದಿಲ್ಲ; ಅವರ ದುಷ್ಕೃತ್ಯಗಳು ಈಗ ಅವರನ್ನು ಮುತ್ತಿಕೊಂಡಿವೆ, ನನ್ನ ಕಣ್ಣೆದುರಿಗಿವೆ.

¶ ‹“ಥುವತೈರದಲ್ಲಿರುವ ಸಭೆಯ ದೂತನಿಗೆ ಬರೆ,›‹ಬೆಂಕಿಯ ಜ್ವಾಲೆಯಂತಿರುವ ಕಣ್ಣುಗಳೂ ಹೊಳೆಯುವ ತಾಮ್ರದಂತಿರುವ ಪಾದಗಳುಳ್ಳ ದೇವಕುಮಾರನು ಹೇಳುವುದೇನಂದರೆ,›