TSK

TSK · ಙ್ಞಾನೋಕ್ತಿಗಳು 5:7

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನನ್ನ ಮಗನೇ, ಸುಜ್ಞಾನವನ್ನೂ ಮತ್ತು ಬುದ್ಧಿಯನ್ನೂ ಭದ್ರವಾಗಿಟ್ಟುಕೋ, ನಿನ್ನ ದೃಷ್ಟಿಯು ಅವುಗಳ ಮೇಲೆ ತಪ್ಪದೇ ಇರಲಿ.

ನಿನ್ನ ದೃಷ್ಟಿಯು ಅವುಗಳ ಮೇಲೆ ತಪ್ಪದಿರಲಿ, ಅವುಗಳನ್ನು ನಿನ್ನ ಹೃದಯದೊಳಗೆ ಇಟ್ಟುಕೋ.

ಮಕ್ಕಳೇ, ಈಗ ನನ್ನ ಕಡೆಗೆ ಕಿವಿಗೊಡಿರಿ, ನನ್ನ ಮಾರ್ಗಗಳನ್ನು ಅನುಸರಿಸುವವರು ಧನ್ಯರೇ ಸರಿ.

ಮಾತನಾಡುತ್ತಿರುವಾತನನ್ನು ನೀವು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ ಭೂಮಿಯ ಮೇಲೆ ದೈವೋಕ್ತಿಗಳನ್ನಾಡಿದವನನ್ನು ಅಸಡ್ಡೆಮಾಡಿದವರು ದಂಡನೆಗೆ ತಪ್ಪಿಸಿಕೊಳ್ಳಲಾಗದಿದ್ದರೆ, ಪರಲೋಕದಿಂದ ಮಾತನಾಡುವಾತನನ್ನು ಬಿಟ್ಟು ದೂರವಾಗಿ ನಾವು ಹೋದರೆ ದಂಡನೆಯಿಂದ ಹೇಗೆ ತಪ್ಪಿಸಿಕೊಂಡೆವು?