TSK

TSK · ಙ್ಞಾನೋಕ್ತಿಗಳು 6:12

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ದುಷ್ಟನು ತನ್ನ ಹೃದಯದ ಸಂಕಲ್ಪಗಳು ನೆರವೇರಿತೆಂದು ಕೊಚ್ಚಿಕೊಳ್ಳುತ್ತಾನೆ; ಲಾಭಬಡುಕನು ಯೆಹೋವನನ್ನು ದೂಷಿಸಿ ತಿರಸ್ಕರಿಸುತ್ತಾನೆ.

ಅವನ ಬಾಯಿಂದ ಕೆಡುಕೂ, ವಂಚನೆಯೂ ಬರುತ್ತವೆ; ವಿವೇಕಮಾರ್ಗವನ್ನೂ, ಪರಹಿತವನ್ನೂ ಬಿಟ್ಟೇಬಿಟ್ಟಿದ್ದಾನೆ.

ಇಗೋ, ಅವರ ಬಾಯಿಗಳು ಎಷ್ಟೋ ಮಾತುಗಳನ್ನು ಕಕ್ಕುತ್ತವೆ; ಅವೆಲ್ಲಾ ಹರಿತವಾದ ಕತ್ತಿಗಳಂತಿವೆ, ಅವರು, “ನಮ್ಮನ್ನು ಕೇಳುವವರು ಯಾರು?” ಅಂದುಕೊಳ್ಳುತ್ತಾರೆ.

ಯಾವ ನೀಚವಾದ ಕಾರ್ಯವನ್ನೂ ದೃಷ್ಟಿಸುವುದಿಲ್ಲ; ದುರಾಚಾರವನ್ನು ಹಗೆಮಾಡುತ್ತೇನೆ, ಅದರ ಗೊಡವೆಯೇ ನನಗೆ ಬೇಡ.

ವಕ್ರಬುದ್ಧಿಯವನು ಯೆಹೋವನಿಗೆ ಅಸಹ್ಯನು, ಯಥಾರ್ಥರಿಗೆ ಆತನ ಸ್ನೇಹವು ದೊರೆಯುವುದು.

ಅವನ ಮನಸ್ಸಿನಲ್ಲಿರುವುದು ದ್ರೋಹವೇ; ಯಾವಾಗಲೂ ಕೇಡನ್ನು ಕಲ್ಪಿಸುತ್ತಾನೆ, ಜಗಳದ ಬೀಜವನ್ನು ಬಿತ್ತುತ್ತಾನೆ.

ಧರ್ಮವು ಯಥಾರ್ಥವಂತರನ್ನು ಉದ್ಧರಿಸುವುದು, ವಂಚಕರು ತಮ್ಮ ಆಶಾಪಾಶಕ್ಕೆ ಸಿಕ್ಕಿಬೀಳುವರು.

ಕಣ್ಣನ್ನು ಮುಚ್ಚಿಕೊಳ್ಳುವವನು ಕುಯುಕ್ತಿಯನ್ನು ಕಲ್ಪಿಸುವನು, ತುಟಿಯನ್ನು ಕಚ್ಚುವವನು ಕೇಡನ್ನು ಸಾಧಿಸುವನು.

ಒಂದು ಪುಟ್ಟಿಯಲ್ಲಿ ಫಲ ಕಾಲಕ್ಕೆ ಮುಂಚೆ ಮಾಗಿದ ಹಣ್ಣುಗಳ ಹಾಗೆ ಕಾಣುತ್ತಿದ್ದ ಅತ್ಯುತ್ತಮವಾದ ಅಂಜೂರದ ಫಲಗಳು ತುಂಬಿದ್ದವು. ಇನ್ನೊಂದು ಪುಟ್ಟಿಯಲ್ಲಿ ಯಾರೂ ತಿನ್ನದ ಹಾಗೆ ಬಹಳ ಕೆಟ್ಟು ಕೇವಲ ಅಸಹ್ಯವಾದ ಅಂಜೂರದ ಹಣ್ಣುಗಳು ತುಂಬಿದ್ದವು.

‹ಸರ್ಪ ಸಂತತಿಯವರೇ ನೀವು ಕೆಟ್ಟವರಾಗಿರಲಾಗಿ ಒಳ್ಳೆಯ ಮಾತುಗಳನ್ನಾಡುವುದಕ್ಕೆ ನಿಮ್ಮಿಂದ ಹೇಗಾದೀತು?›‹ಹೃದಯದಲ್ಲಿ ತುಂಬಿರುವುದೇ ಬಾಯಿಂದ ಹೊರಡುವುದು.›

ಇದಲ್ಲದೆ ಅವರು ಮನೆಮನೆಗೆ ತಿರುಗಾಡುತ್ತಾ ಮೈಗಳ್ಳತನವನ್ನು ಕಲಿಯುತ್ತಾರೆ. ಮೈಗಳ್ಳರಾಗುವುದಲ್ಲದೆ, ಹರಟೆಮಾತನಾಡುವವರೂ, ಇತರರ ವಿಷಯಗಳಲ್ಲಿ ತಲೆ ಹಾಕುವವರೂ ಆಗಿ ಆಡಬಾರದ ಮಾತುಗಳನ್ನಾಡುತ್ತಾರೆ.

ಆದಕಾರಣ ಎಲ್ಲಾ ನೀಚತನವನ್ನೂ, ಎಲ್ಲಾ ದುಷ್ಟತನವನ್ನೂ ತೆಗೆದುಹಾಕಿ ಮನಸ್ಸಿನೊಳಗೆ ಬೇರೂರಿರುವ ದೇವರ ವಾಕ್ಯವನ್ನು ನಮ್ರತೆಯಿಂದ ಸ್ವೀಕರಿಸಿರಿ. ಅದು ನಿಮ್ಮ ಆತ್ಮಗಳನ್ನು ರಕ್ಷಿಸುವುದಕ್ಕೆ ಸಾಮರ್ಥ್ಯವುಳ್ಳದ್ದಾಗಿರುತ್ತದೆ.