¶ “ಅವರು, ಹಣ ತೆಗೆದುಕೊಂಡು ನಿರಪರಾಧಿಯನ್ನು ಕೊಂದವನು ಶಾಪಗ್ರಸ್ತನು” ಎನ್ನಲಾಗಿ ಜನರೆಲ್ಲರೂ, “ಆಮೆನ್” ಅನ್ನಬೇಕು.
TSK
TSK · ಙ್ಞಾನೋಕ್ತಿಗಳು 6:17
Treasury of Scripture Knowledge references in ಕನ್ನಡ IRV.
ಅವುಗಳಿಗಾಗಿ ಯೆಹೋವನು ಯೆರೂಸಲೇಮಿನವರನ್ನು ಕ್ಷಮಿಸದೆ ತನ್ನ ಸನ್ನಿಧಿಯಿಂದ ತೆಗೆದುಹಾಕಬೇಕೆಂದಿದ್ದರಿಂದ ಅವರಿಗೆ ಶಿಕ್ಷೆಯಾಯಿತು. ಇದು ಯೆಹೋವನ ಅಪ್ಪಣೆಯ ಪ್ರಕಾರ ನಡೆಯಿತು.
ನಾನಂತು ನಿನ್ನ ಮಹಾಕೃಪೆಯನ್ನು ಹೊಂದಿದವನಾಗಿ ನಿನ್ನ ಮಂದಿರದೊಳಕ್ಕೆ ಪ್ರವೇಶಿಸುವೆನು; ನಿನ್ನಲ್ಲಿಯೇ ಭಯಭಕ್ತಿಯುಳ್ಳವನಾಗಿ, ನಿನ್ನ ಪರಿಶುದ್ಧ ಆಲಯದ ಕಡೆಗೆ ಅಡ್ಡಬೀಳುವೆನು.
ದೀನರನ್ನು ಉದ್ಧರಿಸುವವನೂ, ಗರ್ವದ ಕಣ್ಣುಳ್ಳವರನ್ನು ತಗ್ಗಿಸಿಬಿಡುವವನೂ ನೀನಲ್ಲವೋ?
ಆದುದರಿಂದ ಅವರಿಗೆ ಗರ್ವವು ಕಂಠಮಾಲೆಯಾಗಿದೆ; ಬಲಾತ್ಕಾರವು ಉಡುಪಾಗಿದೆ.
ಯೆಹೋವನೇ, ಸುಳ್ಳು ಬಾಯಿಯೂ, ವಂಚಿಸುವ ನಾಲಿಗೆ ಉಳ್ಳವರಿಂದ ನನ್ನನ್ನು ಬಿಡಿಸು.
ಅವರು, “ನಮ್ಮೊಂದಿಗೆ ಬಾ, ರಕ್ತಕ್ಕಾಗಿ ಹೊಂಚುಹಾಕೋಣ, ನಿರಪರಾಧಿಯನ್ನು ಕಾರಣವಿಲ್ಲದೆಯೇ ಹಿಡಿಯುವುದಕ್ಕೆ ಕಾದಿರೋಣ.
ಸತ್ಯಸಾಕ್ಷಿಯು ಸುಳ್ಳಾಡನು, ಸುಳ್ಳುಸಾಕ್ಷಿಯು ಅಸತ್ಯವನ್ನೇ ಆಡುವನು.
ಉತ್ತಮವಾದ ಮಾತು ಮೂರ್ಖನಿಗೆ ಅಯುಕ್ತ, ಸುಳ್ಳುಮಾತು ಉತ್ತಮನಿಗೆ ಮತ್ತೂ ಅಯುಕ್ತ.
ಸುಳ್ಳು ನಾಲಿಗೆಯವನು ತಾನು ಬಾಧಿಸಿದವರನ್ನೇ ದ್ವೇಷಿಸುವನು, ಕಪಟದ ಬಾಯಿ ನಾಶಕರ.
ನೀವು ನನ್ನ ಕಡೆಗೆ ಪ್ರಾರ್ಥಿಸಲು ಕೈಯೆತ್ತುವಾಗ, ನಿಮ್ಮನ್ನು ನೋಡದಂತೆ ನನ್ನ ಕಣ್ಣುಗಳನ್ನು ಮರೆಮಾಡಿಕೊಳ್ಳುವೆನು. ಹೌದು, ನೀವು ಬಹಳ ಪ್ರಾರ್ಥನೆಗಳನ್ನು ಮಾಡಿದರೂ ನಾನು ಆಲಿಸುವುದಿಲ್ಲ. ನಿಮ್ಮ ಕೈಗಳಲ್ಲಿ ರಕ್ತವು ತುಂಬಿದೆ.
ಅವರ ಮುಖಭಾವವೇ ಅವರಿಗೆ ವಿರುದ್ಧ ಸಾಕ್ಷಿಯಾಗಿದೆ. ತಮ್ಮ ಪಾಪವನ್ನು ಮರೆಮಾಡದೇ ಸೊದೋಮಿನವರಂತೆ ಪ್ರಕಟಿಸುತ್ತಾರೆ. ಅಯ್ಯೋ, ಅವರ ಆತ್ಮದ ಗತಿಯೇ! ತಮಗೆ ತಾವೇ ಕೇಡು ಮಾಡಿಕೊಂಡಿದ್ದಾರೆ.
ನಿಮ್ಮ ಕೈಗಳು ರಕ್ತದಿಂದ ಹೊಲಸಾಗಿವೆ, ನಿಮ್ಮ ಬೆರಳುಗಳು ಅಪರಾಧದಿಂದ ಅಶುದ್ಧವಾಗಿವೆ; ನಿಮ್ಮ ತುಟಿಗಳು ಸುಳ್ಳಾಡುತ್ತವೆ, ನಿಮ್ಮ ನಾಲಿಗೆಯು ಕೆಡುಕನ್ನು ನುಡಿಯುತ್ತದೆ.
‹ಸೈತಾನನು ನಿಮ್ಮ ತಂದೆ, ನೀವು ಆತನಿಗೆ ಸೇರಿದವರಾಗಿದ್ದು ನಿಮ್ಮ ತಂದೆಯ ದುರಾಶೆಗಳನ್ನೇ ನೀವು ಮಾಡಬಯಸುತ್ತೀರಿ. ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯದಲ್ಲಿ ನೆಲೆಗೊಂಡಿಲ್ಲ. ಏಕೆಂದರೆ ಅವನಲ್ಲಿ ಸತ್ಯವೇ ಇಲ್ಲ. ಅವನು ತನ್ನ ಸ್ವಭಾವಕ್ಕನುಸಾರವಾಗಿ ಸುಳ್ಳಾಡುತ್ತಾನೆ, ಏಕೆಂದರೆ ಅವನು ಸುಳ್ಳುಗಾರನೂ ಮತ್ತು ಸುಳ್ಳಿನ ತಂದೆಯೂ ಆಗಿದ್ದಾನೆ.›
‹ಆದರೆ ನಾಯಿಗಳಂತಿರುವವರೂ, ಮಾಟಗಾರರೂ, ಜಾರರೂ, ಕೊಲೆಗಾರರೂ, ವಿಗ್ರಹಾರಾಧಕರೂ, ಸುಳ್ಳನ್ನು ಪ್ರೀತಿಸಿ ಅದನ್ನು ಅಭ್ಯಾಸಮಾಡುವವರೆಲ್ಲರೂ›‹ಹೊರಗಿರುವರು”› ಎಂದು ಹೇಳಿದನು.