TSK

TSK · ಙ್ಞಾನೋಕ್ತಿಗಳು 6:21

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಯೆಹೋವನು ತನ್ನ ಭುಜಬಲದಿಂದ ನಿಮ್ಮನ್ನು ಐಗುಪ್ತ ದೇಶದಿಂದ ಬಿಡಿಸಿದ್ದರಿಂದ ಆತನ ನಿಯಮವನ್ನು ಕುರಿತು ನೀವು ಹೇಳಬೇಕು. ಈ ಆಚರಣೆಯು ನಿಮ್ಮ ಕೈಗಳ ಮೇಲೆ ಗುರುತಾಗಿಯೂ, ಹಣೆಗೆ ಕಟ್ಟಿಕೊಂಡಿರುವ ಜ್ಞಾಪಕಪಟ್ಟಿಯಂತೆಯೂ ಇರಬೇಕು.

ಇವುಗಳನ್ನು ಜ್ಞಾಪಕಾರ್ಥವಾಗಿ ಕೈಗೆ ಕಟ್ಟಿಕೊಳ್ಳಬೇಕು, ಇವು ಹಣೆಗೆ ಕಟ್ಟಿಕೊಳ್ಳುವ ಜ್ಞಾಪಕದ ಪಟ್ಟಿಯಂತೆ ಇರಬೇಕು.

ಜ್ಞಾನವನ್ನು ಬಿಡದಿದ್ದರೆ ಅದು ನಿನ್ನನ್ನು ಕಾಪಾಡುವುದು, ಪ್ರೀತಿಸಿದರೆ, ಅದು ನಿನ್ನನ್ನು ಕಾಯುವುದು.

ಅವುಗಳನ್ನು ನಿನ್ನ ಬೆರಳುಗಳಿಗೆ ಉಂಗುರವಾಗಿ ಧರಿಸಿಕೋ, ಹೃದಯದ ಹಲಗೆಯಲ್ಲಿ ಅವುಗಳನ್ನು ಬರೆದುಕೋ.