ಅವನು ತನ್ನ ಹೆಂಡತಿಯಾದ ಸಾರಳನ್ನು ತಂಗಿಯೆಂದು ಹೇಳಿಕೊಂಡದ್ದರಿಂದ, ಗೆರಾರಿನ ಅರಸನಾದ ಅಬೀಮೆಲೆಕನು ಆಕೆಯನ್ನು ಕರೆಸಿ ತನ್ನ ಮನೆಯಲ್ಲಿ ಇರಿಸಿಕೊಂಡನು.
TSK
TSK · ಙ್ಞಾನೋಕ್ತಿಗಳು 6:29
Treasury of Scripture Knowledge references in ಕನ್ನಡ IRV.
¶ ಅದಕ್ಕೆ ದೇವರು, “ನೀನು, ಇದನ್ನು ಯಥಾರ್ಥ ಮನಸ್ಸಿನಿಂದ ಮಾಡಿದೆ ಎಂಬುದನ್ನು ನಾನು ಬಲ್ಲೆ; ಆದಕಾರಣ ನೀನು ನನಗೆ ವಿರುದ್ಧವಾಗಿ ಪಾಪಮಾಡದಂತೆ ನಾನು ನಿನ್ನನ್ನು ತಡೆದು ಆಕೆಯನ್ನು ಮುಟ್ಟಗೊಡಿಸಲಿಲ್ಲ.
ಪರಸ್ತ್ರೀ ಸಂಗಮದಿಂದ ಅಶುದ್ಧರಾಗಬಾರದು.
ಕೂಡಲೆ ದಾವೀದನು ಒಬ್ಬನನ್ನು ಕರೆದು, “ಆ ಸ್ತ್ರೀ ಯಾರು?” ಎಂದು ವಿಚಾರಿಸಲು ಅವನು, “ಆಕೆಯು ಎಲೀಯಾಮನ ಮಗಳೂ, ಹಿತ್ತಿಯನಾದ ಊರೀಯನ ಹೆಂಡತಿಯೂ ಆಗಿರುವ ಬತ್ಷೆಬೆ ಅಲ್ಲವೇ?” ಎಂದು ಉತ್ತರ ಕೊಟ್ಟನು.
ಹೀಗಿರಲು ನೀನು ಯೆಹೋವನಾದ ನನ್ನ ಆಜ್ಞೆಯನ್ನು ತಿರಸ್ಕರಿಸಿ, ನನ್ನ ದೃಷ್ಟಿಯಲ್ಲಿ ಅನೀತಿಯನ್ನು ಕೆಟ್ಟದ್ದಾಗಿರುವುದನ್ನು ಮಾಡಿದ್ದೇನು? ನೀನು ಹಿತ್ತಿಯನಾದ ಊರೀಯನನ್ನು ಕತ್ತಿಯಿಂದ ಕೊಲ್ಲಿಸಿ, ಅವನ ಹೆಂಡತಿಯನ್ನು ನಿನ್ನ ಹೆಂಡತಿಯನ್ನಾಗಿ ತೆಗೆದುಕೊಂಡಿರುವೆ.
ಅಹಂಕಾರಿಗಳೆಲ್ಲಾ ಯೆಹೋವನಿಗೆ ಅಸಹ್ಯ, ಅವರಿಗೆ ದಂಡನೆ ಖಂಡಿತ.
ನಾನು ಇವುಗಳಿಗಾಗಿ ದಂಡಿಸಬಾರದೋ? ಇಂತಹ ಜನಾಂಗದ ಮೇಲೆ ನನ್ನ ರೋಷವನ್ನು ತೀರಿಸದಿರುವೆನೋ” ಎಂದು ಯೆಹೋವನು ನುಡಿಯುತ್ತಾನೆ.
“ನಾನು ನ್ಯಾಯತೀರಿಸುವುದಕ್ಕೆ ನಿಮ್ಮ ಬಳಿಗೆ ಬರುವೆನು; ಮಾಟಗಾರನು, ವ್ಯಭಿಚಾರಿಯೂ, ಸುಳ್ಳುಸಾಕ್ಷಿ ಹೇಳುವವನು, ಕೂಲಿ ಹಿಡಿದು ಕೂಲಿಯವನನ್ನು ಮೋಸಪಡಿಸುವವನು, ವಿಧವೆಯರನ್ನು ಮತ್ತು ಅನಾಥರನ್ನೂ ಬಾಧಿಸುವವನು, ವಿದೇಶಿಯ ನ್ಯಾಯತಪ್ಪಿಸುವವನು ಅಂತು ನನಗೆ ಹೆದರದಿರುವ ಇವರೆಲ್ಲರಿಗೆ ವಿರುದ್ಧವಾಗಿ ನಾನು ಶೀಘ್ರವಾಗಿ ನ್ಯಾಯತೀರಿಸಿ ಸಾಕ್ಷಿಯಾಗಿರುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.