TSK

TSK · ಙ್ಞಾನೋಕ್ತಿಗಳು 6:32

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಈ ಮನೆಯಲ್ಲಿ ನನಗಿಂತ ಯಾರೂ ದೊಡ್ಡವರಲ್ಲ. ನೀನು ಅವನ ಧರ್ಮಪತ್ನಿಯಾದುದರಿಂದ ನಿನ್ನನ್ನು ಮಾತ್ರ ನನಗೆ ಅಧೀನ ಮಾಡಲಿಲ್ಲ. ಹೀಗಿರುವಲ್ಲಿ ನಾನು ಇಂಥಾ ಮಹಾ ದುಷ್ಟ ಕಾರ್ಯವನ್ನು ಮಾಡಿ ದೇವರಿಗೆ ವಿರೋಧವಾಗಿ ಹೇಗೆ ಪಾಪ ಮಾಡಲಿ?” ಎಂದು ತನ್ನ ದಣಿಯ ಹೆಂಡತಿಗೆ ಉತ್ತರ ಹೇಳಿದನು.

ಅವಳ ಮನೆಯು ಪಾತಾಳಕ್ಕೆ ಇಳಿಯುವ ದಾರಿ, ಅವಳ ಮಾರ್ಗಗಳು ಪ್ರೇತಲೋಕಕ್ಕೆ ಹೋಗುತ್ತವೆ.

ದುಷ್ಟನ ದುಷ್ಕೃತ್ಯಗಳೇ ಅವನನ್ನು ಆಕ್ರಮಿಸುವವು, ಅವನ ಪಾಪಪಾಶಗಳೇ ಅವನನ್ನು ಬಂಧಿಸುವವು.

ಹೋರಿಯು ವಧ್ಯಸ್ಥಾನಕ್ಕೆ ಹೋಗುವ ಹಾಗೂ, ಬೇಡಿಬಿದ್ದಿರುವ ಮೂರ್ಖನು ದಂಡನೆಗೆ ನಡೆಯುವಂತೆಯೂ,

ನಾನು ತಿರುಗಿಕೊಂಡು, ಜ್ಞಾನವನ್ನು ಮತ್ತು ಮೂಲತತ್ವವನ್ನು ಹುಡುಕಿ, ವಿಚಾರಿಸಿ ಗ್ರಹಿಸುವುದಕ್ಕೂ ಅಧರ್ಮವು ಮೂರ್ಖತನ, ಅಜ್ಞಾನವು ಹುಚ್ಚುತನ ಎಂದು ತಿಳಿದುಕೊಳ್ಳುವುದಕ್ಕೂ ಮನಸ್ಸಿಟ್ಟೆನು.

ಕಣ್ಣಿದ್ದರೂ ಕಾಣದ, ಕಿವಿ ಇದ್ದರೂ ಕೇಳದ, ಬುದ್ಧಿಯಿಲ್ಲದ ಮೂಢ ಜನರೇ, ಯೆಹೋವನ ಈ ಮಾತನ್ನು ಕೇಳಿರಿ,

ವ್ಯಭಿಚಾರ, ದ್ರಾಕ್ಷಾರಸ ಮತ್ತು ಮದ್ಯಗಳು ಬುದ್ಧಿಯನ್ನು ಕೆಡಿಸುತ್ತವೆ.