TSK

TSK · ಙ್ಞಾನೋಕ್ತಿಗಳು 8:13

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

“ಇನ್ನು ಮುಂದೆ ಗರ್ವದಿಂದ ಮಾತನಾಡಬೇಡಿರಿ; ಸೊಕ್ಕಿನ ಮಾತು ನಿಮ್ಮ ಬಾಯಿಂದ ಹೊರಡದಿರಲಿ. ದೇವರಾದ ಯೆಹೋವನು ಸರ್ವಜ್ಞನು; ಆತನು ಮನುಷ್ಯರ ಕ್ರಿಯೆಗಳನ್ನು ತೂಗಿನೋಡುವನು.

ನೀನು ದುಷ್ಟತ್ವದಲ್ಲಿ ಸಂತೋಷಿಸುವ ದೇವರಲ್ಲ; ಕೆಟ್ಟದ್ದು ನಿನ್ನ ಬಳಿಯಲ್ಲಿ ತಂಗಲಾರದು.

ಯಾವ ನೀಚವಾದ ಕಾರ್ಯವನ್ನೂ ದೃಷ್ಟಿಸುವುದಿಲ್ಲ; ದುರಾಚಾರವನ್ನು ಹಗೆಮಾಡುತ್ತೇನೆ, ಅದರ ಗೊಡವೆಯೇ ನನಗೆ ಬೇಡ.

ನಿಜವಾಗಿ ನಿನ್ನ ಎಲ್ಲಾ ನಿಯಮಗಳು ನ್ಯಾಯವಾಗಿವೆ ಎಂದು ಒಪ್ಪಿಕೊಂಡಿದ್ದೇನೆ, ಎಲ್ಲಾ ಸುಳ್ಳು ಮಾರ್ಗಗಳನ್ನು ದ್ವೇಷಿಸುತ್ತೇನೆ.

ಸೊಟ್ಟಮಾತುಗಳನ್ನು ನಿನ್ನಿಂದ ತೊಲಗಿಸಿಬಿಡು, ಕೆಟ್ಟ ನುಡಿಗಳನ್ನು ಬಾಯಿಂದ ದೂರಮಾಡು.

ಯೆಹೋವನು ಹಗೆಮಾಡುವ ವಿಷಯಗಳು ಆರು ಇವೆ, ಹೌದು, ಏಳು ಸಂಗತಿಗಳು ಆತನಿಗೆ ಅಸಹ್ಯವಾಗಿ ತೋರುತ್ತವೆ.

ಶಿಷ್ಟನ ಬಾಯಲ್ಲಿ ಜ್ಞಾನವು ಮೊಳೆಯುವುದು, ನೀಚನ ನಾಲಿಗೆ ಕತ್ತರಿಸಲ್ಪಡುವುದು.

ಕೆಟ್ಟದ್ದನ್ನು ದ್ವೇಷಿಸಿರಿ, ಒಳ್ಳೆಯದನ್ನು ಪ್ರೀತಿಸಿರಿ, ಚಾವಡಿಯಲ್ಲಿ ನ್ಯಾಯವನ್ನು ಸ್ಥಾಪಿಸಿರಿ. ಒಂದು ವೇಳೆ ಸೇನಾಧೀಶ್ವರ ದೇವರಾದ ಯೆಹೋವನು ಯೋಸೇಫನ ವಂಶದಲ್ಲಿ ಉಳಿದವರಿಗೆ ಪ್ರಸನ್ನನಾದನು.

ನಿಮ್ಮಲ್ಲಿ ಯಾವನೂ ತನ್ನ ಹೃದಯದಲ್ಲಿ ನೆರೆಯವನಿಗೆ ಕೇಡನ್ನು ಬಗೆಯದಿರಲಿ; ಸುಳ್ಳು ಸಾಕ್ಷಿಗೆ ಎಂದೂ ಸಂತೋಷಪಡಬೇಡಿರಿ; ನಾನು ಇವುಗಳನ್ನೆಲ್ಲಾ ದ್ವೇಷಿಸುವವನಾಗಿದ್ದೇನೆ; ಇದು ಯೆಹೋವನ ನುಡಿ.”

¶ ಯೌವನಸ್ಥರೇ, ಅದೇ ರೀತಿಯಾಗಿ ಹಿರಿಯರಿಗೆ ಅಧೀನರಾಗಿರಿ. ನೀವೆಲ್ಲರೂ ದೀನಮನಸ್ಸೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಸೇವೆ ಮಾಡಿರಿ. ಏಕೆಂದರೆ “ದೇವರು ಅಹಂಕಾರಿಗಳನ್ನು ವಿರೋಧಿಸುತ್ತಾನೆ. ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ.”