ನಿನ್ನ ಪ್ರಜೆಗಳು ಸದಾ ನಿನ್ನ ಮುಂದೆ ನಿಂತುಕೊಂಡು ನಿನ್ನ ಜ್ಞಾನವಾಕ್ಯಗಳನ್ನು ಕೇಳುವ ನಿನ್ನ ಸೇವಕರು ಧನ್ಯರು.
TSK
TSK · ಙ್ಞಾನೋಕ್ತಿಗಳು 8:34
Treasury of Scripture Knowledge references in ಕನ್ನಡ IRV.
ನಿನ್ನ ಆಲಯದ ಅಂಗಳಗಳಲ್ಲಿ ಕಳೆದ ಒಂದು ದಿನವು, ಬೇರೆ ಸಹಸ್ರದಿನಗಳಿಗಿಂತ ಉತ್ತಮವಾಗಿದೆ. ದುಷ್ಟರ ಗುಡಾರಗಳಲ್ಲಿ ವಾಸಿಸುವುದಕ್ಕಿಂತ ನನ್ನ ದೇವರ ಆಲಯದ ಹೊಸ್ತಿಲಲ್ಲಿ ಬಿದ್ದುಕೊಂಡಿರುವುದೇ ಲೇಸು.
ಪೇಟೆಯ ಮುಖ್ಯಸ್ಥಾನದಲ್ಲಿ ಆಕೆ ಕೂಗುತ್ತಾಳೆ, ಊರ ಬಾಗಿಲಿನಲ್ಲಿ ಆಕೆಯು ನುಡಿಯುವುದೇನೆಂದರೆ,
ಜ್ಞಾನವನ್ನು ಪಡೆಯುವವನು ಧನ್ಯನು, ವಿವೇಕವನ್ನು ಸಂಪಾದಿಸುವವನು ಭಾಗ್ಯವಂತನು.
¶ ‹“ಆದುದರಿಂದ, ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ನಡೆಯುವವನು ಬಂಡೆಯ ಮೇಲೆ ಮನೆಯನ್ನು ಕಟ್ಟಿಕೊಂಡ ಬುದ್ಧಿವಂತನಿಗೆ ಹೋಲುವನು.›
ಆಕೆಗೆ ಮರಿಯಳೆಂಬ ಒಬ್ಬ ತಂಗಿ ಇದ್ದಳು. ಈಕೆಯು ಯೇಸುವಿನ ಪಾದಗಳ ಬಳಿಯಲ್ಲಿ ಕುಳಿತುಕೊಂಡು ಆತನ ವಾಕ್ಯವನ್ನು ಕೇಳುತ್ತಿದ್ದಳು.
ಆಗ ಯೇಸು ತನ್ನನ್ನು ನಂಬಿದ ಯೆಹೂದ್ಯರಿಗೆ, ‹“ನೀವು ನನ್ನ ವಾಕ್ಯದಲ್ಲಿ ನೆಲೆಗೊಂಡಿರುವುದಾದರೆ, ನಿಜವಾಗಿಯೂ ನೀವು ನನ್ನ ಶಿಷ್ಯರಾಗಿರುವಿರಿ.›
ಆ ಸಭೆಯವರು ದೇವರ ವಾಕ್ಯವನ್ನು ಸಿದ್ಧ ಮನಸ್ಸಿನಿಂದ ಅಂಗೀಕರಿಸಿ ಇವರು ಹೇಳುವ ಮಾತು ಹೌದೋ ಅಲ್ಲವೋ ಎಂದು ಕಂಡುಕೊಳ್ಳಲು ಪ್ರತಿದಿನವೂ ಶಾಸ್ತ್ರಗ್ರಂಥಗಳನ್ನು ಶೋಧಿಸುತ್ತಿದ್ದದರಿಂದ ಅವರು ಥೆಸಲೋನಿಕದವರಿಗಿಂತ ಸದ್ಗುಣವುಳವರಾಗಿದ್ದರು.