TSK

TSK · ಙ್ಞಾನೋಕ್ತಿಗಳು 9:1

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಇದಲ್ಲದೆ ಸೊಲೊಮೋನನು ಒಂದು ಕಂಬ ಮಂಟಪವನ್ನು ಕಟ್ಟಿಸಿದನು. ಅದರ ಉದ್ದ ಐವತ್ತು ಮೊಳ, ಅಗಲ ಮೂವತ್ತು ಮೊಳ. ಅದರ ಮುಂದುಗಡೆಯಲ್ಲಿ ಒಂದು ಪಡಸಾಲೆಯಿತ್ತು. ಆ ಪಡಸಾಲೆಗೆ ಕಂಬಗಳೂ ಮೆಟ್ಟಲುಗಳೂ ಇದ್ದವು.

ಜ್ಞಾನವೆಂಬಾಕೆಯು ಬೀದಿಗಳಲ್ಲಿ ಕೂಗುತ್ತಾಳೆ, ಚೌಕಗಳಲ್ಲಿ ಧ್ವನಿಮಾಡುತ್ತಾಳೆ.

ಕಂದಾ, ನನ್ನ ಉಪದೇಶವನ್ನು ಮರೆಯಬೇಡ, ನನ್ನ ಆಜ್ಞೆಗಳನ್ನು ಮನಃಪೂರ್ವಕವಾಗಿ ಕೈಗೊಳ್ಳು.

“ಎಲೈ, ಬಾಯಾರಿದ ಸಕಲಜನರೇ, ನೀರಿನ ಬಳಿಗೆ ಬನ್ನಿರಿ, ಹಣವಿಲ್ಲದವನು ಸಹ ಬರಲಿ! ಬನ್ನಿರಿ, ಕೊಂಡುಕೊಳ್ಳಿರಿ, ಊಟ ಮಾಡಿರಿ! ಬಂದು ದ್ರಾಕ್ಷಾರಸವನ್ನೂ, ಹಾಲನ್ನೂ ಹಣಕೊಡದೆ, ಕ್ರಯವಿಲ್ಲದೆ ತೆಗೆದುಕೊಳ್ಳಿರಿ.

ನಾವು ದೇವರ ಜೊತೆಕೆಲಸದವರು. ನೀವು ದೇವರ ಹೊಲವೂ. ದೇವರ ಮಂದಿರವೂ ಆಗಿದ್ದೀರಿ.

ಅಪೊಸ್ತಲರೂ ಪ್ರವಾದಿಗಳೂ ಎಂಬ ಅಡಿಪಾಯದ ಮೇಲೆ ನೀವೂ ಮಂದಿರದೋಪಾದಿಯಲ್ಲಿ ಕಟ್ಟಲ್ಪಟ್ಟಿದ್ದೀರಿ. ಯೇಸು ಕ್ರಿಸ್ತನೇ ಮುಖ್ಯವಾದ ಮೂಲೆಗಲ್ಲು.

ಮನೆಗಿಂತ ಮನೆಕಟ್ಟಿದವನಿಗೆ ಹೆಚ್ಚಾದ ಗೌರವವಿರುವುದರಿಂದ ಮೋಶೆಗಿಂತ ಯೇಸು ಹೆಚ್ಚಾದ ಗೌರವಕ್ಕೆ ಯೋಗ್ಯನೆಂದೆಣಿಸಲ್ಪಟ್ಟಿದ್ದಾನೆ.

‹ಯಾವನು ಜಯಹೊಂದುತ್ತಾನೋ ಅವನನ್ನು ನನ್ನ ದೇವರ ಆಲಯದಲ್ಲಿ›‹ಸ್ತಂಭವಾಗಿ ನಿಲ್ಲಿಸುವೆನು.›‹ಅವನು ಎಂದಿಗೂ ಅಲ್ಲಿಂದ ಕದಲುವುದೇ ಇಲ್ಲ. ಇದಲ್ಲದೆ›‹ನನ್ನ ದೇವರ ಹೆಸರನ್ನು, ನನ್ನ›‹ದೇವರ ಬಳಿಯಿಂದ ಪರಲೋಕದೊಳಗಿಂದ ಇಳಿದುಬರುವ ಹೊಸ ಯೆರೂಸಲೇಮ್ ಪಟ್ಟಣವೆಂಬ ನನ್ನ ದೇವರ ಪಟ್ಟಣದ ಹೆಸರನ್ನೂ,›‹ನನ್ನ ಹೊಸ ಹೆಸರನ್ನೂ ಅವನ ಮೇಲೆ ಬರೆಯುವೆನು.›