TSK

TSK · ಙ್ಞಾನೋಕ್ತಿಗಳು 9:12

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಾನು ನಿಜವಾಗಿ ತಪ್ಪುಮಾಡಿದ್ದರೆ ಆ ತಪ್ಪು ನನ್ನದೇ.

ನೀನು ನೀತಿವಂತನಾಗಿರುವುದು ಸರ್ವಶಕ್ತನಾದ ದೇವರಿಗೆ ಸುಖವೋ? ನಿನ್ನ ನಡತೆಯನ್ನು ಸರಿಪಡಿಸಿಕೊಂಡರೆ ಆತನಿಗೇನು ಲಾಭ?

ನೀನು ಪಾಪಮಾಡಿದ್ದರೆ ಆತನಿಗೆ ಏನು ಮಾಡಿದಂತಾಯಿತು? ನಿನ್ನ ದ್ರೋಹಗಳು ಹೆಚ್ಚಾಗಿದ್ದರೂ ಆತನಿಗೇನು?

ಆದುದರಿಂದ, ನಿಮ್ಮ ಬಂಧನಗಳು ಇನ್ನೂ ಬಿಗಿಯಾಗದಂತೆ ಧರ್ಮನಿಂದೆಯನ್ನು ಬಿಡಿರಿ; ಭೂಮಂಡಲದಲ್ಲೆಲ್ಲಾ ನಿಶ್ಚಿತಪ್ರಳಯವಾಗಲಿ ಎಂದು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ನುಡಿಯುವುದನ್ನು ಕೇಳಿದ್ದೇನೆ.

ಉಳಿದ ಕುಟುಂಬಗಳೆಲ್ಲಾ ಬೇರೆ ಬೇರೆ, ಒಂದೊಂದರಲ್ಲಿಯೂ ಹೆಂಗಸರು, ಗಂಡಸರು ಬೇರೆ ಬೇರೆ, ಹೀಗೆ ಬೇರೆ ಬೇರೆಯಾಗಿಯೇ ಗೋಳಾಡುವರು.

ಅವನು ತನ್ನ ಎಲ್ಲಾ ಪತ್ರಿಕೆಗಳಲ್ಲಿಯೂ ಈ ವಿಷಯಗಳನ್ನು ಕುರಿತು ಹೇಳಿದ್ದಾನೆ. ಆ ಪತ್ರಗಳಲ್ಲಿರುವ ಕೆಲವು ಸಂಗತಿಗಳು ನಿಮಗೆ ಅರ್ಥಮಾಡಿಕೊಳ್ಳುವುದಕ್ಕೆ ಕಠಿಣವಾಗಿವೆ. ಅಜ್ಞಾನಿಗಳೂ, ಚಂಚಲಚಿತ್ತರೂ ಆದವರು ಉಳಿದ ಗ್ರಂಥಗಳ ಹಾಗೆ ಇದನ್ನೂ ತಪ್ಪಾಗಿ ಅರ್ಥ ಕೊಟ್ಟು ತಮಗೆ ನಾಶವನ್ನುಂಟು ಮಾಡಿಕೊಳ್ಳುತ್ತಾರೆ.