TSK

TSK · ಙ್ಞಾನೋಕ್ತಿಗಳು 9:5

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಭೂಲೋಕದಲ್ಲಿರುವ ಪುಷ್ಟರೆಲ್ಲರೂ ಆರಾಧಿಸುವರು; ತಮ್ಮ ಜೀವವನ್ನು ಉಳಿಸಿಕೊಳ್ಳಲಾರದೆ ಮಣ್ಣು ಪಾಲಾಗುವವರೆಲ್ಲರೂ ಆತನಿಗೆ ಅಡ್ಡಬೀಳುವರು.

“ಕದ್ದ ನೀರು ಸಿಹಿಯಾಗಿದೆ, ಗುಟ್ಟಾಗಿ ತಿನ್ನುವ ತಿಂಡಿಯು ರುಚಿಯಾಗಿದೆ” ಎಂದು ಬುದ್ಧಿಹೀನನಿಗೆ ಹೇಳುತ್ತಾಳೆ.

“ಎಲೈ, ಬಾಯಾರಿದ ಸಕಲಜನರೇ, ನೀರಿನ ಬಳಿಗೆ ಬನ್ನಿರಿ, ಹಣವಿಲ್ಲದವನು ಸಹ ಬರಲಿ! ಬನ್ನಿರಿ, ಕೊಂಡುಕೊಳ್ಳಿರಿ, ಊಟ ಮಾಡಿರಿ! ಬಂದು ದ್ರಾಕ್ಷಾರಸವನ್ನೂ, ಹಾಲನ್ನೂ ಹಣಕೊಡದೆ, ಕ್ರಯವಿಲ್ಲದೆ ತೆಗೆದುಕೊಳ್ಳಿರಿ.

ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರ ಮಾಡಿ ಅದನ್ನು ಮುರಿದು ಶಿಷ್ಯರಿಗೆ ಕೊಟ್ಟು, ‹“ತೆಗೆದುಕೊಳ್ಳಿರಿ, ತಿನ್ನಿರಿ, ಇದು ನನ್ನ ದೇಹ”› ಅಂದನು.

‹ನಿಮ್ಮ ಪೂರ್ವಿಕರು ಅಡವಿಯಲ್ಲಿ ಮನ್ನಾ ತಿಂದರೂ ಸತ್ತು ಹೋದರು.›