ತಮ್ಮ ಮರಿಗಳು, ಗುಟುಕಿಲ್ಲದೆ ಅಲೆಯುತ್ತಾ ದೇವರಿಗೆ ಮೊರೆಯಿಡುವಾಗ, ಕಾಗೆಗಳಿಗೆ ಆಹಾರವನ್ನು ಯಾರು ಒದಗಿಸುವರು?”
TSK
TSK · ಕೀರ್ತನೆಗಳು 104:21
Treasury of Scripture Knowledge references in ಕನ್ನಡ IRV.
ಯೋಬನು 38:41
TSK
ಯೆಹೋವನೇ, ಎಲ್ಲಾ ಜೀವಿಗಳ ಕಣ್ಣುಗಳು ನಿನ್ನನ್ನೇ ನೋಡುತ್ತವೆ, ನೀನು ಅವುಗಳಿಗೆ ಹೊತ್ತುಹೊತ್ತಿಗೆ ಆಹಾರಕೊಡುತ್ತಿ.
ಯೆಶಾಯ 31:4
TSK
ಯೆಹೋವನು ನನಗೆ ಹೀಗೆ ಹೇಳಿದ್ದಾನೆ, “ಸಿಂಹವು, ಪ್ರಾಯದ ಸಿಂಹವು, ಬೇಟೆಯ ಮೇಲೆ ಬಿದ್ದು ಗುರುಗುಟ್ಟುತ್ತಿರುವಾಗ ಕಾವಲುಗಾರನ ಕೂಗನ್ನು ಕೇಳಿ, ಕುರುಬರ ಗುಂಪು ಅದಕ್ಕೆ ವಿರುದ್ಧವಾಗಿ ಕೂಡಿಬಂದರೂ ಅದು ಅವರ ಕೂಗಾಟಕ್ಕೆ ಹೆದರದೆ, ಅವರ ಗದ್ದಲದಿಂದ ಹೇಗೆ ಧೈರ್ಯಗುಂದುವುದಿಲ್ಲವೋ ಹಾಗೆಯೇ ಸೇನಾಧೀಶ್ವರನಾದ ಯೆಹೋವನು ಯುದ್ಧಮಾಡಲು ಚೀಯೋನ್ ಪರ್ವತದ ಶಿಖರದ ಮೇಲೆ ಇಳಿಯುವನು.
ಯೋವೇಲ 1:18
TSK
ಅಯ್ಯೋ, ಪಶುಗಳು ಎಷ್ಟೋ ನರಳುತ್ತವೆ! ಮೇವಿಲ್ಲದ ಕಾರಣ ದನದ ಮಂದೆಗಳು ಕಳವಳಗೊಂಡಿವೆ. ಏಕೆಂದರೆ ಅವುಗಳಿಗೆ ಮೇವು ಇಲ್ಲ. ಕುರಿಹಿಂಡುಗಳು ಕಷ್ಟಪಡುತ್ತವೆ.
ಯೋವೇಲ 2:22
TSK
ಕಾಡುಮೃಗಗಳೇ ಅಂಜಬೇಡಿರಿ, ಕಾಡುಗಾವಲಲ್ಲಿ ಹುಲ್ಲು ಮೊಳೆಯುವುದು, ಮರವು ಹಣ್ಣು ಬಿಡುವುದು. ಅಂಜೂರದ ಗಿಡವೂ ದ್ರಾಕ್ಷಾಲತೆಯೂ ಸಾರವತ್ತಾಗಿ ಫಲಿಸುವವು.