1 ಅರಸುಗಳು 8:27
TSK
¶ “ದೇವರು ನಿಜವಾಗಿ ಭೂಲೋಕದಲ್ಲಿ ವಾಸಿಸುವನೋ? ಆಕಾಶವೂ ಉನ್ನತೋನ್ನತವಾದ ಆಕಾಶವೂ ನಿನ್ನ ವಾಸಕ್ಕೆ ಸಾಲದು. ಹೀಗಿರುವಲ್ಲಿ ನಾನು ಕಟ್ಟಿಸಿದ ಈ ಮಂದಿರವು ಹೇಗೆ ಸಾಕಾದೀತು?
TSK
Treasury of Scripture Knowledge references in ಕನ್ನಡ IRV.
¶ “ದೇವರು ನಿಜವಾಗಿ ಭೂಲೋಕದಲ್ಲಿ ವಾಸಿಸುವನೋ? ಆಕಾಶವೂ ಉನ್ನತೋನ್ನತವಾದ ಆಕಾಶವೂ ನಿನ್ನ ವಾಸಕ್ಕೆ ಸಾಲದು. ಹೀಗಿರುವಲ್ಲಿ ನಾನು ಕಟ್ಟಿಸಿದ ಈ ಮಂದಿರವು ಹೇಗೆ ಸಾಕಾದೀತು?
ಏಕೆಂದರೆ ನಿನ್ನ ಕೃಪೆಯು ಆಕಾಶವನ್ನೂ, ನಿನ್ನ ಸತ್ಯತೆಯು ಮುಗಿಲನ್ನೂ ಮುಟ್ಟುವಷ್ಟು ದೊಡ್ಡವಾಗಿವೆ.
ಚೀಯೋನಿನಲ್ಲಿರುವ ಯೆಹೋವನು ದೊಡ್ಡವನು; ಆತನು ಎಲ್ಲಾ ಜನಾಂಗಗಳಲ್ಲಿ ಮಹೋನ್ನತನು.
ಆಹಾ, ಆತನ ಗಣನೆಯಲ್ಲಿ ಜನಾಂಗಗಳು ಕಪಿಲೆಯಿಂದ ಉದುರುವ ತುಂತುರಿನಂತೆಯೂ, ತಕ್ಕಡಿಯಲ್ಲಿನ ಧೂಳಿನ ಹಾಗೂ ಇರುತ್ತವೆ. ಇಗೋ, ದ್ವೀಪಗಳನ್ನು ಅಣುರೇಣುವಿನಂತೆ ಎತ್ತುತ್ತಾನೆ.
ಭೂಮಂಡಲ ನಿವಾಸಿಗಳು ಮಿಡತೆಗಳಂತೆ ಸಣ್ಣಗೆ ಕಾಣಿಸುವಷ್ಟು ಉನ್ನತವಾದ ಆಕಾಶದಲ್ಲಿ ಆತನು ಆಸೀನನಾಗಿದ್ದಾನೆ; ಆಕಾಶಮಂಡಲವನ್ನು ನಾರುಬಟ್ಟೆಯಂತೆ ಹರಡಿ ನಿವಾಸದ ಗುಡಾರದಂತೆ ಎತ್ತಿ ಕಟ್ಟಿದ್ದಾನೆ.