TSK

TSK · ಕೀರ್ತನೆಗಳು 27:13

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅದರ ಕ್ರಯವು ಯಾರಿಗೂ ಗೊತ್ತಿಲ್ಲ, ಭೂಲೋಕದಲ್ಲಿ ಅದನ್ನು ಯಾರೂ ಕಂಡುಕೊಳ್ಳಲಾರರು.

ಸದ್ಭಕ್ತರಿಗೋಸ್ಕರ ನೀನು ಇಟ್ಟುಕೊಂಡಿರುವ ಮೇಲೂ, ಆಶ್ರಿತರಿಗೋಸ್ಕರ ನೀನು ಎಲ್ಲರ ಮುಂದೆ ಮಾಡಿದ ಉಪಕಾರಗಳೂ ಎಷ್ಟೋ ವಿಶೇಷವಾಗಿವೆ.

ದೇವರು ನಿನ್ನನ್ನು ಎಂದಿಗೂ ಏಳದಂತೆ ಕೆಡವಿಬಿಡುವನು; ನಿನ್ನನ್ನು ಹಿಡಿದು ಗುಡಾರದೊಳಗಿಂದ ಕಿತ್ತು ಬೀಸಾಡುವನು; ಆತನು ನಿನ್ನನ್ನು ಜೀವಲೋಕದಿಂದ ಬೇರು ಸಹಿತವಾಗಿ ಕಿತ್ತುಹಾಕುವನು.

ಏಕೆಂದರೆ, ನಾನು ಜೀವದಿಂದ ಬೆಳಕಿನಲ್ಲಿದ್ದು ನಿನಗೆ ನಡೆದುಕೊಳ್ಳಬೇಕೆಂದು ನೀನು ನನ್ನ ಪ್ರಾಣವನ್ನು ಮರಣಕ್ಕೆ ತಪ್ಪಿಸಿ, ನನ್ನ ಪಾದಗಳನ್ನು ಎಡವಿಬೀಳದಂತೆ ಕಾಪಾಡಿದ್ದಿ.

ಯೆಹೋವನೇ, ನಾನು ನಿನಗೆ, “ನೀನೇ ನನ್ನ ಶರಣನೂ, ಜೀವಲೋಕದಲ್ಲಿ ನನ್ನ ಪಾಲೂ ಆಗಿದ್ದಿ” ಎಂದು ಕೂಗಿ ಮೊರೆಯಿಟ್ಟಿದ್ದೇನೆ.

ನಾನು ಇನ್ನು ಜೀವಲೋಕದವನಾಗಿ ಯೆಹೋವನ ದರ್ಶನವನ್ನು ಹೊಂದಿದೆನಲ್ಲಾ, ಇನ್ನು ಭೂಲೋಕ ನಿವಾಸಿಗಳಲ್ಲಿ ಒಬ್ಬನಾಗಿ ಮನುಷ್ಯರನ್ನು ದೃಷ್ಟಿಸಲಾರೆನು.

ನಾನಾದರೋ ವಧೆಗೆ ಒಯ್ಯುವ ಸಾಧು ಕುರಿಗೆ ಸಮಾನನಾಗಿದ್ದೆನು. “ಮರವನ್ನು ಫಲಸಹಿತವಾಗಿ ನಾಶಪಡಿಸೋಣ, ಇವನು ನಿರ್ನಾಮವಾಗುವಂತೆ ಜೀವಲೋಕದಿಂದ ಇವನನ್ನು ನಿರ್ಮೂಲಮಾಡೋಣ” ಎಂದು ಅವರು ನನಗೆ ವಿರುದ್ಧವಾಗಿ ಕುಯುಕ್ತಿಗಳನ್ನು ಕಲ್ಪಿಸಿದ್ದು ನನಗೆ ತಿಳಿದಿರಲಿಲ್ಲ.

¶ ಆದ್ದರಿಂದ ದೇವರ ಕರುಣೆಯಿಂದ ಈ ಸೇವೆಯನ್ನು ಹೊಂದಿದವರಾದ ನಾವು ಧೈರ್ಯಗೆಟ್ಟು ಹಿಂಜರಿಯುವುದಿಲ್ಲ.

¶ ಆದ್ದರಿಂದ ನಾವು ಧೈರ್ಯಗೆಡುವುದಿಲ್ಲ. ನಮ್ಮ ದೇಹವು ನಾಶವಾಗುತ್ತಾ ಇದ್ದರೂ ನಮ್ಮ ಅಂತರಂಗವು ದಿನೇ ದಿನೇ ಹೊಸದಾಗುತ್ತಾ ಬರುತ್ತದೆ.