TSK

TSK · ಕೀರ್ತನೆಗಳು 33:13

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ದೇವರು ಭೂಮಿಯನ್ನು ನೋಡಿದಾಗ ಅದು ಕೆಟ್ಟುಹೋಗಿ ಕಲುಷಿತಗೊಂಡಿತ್ತು. ಭೂನಿವಾಸಿಗಳೆಲ್ಲರೂ ತಮ್ಮ ನಡವಳಿಕೆಯನ್ನು ಕೆಡಿಸಿಕೊಂಡಿದ್ದರು.

ಆತನೇ ವ್ಯರ್ಥ ಜನರನ್ನು ತಿಳಿದುಕೊಳ್ಳುವನು; ಯಾವ ವಿಮರ್ಶೆಯೂ ಇಲ್ಲದೆ ಅಧರ್ಮವನ್ನು ಕಂಡು ಹಿಡಿಯುವನು.

ಯೆಹೋವನು ತನ್ನ ಪರಿಶುದ್ಧಮಂದಿರದಲ್ಲಿದ್ದಾನೆ; ಆತನು ತನ್ನ ಸಿಂಹಾಸನವನ್ನು ಪರಲೋಕದಲ್ಲಿ ಸ್ಥಾಪಿಸಿದ್ದಾನೆ. ಆತನ ಕಣ್ಣುಗಳು ಮಾನವರನ್ನು ನೋಡುತ್ತವೆ; ಆತನು ಅವರನ್ನು ಬಹು ಸೂಕ್ಷ್ಮವಾಗಿ ಪರಿಶೋಧಿಸುತ್ತಾನೆ.

ಮನುಷ್ಯರಲ್ಲಿ ತನ್ನ ಸಾನ್ನಿಧ್ಯವನ್ನು ಅಪೇಕ್ಷಿಸುವ ಬುದ್ಧಿವಂತರು ಇದ್ದಾರೋ ಎಂದು ದೇವರು ಆಕಾಶದಿಂದ ಮನುಷ್ಯರನ್ನು ನೋಡಲಾಗಿ,

“ಯೆಹೋವನು ತನ್ನ ಮಹೋನ್ನತವಾದ ಪವಿತ್ರಸ್ಥಾನದಿಂದ ಕೆಳಕ್ಕೆ ನೋಡಿದ್ದಾನೆ; ಆತನು ಪರಲೋಕದಿಂದ ಭೂಮಿಯನ್ನು ದೃಷ್ಟಿಸಿದ್ದಾನೆ.

ಯೆಹೋವನು ಇಂತೆನ್ನುತ್ತಾನೆ, “ನಾನು ಸಮೀಪದಲ್ಲಿ ಮಾತ್ರ ಇರುವ ದೇವರೋ?

ಆತನ ದೃಷ್ಟಿಗೆ ಮರೆಯಾಗಿರುವ ಒಂದು ಸೃಷ್ಟಿಯೂ ಇಲ್ಲ. ಆತನ ಕಣ್ಣಿಗೆ ಮರೆಯಾದದ್ದು ಒಂದೂ ಇಲ್ಲ ಎಲ್ಲವೂ ನಗ್ನವಾಗಿಯೂ ಬಟ್ಟಬಯಲಾಗಿಯೂ ಇದೆ. ಅಂಥವನಿಗೆ ನಾವು ಲೆಕ್ಕಕೊಡಬೇಕಾಗಿದೆ.