ಆತನ ಪರಿಶುದ್ಧನಾಮದಲ್ಲಿ ಸಂತೋಷಪಡಿರಿ; ಯೆಹೋವನ ದರ್ಶನವನ್ನು ಕೋರುವವರ ಹೃದಯವು ನಿತ್ಯವೂ ಅಪೇಕ್ಷಿಸಿ ಹರ್ಷಿಸಲಿ.
TSK
TSK · ಕೀರ್ತನೆಗಳು 33:21
Treasury of Scripture Knowledge references in ಕನ್ನಡ IRV.
ಕೀರ್ತನೆಗಳು 13:5
TSK
ನಾನಂತೂ ನಿನ್ನ ಕೃಪೆಯಲ್ಲಿ ಭರವಸವಿಟ್ಟಿದ್ದೇನೆ; ನೀನು ನನ್ನನ್ನು ರಕ್ಷಿಸಿದ್ದರಿಂದ ನನ್ನ ಹೃದಯವು ಹರ್ಷಗೊಳ್ಳುವುದು.
ಕೀರ್ತನೆಗಳು 30:10
TSK
ಯೆಹೋವನೇ, ನನ್ನ ಪ್ರಾರ್ಥನೆಯನ್ನು ಕೇಳಿ ಕರುಣಿಸು; ಯೆಹೋವನೇ, ನನ್ನ ಸಹಾಯಕ್ಕೆ ಬಾ” ಎಂದು ಹೇಳಿದೆನು.
ಯೆಶಾಯ 25:9
TSK
ಆ ದಿನದಲ್ಲಿ ಜನರು, “ಆಹಾ, ಈತನೇ ನಮ್ಮ ದೇವರು, ನಮ್ಮನ್ನು ರಕ್ಷಿಸಲಿ ಎಂದು, ಈತನನ್ನು ನಿರೀಕ್ಷಿಸಿಕೊಂಡಿದ್ದೇವೆ; ಈತನ ರಕ್ಷಣೆಯಲ್ಲಿ ಆನಂದಿಸಿ ಉಲ್ಲಾಸಪಡುವೆವು” ಎಂದು ಹೇಳಿಕೊಳ್ಳುವರು.
ಲೂಕನು 1:47
TSK
ನನ್ನ ಆತ್ಮವು ನನ್ನ ರಕ್ಷಕನಾದ ದೇವರಲ್ಲಿ ಉಲ್ಲಾಸಗೊಂಡಿದೆ.
ಪ್ರಕಟನೆ 4:8
TSK
ಆ ನಾಲ್ಕು ಜೀವಿಗಳಿಗೆ ಒಂದೊಂದಕ್ಕೆ ಆರಾರು ರೆಕ್ಕೆಗಳಿದ್ದವು. ಸುತ್ತಲೂ ಒಳಗೂ ತುಂಬಾ ಕಣ್ಣುಗಳಿದ್ದವು. ಆ ಜೀವಿಗಳು ಹಗಲಿರುಳು ವಿಶ್ರಮಿಸಿಕೊಳ್ಳದೆ, “ದೇವರಾದ ಕರ್ತನು ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು, ಆತನು ಸರ್ವಶಕ್ತನು, ಇರುವಾತನು, ಇದ್ದಾತನು, ಬರುವಾತನು” ಎಂದು ಹೇಳುತ್ತಿದ್ದವು.