TSK

TSK · ಕೀರ್ತನೆಗಳು 39:5

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಅದಕ್ಕೆ ಬರ್ಜಿಲ್ಲೈಯು, “ಇಷ್ಟು ವಯಸ್ಸು ಕಳೆದವನಾದ ನಾನು ಅರಸನ ಸಂಗಡ ಯೆರೂಸಲೇಮಿಗೆ ಬರುವುದು ಹೇಗೆ

ನನ್ನ ದಿನಗಳು ಓಟಗಾರನಿಗಿಂತ ಶೀಘ್ರವಾಗಿರುತ್ತವೆ. ಯಾವ ಸುಖವನ್ನೂ ಕಾಣದೆ ಓಡಿ ಹೋಗುತ್ತವೆ.

ನೀನು ನರನನ್ನು ಪಾಪದ ನಿಮಿತ್ತ ಗದರಿಸಿ ಶಿಕ್ಷಿಸುವಾಗ, ಅವನ ಚೆಲುವಿಕೆಯು ನುಸಿ ಹತ್ತಿತೋ ಎಂಬಂತೆ ಹಾಳಾಗಿ ಹೋಗುತ್ತದೆ. ಮನುಷ್ಯನೆಂಬವನು ಬರಿ ಉಸಿರೇ. ಸೆಲಾ

ನನ್ನ ಆಯುಷ್ಯವು ಎಷ್ಟು ಅಲ್ಪವೆಂದೂ, ಎಂಥಾ ವ್ಯರ್ಥ ಜೀವಿತಕ್ಕಾಗಿ ಮನುಷ್ಯರನ್ನು ನಿರ್ಮಿಸಿದ್ದಿ ಎಂದೂ ಜ್ಞಾಪಿಸಿಕೋ.

ನಿನ್ನ ರೋಷದಿಂದ ನಮ್ಮ ಕಾಲವೆಲ್ಲಾ ಕಳೆದು ಹೋಯಿತು; ನಮ್ಮ ವರ್ಷಗಳು ನಿಟ್ಟುಸಿರಿನಂತೆ ತೀರಿಹೋದವು.

ಮನುಷ್ಯನು ಬರೀ ಉಸಿರೇ, ಅವನ ಜೀವಕಾಲವು ಬೇಗನೆ ಗತಿಸಿಹೋಗುವ ನೆರಳಿನಂತಿದೆ.

ಆಗ ನನ್ನ ಕೈಯಿಂದ ನಡೆಸಿದ ಎಲ್ಲಾ ಕೆಲಸಗಳನ್ನೂ, ನಾನು ಪಟ್ಟ ಪ್ರಯಾಸಗಳನ್ನೂ ಗಮನವಿಟ್ಟು ಪರಿಶೀಲಿಸಿದೆ, ಆಹಾ ಗಾಳಿಯನ್ನು ಹಿಂದಟ್ಟಿದ ಹಾಗೆ ಸಮಸ್ತವೂ ವ್ಯರ್ಥವಾಯಿತು. ಸೂರ್ಯನ ಕೆಳಗೆ ಯಾವ ಲಾಭವೂ ಕಾಣಲಿಲ್ಲ.

ನಾಳೆ ಏನಾಗುವುದೋ ನಿಮಗೆ ತಿಳಿಯದು. ನಿಮ್ಮ ಜೀವಮಾನವು ಎಂಥದ್ದು? ನೀವು ಸ್ವಲ್ಪ ಹೊತ್ತು ಕಾಣಿಸಿಕೊಂಡು ಆಮೇಲೆ ಕಾಣದೆ ಹೋಗುವ ಹಬೆಯಂತಿದ್ದೀರಿ.