ಯೆಹೋವನು ನಿಮ್ಮ ಮೇಲೆ ಕೃಪಾಕಟಾಕ್ಷವಿಟ್ಟು ಶಾಂತಿಯನ್ನು ಅನುಗ್ರಹಿಸಲಿ’ ಎಂಬುದೇ.
TSK
TSK · ಕೀರ್ತನೆಗಳು 4:6
Treasury of Scripture Knowledge references in ಕನ್ನಡ IRV.
ಅವನಿಗೆ ಶಾಶ್ವತವಾದ ಸೌಭಾಗ್ಯನಿಧಿಯನ್ನು ದಯಪಾಲಿಸಿದ್ದೀ; ಅವನನ್ನು ನಿನ್ನ ಸನ್ನಿಧಿಯಲ್ಲಿ ಅತ್ಯಾನಂದಪಡಿಸಿದ್ದೀ.
ನನ್ನ ಮನವೇ, ನೀನು ಕುಗ್ಗಿ ಹೋಗಿರುವುದೇನು? ಹೀಗೆ ವ್ಯಥೆಪಡುವುದೇಕೆ? ದೇವರನ್ನು ನಿರೀಕ್ಷಿಸು; ಆತನೇ ನನಗೆ ರಕ್ಷಕನೂ ದೇವರೂ ಆಗಿದ್ದಾನೆ. ನಾನು ಇನ್ನೂ ಆತನನ್ನು ಸ್ತುತಿಸುತ್ತಿರುವೆನು.
ಒಬ್ಬನ ಐಶ್ವರ್ಯವೂ, ಗೃಹವೈಭವವೂ ವೃದ್ಧಿಯಾದಾಗ ಕಳವಳಪಡಬೇಡ.
ಇಸ್ರಾಯೇಲರನ್ನು ಕಾಯುವ ಕುರುಬನೇ, ಕಿವಿಗೊಡು; ಯೋಸೇಫನ ವಂಶದವರನ್ನು ಕುರಿಹಿಂಡಿನಂತೆ ಕರೆತಂದವನೇ, ಕೆರೂಬಿಯರ ಮಧ್ಯದಲ್ಲಿ ಆಸೀನನಾಗಿರುವಾತನೇ, ಪ್ರಕಾಶಿಸು.
ಸೇನಾಧೀಶ್ವರನಾದ ಯೆಹೋವ ದೇವರೇ, ನಮ್ಮನ್ನು ತಿರುಗಿ ಉನ್ನತಸ್ಥಿತಿಗೇರಿಸು. ಪ್ರಸನ್ನಮುಖದಿಂದ ನೋಡು; ಆಗ ಉದ್ಧಾರವಾಗುವೆವು.
ನಿನ್ನ ದಾಸನ ಮೇಲೆ ನಿನ್ನ ಮುಖಪ್ರಸನ್ನತೆಯಿರಲಿ, ನಿನ್ನ ನಿಬಂಧನೆಗಳನ್ನು ನನಗೆ ಕಲಿಸು.
ಆಹಾರವಲ್ಲದ್ದಕ್ಕೆ ಹಣವನ್ನು ಏಕೆ ವ್ಯರ್ಥ ಮಾಡುತ್ತೀರಿ? ತೃಪ್ತಿಗೊಳಿಸದ ಪದಾರ್ಥಕ್ಕೆ ನಿಮ್ಮ ದುಡಿತವನ್ನು ವೆಚ್ಚಮಾಡುವುದೇಕೆ? ಕಿವಿಗೊಟ್ಟು ನನ್ನ ಮಾತನ್ನು ಕೇಳಿರಿ, ಒಳ್ಳೆಯದನ್ನೇ ಉಂಡು ಮೃಷ್ಟಾನ್ನದಲ್ಲಿ ಆನಂದಪಡಿರಿ.
‹ನನ್ನ ಜೀವಾತ್ಮಕ್ಕೆ, ಜೀವವೇ, ಅನೇಕ ವರ್ಷಗಳಿಗೆ ಬೇಕಾದಷ್ಟು ಸರಕು ನಿನಗೆ ಬಂದಿದೆ, ವಿಶ್ರಮಿಸಿಕೋ, ಊಟಮಾಡು, ಕುಡಿ, ಸುಖಪಡು ಎಂದು ಹೇಳುವೆನು’ ಅಂದುಕೊಂಡನು.›
¶ “ಈಹೊತ್ತು ಇಲ್ಲವೆ ನಾಳೆ ನಾವು ಇಂಥ ಪಟ್ಟಣಕ್ಕೆ ಹೋಗಿ ಅಲ್ಲಿ ಒಂದು ವರ್ಷವಿದ್ದು ವ್ಯಾಪಾರ ಮಾಡಿ ಲಾಭವನ್ನು ಸಂಪಾದಿಸುತ್ತೇವೆ” ಎನ್ನುವವರೇ ಕೇಳಿರಿ.