ನನ್ನ ಉಪದೇಶವು ಹಸಿಹುಲ್ಲಿನ ಮೇಲೆ ಮೆಲ್ಲಗೆ ಸುರಿಯುವ ಮಳೆಯ ತುಂತುರುಗಳಂತೆ ತಣ್ಣಗಿರುವುದು; ನನ್ನ ಬೋಧನೆಯು ಮಂಜಿನಂತೆಯೂ ಮತ್ತು ಕಾಯಿಪಲ್ಯಗಳ ಮೇಲೆ ಬೀಳುವ ಹದಮಳೆಯಂತೆಯೂ ಹಿತವಾಗಿರುವುದು.
TSK
TSK · ಕೀರ್ತನೆಗಳು 49:3
Treasury of Scripture Knowledge references in ಕನ್ನಡ IRV.
ಇಲ್ಲವಾದರೆ ನೀನೇ ನನಗೆ ಕಿವಿಗೊಟ್ಟು ಮೌನವಾಗಿರು, ನಾನು ನಿನಗೆ ಜ್ಞಾನವನ್ನು ಬೋಧಿಸುವೆನು.”
ಯೆಹೋವನೇ ನನ್ನ ಶರಣನೇ, ನನ್ನ ವಿಮೋಚಕನೇ, ನನ್ನ ಮಾತುಗಳೂ ಮತ್ತು ನನ್ನ ಹೃದಯದ ಧ್ಯಾನವೂ ನಿನಗೆ ಸಮರ್ಪಕವಾಗಿರಲಿ.
ಒಂದು ದಿವ್ಯ ವಿಷಯವನ್ನು ಹೇಳುವುದಕ್ಕೆ ನನ್ನ ಹೃದಯವು ತವಕಪಡುತ್ತದೆ; ನಾನು ರಾಜನನ್ನು ಕುರಿತು ಈ ಪದ್ಯವನ್ನು ರಚಿಸುವೆನು. ನನ್ನ ನಾಲಿಗೆಯು ಒಳ್ಳೆಯ ಬರಹಗಾರನ ಲೇಖನಿಯಂತೆ ಸಿದ್ಧವಾಗಿದೆ.
ನಿನ್ನ ವಾಕ್ಯವಿವರಣೆ ಬೆಳಕನ್ನು ಕೊಡುತ್ತದೆ, ಸರಳ ಹೃದಯರಿಗೆ ವಿವೇಚನೆಯನ್ನು ನೀಡುತ್ತದೆ.
ಕೇಳಿರಿ, ನಾನು ಶ್ರೇಷ್ಠವಾದ ಸಂಗತಿಗಳನ್ನು ಹೇಳುವೆನು, ಯಥಾರ್ಥಕ್ಕಾಗಿಯೇ ತುಟಿಗಳನ್ನು ತೆರೆಯುವೆನು,
ಸತ್ಯವಚನಗಳು ಎಷ್ಟೋ ಯಥಾರ್ಥವೆಂದು ನೀನು ತಿಳಿದುಕೊಂಡು, ನಿನ್ನನ್ನು ಕಳುಹಿಸಿದವರಿಗೆ ಸತ್ಯವಚನಗಳನ್ನೇ ಅರಿಕೆ ಮಾಡುವಂತೆ,
ಚಿಕ್ಕಂದಿನಿಂದಲೂ ನಿನಗೆ ಪರಿಶುದ್ಧ ಗ್ರಂಥಗಳ ಪರಿಚಯವಾಗಿದೆಯಲ್ಲಾ. ಆ ಗ್ರಂಥಗಳು ಕ್ರಿಸ್ತಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆಹೊಂದುವ ಜ್ಞಾನವನ್ನು ನಿನಗೆ ಕೊಡುವುದಕ್ಕೆ ಶಕ್ತವಾಗಿವೆ.