ಇದಲ್ಲದೆ ನಾನು ಈಗ ಸೇವೆಮಾಡಬೇಕೆಂದಿರುವುದು ರಾಜಪುತ್ರನ ಸನ್ನಿಧಿಯಲ್ಲಿ ಅಲ್ಲವೇ? ನಿನ್ನ ತಂದೆಯ ಸನ್ನಿಧಿಯಲ್ಲಿ ಸೇವೆ ಸಲ್ಲಿಸಿದಂತೆ ನಿನ್ನ ಸನ್ನಿಧಿಯಲ್ಲಿಯೂ ಸೇವೆ ಸಲ್ಲಿಸುವೆನು” ಎಂದು ಉತ್ತರ ಕೊಟ್ಟನು.
TSK
TSK · ಕೀರ್ತನೆಗಳು 55:21
Treasury of Scripture Knowledge references in ಕನ್ನಡ IRV.
ಪ್ರತಿಯೊಬ್ಬರು ನೆರೆಯವರೊಡನೆ ಸುಳ್ಳನ್ನಾಡುತ್ತಾರೆ, ಅವರು ವಂಚನೆಯ ತುಟಿಗಳಿಂದ ಹೊರಗೊಂದು ಒಳಗೊಂದು ಮಾತನಾಡುತ್ತಾರೆ.
ನಾನು ಸಿಂಹಗಳಂತಿರುವ ಶತ್ರುಗಳ ಮಧ್ಯದಲ್ಲಿ ಸಿಕ್ಕಿದ್ದೇನೆ; ದುರಾಶೆಯಿಂದ ಕಬಳಿಸುವಂತಹ ಮನುಷ್ಯರ ನಡುವೆ ಬಿದ್ದಿದ್ದೇನೆ. ಅವರ ಹಲ್ಲುಗಳು ಈಟಿ ಮತ್ತು ಬಾಣಗಳಂತಿವೆ, ನಾಲಿಗೆಗಳು ಹದವಾದ ಕತ್ತಿಗಳೇ.
ಅವನನ್ನು ಉನ್ನತಸ್ಥಾನದಿಂದ ದೊಬ್ಬುವುದೇ ಅವರ ಆಲೋಚನೆ. ಸುಳ್ಳಾಡುವುದು ಅವರಿಗೆ ಅತಿಸಂತೋಷ; ಬಾಯಿಂದ ಹರಸಿ ಮನಸ್ಸಿನಿಂದ ಶಪಿಸುತ್ತಾರೆ. ಸೆಲಾ
ವೇಶ್ಯಸ್ತ್ರೀಯ ತುಟಿಗಳಲ್ಲಾದರೋ ಜೇನುಗರೆಯುವುದು, ಅವಳ ಮಾತು ಎಣ್ಣೆಗಿಂತಲೂ ನಯವಾಗಿದೆ.
ಶತ್ರುವು ಸ್ನೇಹಭಾವದಿಂದ ನಟಿಸುತ್ತಾನೆ, ಅಂತರಂಗದಲ್ಲಿ ಬರೀ ಮೋಸವನ್ನು ಇಟ್ಟುಕೊಂಡಿದ್ದಾನೆ.
ಸುಳ್ಳು ನಾಲಿಗೆಯವನು ತಾನು ಬಾಧಿಸಿದವರನ್ನೇ ದ್ವೇಷಿಸುವನು, ಕಪಟದ ಬಾಯಿ ನಾಶಕರ.
ಆಮೇಲೆ ಅವರು ಯೇಸುವನ್ನು ಅಧಿಪತಿಯ ವಶಕ್ಕೂ ಅಧಿಕಾರಿಗಳಿಗೂ ಒಪ್ಪಿಸಬೇಕೆಂದು ಹೊಂಚು ಹಾಕುತ್ತಾ, ನೀತಿವಂತರಂತೆ ನಟಿಸುತ್ತಿರುವ ಗೂಢಚಾರರನ್ನು ಆತನ ಮಾತಿನಲ್ಲಿ ಏನನ್ನಾದರೂ ತಪ್ಪುಗಳನ್ನು ಕಂಡುಹಿಡಿಯುವುದಕ್ಕೆ (ಆತನ ಬಳಿಗೆ) ಕಳುಹಿಸಿದರು.