All books in ಕನ್ನಡ IRV

ಕೀರ್ತನೆಗಳು 6

ಕನ್ನಡ IRV · chapter 6

150 ಅಧ್ಯಾಯಗಳು

1 ಯೆಹೋವನೇ, ಕೋಪದಿಂದ ನನ್ನನ್ನು ಗದರಿಸಬೇಡ; ರೋಷದಿಂದ ನನ್ನನ್ನು ದಂಡಿಸಬೇಡ.

2 ಯೆಹೋವನೇ, ಕನಿಕರಿಸು; ನಾನು ನಿಶ್ಶಕ್ತನಾಗಿ ಹೋಗಿದ್ದೇನೆ. ಯೆಹೋವನೇ, ವಾಸಿಮಾಡು; ನನ್ನ ಎಲುಬುಗಳೆಲ್ಲಾ ಅದುರುತ್ತವೆ.

3 ನನ್ನ ಪ್ರಾಣವು ಸಹ ಬಹಳವಾಗಿ ತತ್ತರಿಸುತ್ತದೆ. ಯೆಹೋವನೇ, ಎಷ್ಟರ ವರೆಗೆ ನನ್ನನ್ನು ಕೈಬಿಟ್ಟಿರುವಿ?

4 ಯೆಹೋವನೇ, ಹಿಂತಿರುಗು, ನನ್ನನ್ನು ಬಿಡಿಸು; ನಿನ್ನ ಕೃಪೆಯ ನಿಮಿತ್ತ ನನ್ನನ್ನು ರಕ್ಷಿಸು.

5 ಮೃತರಿಗೆ ನಿನ್ನ ಜ್ಞಾಪಕವಿರುವುದಿಲ್ಲವಲ್ಲಾ; ಪಾತಾಳದಲ್ಲಿ ನಿನ್ನನ್ನು ಸ್ತುತಿಸುವವರು ಯಾರು?

6 ನಾನು ನರಳಿ ನರಳಿ ದಣಿದಿದ್ದೇನೆ; ಪ್ರತಿರಾತ್ರಿಯೂ ನನ್ನ ಮಂಚವು ಕಣ್ಣೀರಿನಿಂದ ತೇಲಾಡುತ್ತದೆ. ಹಾಸಿಗೆಯು ಕಣ್ಣೀರಿನಿಂದ ನೆನದುಹೋಗುತ್ತದೆ.

7 ದುಃಖದಿಂದ ನನ್ನ ಕಣ್ಣು ಬತ್ತಿ ಹೋಯಿತು; ವಿರೋಧಿಗಳ ಬಾಧೆಯ ದೆಸೆಯಿಂದಲೇ ಅವು ಮೊಬ್ಬಾಯಿತು.

8 ಧರ್ಮವನ್ನು ಮೀರಿ ನಡೆಯುವವರೇ, ನೀವೆಲ್ಲರೂ ನನ್ನಿಂದ ತೊಲಗಿಹೋಗಿರಿ; ಯೆಹೋವನು ನನ್ನ ಗೋಳಾಟಕ್ಕೆ ಕಿವಿಗೊಟ್ಟಿದ್ದಾನೆ.

9 ಆತನು ನನ್ನ ವಿಜ್ಞಾಪನೆಯನ್ನು ಕೇಳಿದ್ದಾನಲ್ಲಾ; ನನ್ನ ಪ್ರಾರ್ಥನೆಯನ್ನು ಅಂಗೀಕರಿಸುವನು.

10 ನನ್ನ ವಿರೋಧಿಗಳೆಲ್ಲರು ನಾಚಿಕೆಯಿಂದ ಕಳವಳಗೊಳ್ಳುವರು; ಅವರು ಪಕ್ಕನೆ ಲಜ್ಜೆಗೊಂಡು ಹಿಂದಿರುಗುವರು.