ಆದಿಕಾಂಡ 27:40
TSK
ನೀನು ಕತ್ತಿಯಿಂದಲೇ ಜೀವನ ಮಾಡುವಿ. ನಿನ್ನ ತಮ್ಮನಿಗೆ ಸೇವಕನಾಗಿರುವಿ. ಆದರೂ ನೀನು ತಾಳ್ಮೆ ಮೀರುವಾಗ, ಅವನು ನಿನ್ನ ಹೆಗಲಿನ ಮೇಲೆ ಹೊರಿಸಿರುವ ನೊಗವನ್ನು ಮುರಿದು ಹಾಕುವಿ” ಎಂದು ಹೇಳಿದನು.
TSK
Treasury of Scripture Knowledge references in ಕನ್ನಡ IRV.
ನೀನು ಕತ್ತಿಯಿಂದಲೇ ಜೀವನ ಮಾಡುವಿ. ನಿನ್ನ ತಮ್ಮನಿಗೆ ಸೇವಕನಾಗಿರುವಿ. ಆದರೂ ನೀನು ತಾಳ್ಮೆ ಮೀರುವಾಗ, ಅವನು ನಿನ್ನ ಹೆಗಲಿನ ಮೇಲೆ ಹೊರಿಸಿರುವ ನೊಗವನ್ನು ಮುರಿದು ಹಾಕುವಿ” ಎಂದು ಹೇಳಿದನು.
¶ ಇಸ್ರಾಯೇಲರು ದಾವೀದನನ್ನು ಅಭಿಷೇಕಿಸಿ, ತಮ್ಮ ಅರಸನನ್ನಾಗಿ ಮಾಡಿಕೊಂಡರೆಂಬ ವರ್ತಮಾನವು ಫಿಲಿಷ್ಟಿಯರಿಗೆ ತಲುಪಿದಾಗ ಅವರು ಅವನನ್ನು ಸೆರೆಹಿಡಿಯುವುದಕ್ಕೆ ಹೊರಟರು. ದಾವೀದನು ಇದನ್ನು ಕೇಳಿ ದುರ್ಗಕ್ಕೆ ಹೋದನು.
ದಾವೀದನು ಎದೋಮಿನಲ್ಲೆಲ್ಲಾ ಕಾವಲುದಂಡನ್ನಿರಿಸಿದನು. ಎದೋಮ್ಯರೆಲ್ಲರೂ ದಾವೀದನ ದಾಸರಾದರು. ಯೆಹೋವನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ಜಯವುಂಟಾಯಿತು.
¶ ದಾವೀದನು ಫಿಲಿಷ್ಟಿಯರನ್ನು ಮುತ್ತಿಗೆಹಾಕಿ, ಅವರನ್ನು ಸೋಲಿಸಿ, ಅವರಿಂದ ಗತ್ ಪಟ್ಟಣವನ್ನೂ ಮತ್ತು ಅದರ ಗ್ರಾಮಗಳನ್ನೂ ತೆಗೆದುಕೊಂಡನು.
ಮೋವಾಬ್ ಪ್ರದೇಶವು ನನ್ನ ಸ್ನಾನಪಾತ್ರೆ; ಎದೋಮ್ ಸೀಮೆಯು ನನ್ನ ಕೆರಗಳನ್ನು ಬಿಡುವ ಸ್ಥಳ. ಫಿಲಿಷ್ಟಿಯದ ವಿಷಯವಾಗಿ ಜಯಘೋಷ ಮಾಡುವೆನು.