TSK

TSK · ಕೀರ್ತನೆಗಳು 80:13

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಇಸ್ರಾಯೇಲರ ಅರಸನೂ ಏಲನ ಮಗನಾದ ಹೋಶೇಯನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಯೆಹೂದ ರಾಜನಾದ ಆಹಾಜನ ಮಗ ಹಿಜ್ಕೀಯನು ಆಳ್ವಿಕೆಗೆ ಬಂದನು.

¶ ಈ ಭಕ್ತಿ ಕಾರ್ಯಗಳಾದ ನಂತರ ಅಶ್ಶೂರದ ಅರಸನಾದ ಸನ್ಹೇರೀಬನು ಯುದ್ಧಕ್ಕೆ ಹೊರಟು ಯೆಹೂದದಲ್ಲಿ ನುಗ್ಗಿ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ಸ್ವಾಧೀನಮಾಡಿ ಕೊಳ್ಳಬೇಕೆಂದು ಅವುಗಳಿಗೆ ಮುತ್ತಿಗೆ ಹಾಕಿದನು.

ಅವನ ವಿರೋಧಿಗಳ ಹಸ್ತವನ್ನು ಉನ್ನತಪಡಿಸಿದ್ದೀ; ಅವನ ವೈರಿಗಳಿಗೆಲ್ಲಾ ಆನಂದವಾಗುವಂತೆ ಮಾಡಿದ್ದೀ.

ಜನಾಂಗದ ನಾಶಕ್ಕೆ ಒಂದು ಸಿಂಹವು ತನ್ನ ಪೊದೆಯೊಳಗಿಂದ ಎದ್ದು, ಹೊರಟಿದೆ, ಅದರ ಸ್ಥಳದಿಂದ ತೆರಳಿದೆ. ಅದು ನಿನ್ನ ದೇಶವನ್ನು ಹಾಳುಮಾಡುವುದು, ನಿನ್ನ ಪಟ್ಟಣಗಳು ಪಾಳುಬಿದ್ದು ನಿರ್ಜನ ಪ್ರದೇಶಗಳಾಗುವುವು.

¶ ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ಒಂಭತ್ತನೆಯ ವರ್ಷದ ಹತ್ತನೆಯ ತಿಂಗಳಿನಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಸಕಲ ಸೈನ್ಯಸಹಿತ ಬಂದು ಯೆರೂಸಲೇಮನ್ನು ಮುತ್ತಿದನು.

ಪೌಳಿಗೋಡೆಯಲ್ಲಿ ಒಂದು ದ್ವಾರವನ್ನು ಮಾಡಿದ್ದರಿಂದ ಒಳಗಿದ್ದ ಎಲ್ಲಾ ಸೈನಿಕರು ಅದೇ ರಾತ್ರಿ ಅರಸನ ತೋಟದ ಬಳಿಯಲ್ಲಿರುವ ಬಾಗಿಲಿನ ಮೂಲಕ ಪಟ್ಟಣದೊಳಗಿಂದ ಹೊರಟು ಓಡಿ ಹೋದರು; ಆ ಬಾಗಿಲು ಎರಡು ಗೋಡೆಗಳ ಮಧ್ಯದಲ್ಲಿತ್ತು; ಅವರು ಅರಾಬಾ ಎಂಬ ತಗ್ಗಾದ ಪ್ರದೇಶದ ಮಾರ್ಗವಾಗಿ ಪಲಾಯನ ಮಾಡಿದರು.

ಆದರೆ ಆ ಲತೆಯು ರೋಷದಲ್ಲಿ ಕೀಳಲ್ಪಟ್ಟು, ನೆಲದ ಮೇಲೆ ಬಿಸಾಡಲ್ಪಟ್ಟಿತು, ಮೂಡಣ ಗಾಳಿಯು ಅದರ ಫಲವನ್ನು ಬಾಡಿಸಿತು, ಅದರ ಗಟ್ಟಿ ಕೊಂಬೆಗಳು ಮುರಿದು ಒಣಗಿ ಹೋದವು, ಬೆಂಕಿಯು ಅವುಗಳನ್ನು ನುಂಗಿತು.