TSK

TSK · ಕೀರ್ತನೆಗಳು 81:6

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಮಣ್ಣಿನ ಕೆಲಸದಲ್ಲಿಯೂ, ಇಟ್ಟಿಗೆಮಾಡುವ ಕೆಲಸದಲ್ಲಿಯೂ, ವ್ಯವಸಾಯದ ಎಲ್ಲಾ ವಿಧವಾದ ಕೆಲಸದಲ್ಲಿಯೂ ಕಠಿಣವಾಗಿ ದುಡಿಸಿಕೊಂಡು ಅವರ ಜೀವಿತವನ್ನೇ ಬೇಸರಪಡಿಸಿದರು. ಐಗುಪ್ತರು ಇಸ್ರಾಯೇಲರಿಂದ ಮಾಡಿಸಿದ ಎಲ್ಲಾ ಕೆಲಸಗಳು ಬಹಳ ಕಠಿಣವಾಗಿದ್ದವು.

ಮೇಲೆ ಕಂಡ ಜನರು ಕುಂಬಾರರು. ಅವರು ನೆಟಾಯಿಮ್ ಮತ್ತು ಗೆದೇರ ಎಂಬ ಊರುಗಳಲ್ಲಿ ವಾಸಿಸುತ್ತಾ ಅರಸನ ಸೇವೆಯನ್ನು ಮಾಡುತ್ತಿದ್ದರು.

ಇಸ್ರಾಯೇಲರು ಐಗುಪ್ತ ದೇಶವನ್ನೂ, ಯಾಕೋಬನ ಮನೆತನದವರು ಅನ್ಯಜನಾಂಗವನ್ನು ಬಿಟ್ಟ ಮೇಲೆ,

ಅವರಿಗೆ ಭಾರವಾದ ನೊಗವನ್ನೂ, ಬೆನ್ನನ್ನು ಹೊಡೆದ ಕೋಲನ್ನೂ, ಬಿಟ್ಟೀ ಹಿಡಿದವನ ದೊಣ್ಣೆಯನ್ನೂ ಮಿದ್ಯಾನಿನ ನಾಶನದ ದಿನದಲ್ಲಿ ಮುರಿದುಬಿಟ್ಟಂತೆ ಮುರಿದು ಬಿಟ್ಟಿದ್ದೀ.

‹ನಾನು ಸಾತ್ವಿಕನೂ ದೀನಹೃದಯನೂ ಆಗಿರುವುದರಿಂದ ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತುಕೊಳ್ಳಿರಿ, ಆಗ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವುದು.›