TSK

TSK · ಕೀರ್ತನೆಗಳು 83:13

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಹಾರಿಹೋಗುವ ಎಲೆಯನ್ನು ನಡುಗಿಸುವಿಯಾ? ಒಣಗಿದ ಹೊಟ್ಟನ್ನು ಅಟ್ಟಿಬಿಡುವಿಯಾ?

ನನ್ನ ದೇವರೇ, ನನ್ನ ದೇವರೇ, ಏಕೆ ನನ್ನನ್ನು ಕೈಬಿಟ್ಟಿದ್ದೀ? ನೀನು ಏಕೆ ನನಗೆ ಸಹಾಯಮಾಡದೆಯೂ, ನನ್ನ ಕೂಗನ್ನು ಕೇಳದೆಯೂ ದೂರವಾಗಿದ್ದೀ?

ದೇವರೇ, ನೀನೇ ನನ್ನ ಅರಸನು; ಯಾಕೋಬನಿಗೆ ಜಯವನ್ನು ಆಜ್ಞಾಪಿಸಿದಾತನು.

ಚಾಚಿದ ಬಲಗೈಯನ್ನು ಏಕೆ ಹಿಂದೆಗೆದಿದ್ದೀ? ಅದನ್ನು ಎದೆಯ ಮೇಲಿನಿಂದ ತೆಗೆದು ಅವರನ್ನು ಸಂಹರಿಸಿಬಿಡು.

ಇವರು ನೆಡಲ್ಪಟ್ಟ ಕೂಡಲೆ, ಬಿತ್ತಲ್ಪಟ್ಟ ಕ್ಷಣವೇ, ಇವರ ಸಂತಾನವು ಭೂಮಿಯಲ್ಲಿ ಬೇರೂರಿದಾಗಲೇ, ಆತನ ಶ್ವಾಸದಿಂದ ಬಾಡುವರು, ಬಿರುಗಾಳಿಯು ಇವರನ್ನು ಒಣಹುಲ್ಲಿನಂತೆ ಬಡಿದುಕೊಂಡು ಹೋಗುವುದು.

ಆದಕಾರಣ ಬಿರುಗಾಳಿಯು ಬಡಿದುಕೊಂಡು ಹೋಗುವ ಒಣ ಹುಲ್ಲನ್ನೋ ಎಂಬಂತೆ ನಾನು ಅವರನ್ನು ಚದರಿಸಿಬಿಡುವೆನು.

ದೇವರಾದ ಯೆಹೋವನು ಹೀಗೆ ಹೇಳುತ್ತಾನೆ, ಶತ್ರುವು ನಿಮ್ಮನ್ನು ನೋಡಿ, “ಆಹಾ!” ಎನ್ನುತ್ತಾ, ಈ ಪುರಾತನ ದುರ್ಗಗಳು ನಮ್ಮ ವಶವಾಗಿವೆ’” ಎಂದು ಹೇಳುವರು.