ಅವನ ಆತ್ಮವು ಅಧೋಲೋಕವನ್ನು ಸಮೀಪಿಸುವುದು, ಅವನ ಪ್ರಾಣವು ಸಂಹಾರದೂತರಿಗೆ ಹತ್ತಿರವಾಗುವುದು.
TSK
TSK · ಕೀರ್ತನೆಗಳು 86:13
Treasury of Scripture Knowledge references in ಕನ್ನಡ IRV.
ನನ್ನ ಆತ್ಮವನ್ನು ಅಧೋಲೋಕಕ್ಕೆ ಹೋಗದಂತೆ ವಿಮೋಚಿಸಿದ್ದಾನೆ, ನನ್ನ ಜೀವವು ಬೆಳಕನ್ನು ಕಾಣುತ್ತಿರುವುದು’ ಎಂದು ಕೀರ್ತನೆ ಹಾಡುವನು.
ಯೆಹೋವನೇ, ನನ್ನ ಪ್ರಾಣವನ್ನು ಪಾತಾಳದಿಂದಲೂ ಎತ್ತಿದಿಯಲ್ಲಾ; ನನ್ನನ್ನು ಸಮಾಧಿಯಲ್ಲಿ ಸೇರಿಸದೆ ಬದುಕಿಸಿದಿಯಲ್ಲಾ.
ಏಕೆಂದರೆ, ನಾನು ಜೀವದಿಂದ ಬೆಳಕಿನಲ್ಲಿದ್ದು ನಿನಗೆ ನಡೆದುಕೊಳ್ಳಬೇಕೆಂದು ನೀನು ನನ್ನ ಪ್ರಾಣವನ್ನು ಮರಣಕ್ಕೆ ತಪ್ಪಿಸಿ, ನನ್ನ ಪಾದಗಳನ್ನು ಎಡವಿಬೀಳದಂತೆ ಕಾಪಾಡಿದ್ದಿ.
ಅಧೋಲೋಕದಲ್ಲಿಯೂ, ಗಾಢಾಂಧಕಾರದಲ್ಲಿಯೂ, ಅಗಾಧ ಸ್ಥಳದಲ್ಲಿಯೂ ನನ್ನನ್ನು ತಳ್ಳಿಬಿಟ್ಟಿದ್ದಿ.
ಏಕೆಂದರೆ ನಿನ್ನ ಕೃಪೆಯು ಆಕಾಶಕ್ಕಿಂತಲೂ ದೊಡ್ಡದಾಗಿದೆ, ನಿನ್ನ ಸತ್ಯತೆಯು ಮುಗಿಲನ್ನು ನಿಲುಕುತ್ತದೆ.
ಆಹಾ, ನಾನು ಪಟ್ಟ ದುಃಖವು ನನ್ನ ಸುಖಕ್ಕಾಗಿಯೇ ಆಯಿತು, ನನ್ನ ಆತ್ಮವನ್ನು ನಾಶಕೂಪದಿಂದ ರಕ್ಷಿಸಿದ್ದು ನಿನ್ನ ಪ್ರೀತಿಯೇ. ನನ್ನ ಪಾಪಗಳನ್ನೆಲ್ಲಾ ನಿನ್ನ ಬೆನ್ನ ಮೇಲೆ ಹಾಕಿಕೊಂಡಿದ್ದಿ.
ಆಕೆಯ ನೆರೆಹೊರೆಯವರೂ ಬಂಧುಬಾಂಧವರೂ ಆಕೆಯ ಮೇಲೆ ಕರ್ತನು ತನ್ನ ವಿಶೇಷ ದಯೆಯನ್ನು ತೋರಿಸಿದ್ದಾನೆಂಬುದನ್ನು ಕೇಳಿ ಆಕೆಯ ಸಂಗಡ ಸಂತೋಷಪಟ್ಟರು.