ನೀವು ಅವರಿಗೆ ಹೆದರಿಕೊಳ್ಳಬೇಡಿರಿ; ನಿಮ್ಮ ದೇವರಾದ ಯೆಹೋವನು ನಿಮ್ಮ ಮಧ್ಯದಲ್ಲಿದ್ದಾನೆ; ಆತನು ನಮ್ಮ ಭಕ್ತಿಗೆ ಪ್ರತಿಕಾರವಾಗಿ ವಿಸ್ಮಯ ಹುಟ್ಟಿಸುವ ದೇವರಾಗಿದ್ದಾನೆ.
TSK
TSK · ಕೀರ್ತನೆಗಳು 89:8
Treasury of Scripture Knowledge references in ಕನ್ನಡ IRV.
“ದೇವಾಧಿದೇವನಾದ ಯೆಹೋವನು ಇದಕ್ಕೆ ಸಾಕ್ಷಿ; ಆ ದೇವಾಧಿದೇವನಾದ ಯೆಹೋವನಿಗೆ ಇದು ಗೊತ್ತಿದೆ. ಇಸ್ರಾಯೇಲರಿಗೂ ಗೊತ್ತಾಗುವುದು. ನಾವು ದ್ರೋಹಿಗಳು, ಯೆಹೋವನ ವಿರುದ್ಧವಾಗಿ ಪಾಪಮಾಡಿದವರು ಆಗಿದ್ದರೆ ಯೆಹೋವನು ನಮ್ಮನ್ನು ಈ ಹೊತ್ತೇ ನಮ್ಮ ಜೀವವನ್ನು ತೆಗೆದುಬಿಡಲಿ.
ಆದರೆ ನೀನು ಯೆಹೋವನ ಮಾತನ್ನು ಕೇಳದೆ ಕೊಳ್ಳೆಗಾಗಿ ಮನಸೋತು ಆತನಿಗೆ ದ್ರೋಹಮಾಡಿದ್ದೇಕೆ?” ಅಂದನು.
ನಾನು ಬಲಿಷ್ಠನ ಶಕ್ತಿಯನ್ನು ಮೊರೆಹೋಗುವೆನೆಂದರೆ ದೇವರು, ‘ಇಗೋ, ಇದ್ದೇನೆ’ ಎನ್ನುವನು. ನ್ಯಾಯವಿಚಾರಣೆಯು ಆಗಲಿ ಎಂದರೆ ಆತನು ನನಗೆ, ‘ಕಾಲ ನಿಯಾಮಕರು ಯಾರು?’ ಎನ್ನುವನು.
ಮಹಾಮಹಿಮೆಯುಳ್ಳ ಈ ಅರಸನು ಯಾರು? ಮಹಾ ಬಲಿಷ್ಠನೂ, ವಿಶೇಷ ಪರಾಕ್ರಮಿಯೂ ಆಗಿರುವ ಯೆಹೋವ, ಯುದ್ಧವೀರನಾಗಿರುವ ಯೆಹೋವ.
ದೇವರೇ, ನಿನ್ನ ನೀತಿಯು ಆಕಾಶವನ್ನು ನಿಲುಕುವಷ್ಟು ಮಹೋನ್ನತವಾಗಿದೆ. ಮಹತ್ತರವಾದ ಕೃತ್ಯಗಳನ್ನು ನಡೆಸಿದ ದೇವರೇ, ನಿನಗೆ ಸಮಾನರು ಯಾರು?
ಮೇಘಮಂಡಲದಲ್ಲಿ ಯೆಹೋವನಿಗೆ ಸಮಾನರು ಯಾರು? ದೇವದೂತರಲ್ಲಿ ಯೆಹೋವನಿಗೆ ಸರಿಯಾದವರು ಯಾರು?
ನಮ್ಮ ಕರ್ತನು ದೊಡ್ಡವನೂ, ಪರಾಕ್ರಮಿಯೂ ಆಗಿದ್ದಾನೆ, ಆತನ ಜ್ಞಾನವು ಅಪರಿಮಿತವಾಗಿದೆ.
ಹೀಗಿರಲು, “ನನ್ನನ್ನು ಯಾರಿಗೆ ಹೋಲಿಸಿ ಸರಿಸಮಾನ ಮಾಡುತ್ತೀರಿ?” ಎಂದು ಸದಮಲಸ್ವಾಮಿಯು ಕೇಳುತ್ತಾನೆ.
‹ನಮ್ಮನ್ನು ಶೋಧನೆಯೊಳಗೆ ಸೇರಿಸದೆ› ‹ಕೆಡುಕನಿಂದ; ನಮ್ಮನ್ನು ತಪ್ಪಿಸು›