TSK

TSK · ಪ್ರಕಟನೆ 1:13

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಕವಚದ ಮೇಲಿರುವ ಕಸೂತಿ ನಡುಕಟ್ಟು ಕವಚಕ್ಕೆ ಏಕವಾಗಿದ್ದು ಅದರಂತೆಯೇ ನಯವಾಗಿ ಹೊಸೆದ ಹತ್ತಿಯ ಬಟ್ಟೆಯಿಂದಲು, ಚಿನ್ನದ ದಾರಗಳಿಂದಲು ಹಾಗೂ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರದಿಂದಲೂ ಮಾಡಲ್ಪಟ್ಟಿತ್ತು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅದನ್ನು ಮಾಡಿದರು.

ಧರ್ಮವೇ ಅವನಿಗೆ ನಡುಕಟ್ಟು, ಪ್ರಾಮಾಣಿಕತೆಯೇ ಸೊಂಟಪಟ್ಟಿ.

¶ “ನಾನು ನೋಡುತ್ತಿದ್ದ ಹಾಗೆ ನ್ಯಾಯಾಸನಗಳು ಹಾಕಲ್ಪಟ್ಟವು, ಮಹಾವೃದ್ಧನೊಬ್ಬನು ಆಸೀನನಾದನು; ಆತನ ಉಡುಪು ಹಿಮದಂತೆ ಶುಭ್ರವಾಗಿತ್ತು. ಆತನ ತಲೆಯ ಕೂದಲು ನಿರ್ಮಲವಾದ ಬಿಳಿಯ ಉಣ್ಣೆಯಂತಿತ್ತು, ಆತನ ನ್ಯಾಯಾಸನವು ಅಗ್ನಿಜ್ವಾಲೆಗಳು, ಅದರ ಚಕ್ರಗಳು ಧಗಧಗಿಸುವ ಬೆಂಕಿಯೇ.

ಟೈಗ್ರಿಸ್ ಮಹಾನದಿಯ ದಡದ ಮೇಲೆ ಇದ್ದು ಕಣ್ಣೆತ್ತಿ ನೋಡಲು ಇಗೋ, ನಾರಿನ ಬಟ್ಟೆಯನ್ನು ಹೊದ್ದುಕೊಂಡು ಊಫಜಿನ ಅಪರಂಜಿಯ ಪಟ್ಟಿಯನ್ನು ಸೊಂಟಕ್ಕೆ ಬಿಗಿದುಕೊಂಡ ಒಬ್ಬ ಪುರುಷನು ನನಗೆ ಕಾಣಿಸಿದನು;

ತನ್ನನ್ನು ಬರಿದು ಮಾಡಿಕೊಂಡು ದಾಸನ ರೂಪವನ್ನು ಧರಿಸಿಕೊಂಡು ಮನುಷ್ಯರಿಗೆ ಸಮನಾದನು. ಮನುಷ್ಯನಾಕಾರದಲ್ಲಿ ಕಾಣಿಸಿಕೊಂಡನು.

ಏಕೆಂದರೆ ನಮಗಿರುವ ಮಹಾಯಾಜಕನು ನಮ್ಮ ಬಲಹೀನತೆಗಳಲ್ಲಿ ಅನುಕಂಪ ತೋರಿಸುವವನಾಗಿದ್ದಾನೆ. ಆತನು ಸರ್ವ ವಿಷಯಗಳಲ್ಲಿಯೂ ನಮ್ಮ ಹಾಗೆ ಶೋಧನೆಗೆ ಗುರಿಯಾದವನು, ಪಾಪ ಮಾತ್ರ ಮಾಡಲಿಲ್ಲವಷ್ಟೇ.

ಆ ಆಲಯದೊಳಗಿಂದ ಏಳು ಉಪದ್ರವಗಳನ್ನು ಕೈಯಲ್ಲಿ ಹಿಡಿದಿರುವ ಆ ಏಳು ಮಂದಿ ದೇವದೂತರು ಬಂದರು. ಅವರು ಶುಭ್ರವೂ, ಪ್ರಕಾಶವೂ ಆದ ನಾರುಮಡಿಯನ್ನು ಧರಿಸಿಕೊಂಡಿದ್ದರು. ಮತ್ತು ತಮ್ಮ ಎದೆಗಳ ಮೇಲೆ ಚಿನ್ನದ ಪಟ್ಟಿಯನ್ನು ಕಟ್ಟಿಕೊಂಡಿದ್ದರು.