ನೀವು ನನಗೆ ಅಂಜುವುದಿಲ್ಲವೋ, ನನ್ನೆದುರಿಗೆ ನಡುಗುವುದಿಲ್ಲವೋ? ಸಮುದ್ರವು ದಾಟದ ಹಾಗೆ ಅದಕ್ಕೆ ಮರಳನ್ನು ನಿತ್ಯನಿಬಂಧನೆಯಿಂದ ಮೇರೆಯನ್ನಾಗಿ ನೇಮಿಸಿದ್ದೇನಷ್ಟೆ. ತೆರೆಗಳು ಅಲ್ಲಕಲ್ಲೋಲವಾದರೂ ಮೀರಲಾರವು, ಭೋರ್ಗರೆದರೂ ಹಾಯಲಾರವು.
TSK
TSK · ಪ್ರಕಟನೆ 13:1
Treasury of Scripture Knowledge references in ಕನ್ನಡ IRV.
ದಾನಿಯೇಲನು ಆ ಪ್ರಸ್ತಾಪವನ್ನೆತ್ತಿ ಇಂತೆಂದನು, “ನಾನು ರಾತ್ರಿ ಕಂಡ ಕನಸಿನಲ್ಲಿ ಆಹಾ, ಚತುರ್ದಿಕ್ಕಿನ ಗಾಳಿಗಳೂ ಮಹಾಸಾಗರದ ಮೇಲೆ ರಭಸವಾಗಿ ಬೀಸಿ ಬಡಿಯುತ್ತಿದ್ದವು.
ಆ ಮೇಲೆ ಕಬ್ಬಿಣದ ಹಲ್ಲು, ತಾಮ್ರದ ಉಗುರುಳ್ಳ ಮೃಗವು ಕೆಲವನ್ನು ನುಂಗಿ ಕೆಲವನ್ನು ಚೂರುಚೂರು ಮಾಡಿ ಉಳಿದದ್ದನ್ನು ಕಾಲುಗಳಿಂದ ತುಳಿದು, ಇತರ ಮೃಗಗಳಿಗಿಂತ ವಿಲಕ್ಷಣವಾಗಿ ಅತಿ ಭಯಂಕರವಾಗಿತ್ತು.
¶ “ರಾಜನು ತನ್ನ ಇಚ್ಛಾನುಸಾರ ನಡೆದು ತಾನು ಎಲ್ಲಾ ದೇವರುಗಳಿಗಿಂತ ದೊಡ್ಡವನೆಂದು ತನ್ನನ್ನು ಹೆಚ್ಚಿಸಿಕೊಂಡು ಗರ್ವದಿಂದ ಉಬ್ಬಿ, ದೇವಾಧಿ ದೇವನನ್ನು ಮಿತಿಮೀರಿ ದೂಷಿಸಿ ನಿಮ್ಮ ಮೇಲಿನ ದೈವ ಕೋಪವು ತೀರುವ ತನಕ ವೃದ್ಧಿಯಾಗಿರುವನು. ದೈವಸಂಕಲ್ಪವು ನೆರವೇರಲೇ ಬೇಕು.
¶ ಅವರು ತಮ್ಮ ಸಾಕ್ಷಿಗಳನ್ನು ಹೇಳಿ ಮುಗಿಸಿದ ನಂತರ, ಅಧೋಲೋಕದಿಂದ ಬರುವ ಮೃಗವು ಇವರ ಮೇಲೆ ಯುದ್ಧಮಾಡಿ ಇವರನ್ನು ಜಯಿಸಿ ಕೊಲ್ಲುವುದು.
¶ ಬಡಾಯಿಮಾತುಗಳನ್ನೂ ದೂಷಣೆಯ ಮಾತುಗಳನ್ನೂ ಆಡುವ ಬಾಯಿ ಅದಕ್ಕೆ ಕೊಡಲ್ಪಟ್ಟಿತು ಮತ್ತು ನಲವತ್ತೆರಡು ತಿಂಗಳ ಪರ್ಯಂತರ ತನ್ನ ಕಾರ್ಯಗಳನ್ನು ನಡಿಸುವ ಅಧಿಕಾರವೂ ಅದಕ್ಕೆ ಕೊಡಲ್ಪಟ್ಟಿತು.
ಆಗ ಅವನು ದೇವರಾತ್ಮವಶನಾದ ನನ್ನನ್ನು ಎತ್ತಿಕೊಂಡು ಮರುಭೂಮಿಗೆ ಹೋದನು. ಅಲ್ಲಿ ನಾನು ಕಡುಗೆಂಪು ಬಣ್ಣದ ಮೃಗದ ಮೇಲೆ ಕುಳಿತಿದ್ದ ಒಬ್ಬ ಸ್ತ್ರೀಯನ್ನು ಕಂಡೆನು. ಆ ಮೃಗದ ಮೈಮೇಲೆಲ್ಲಾ ದೂಷಣೆಗಳಿಂದ ಕೂಡಿದ್ದ ಹೆಸರುಗಳು ತುಂಬಿದ್ದವು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಇದ್ದವು.
¶ ಆದರೆ ಆ ದೇವದೂತನು ನನ್ನನ್ನು ಕುರಿತು ಹೇಳಿದ್ದೇನಂದರೆ “ನೀನು ಆಶ್ಚರ್ಯ ಪಡುತ್ತಿರುವುದೇತಕ್ಕೆ? ಆ ಸ್ತ್ರೀಯ ವಿಷಯವಾಗಿಯೂ, ಅವಳ ವಾಹನವಾಗಿದ್ದ ಮೃಗದ ವಿಷಯವಾಗಿಯೂ, ಏಳು ತಲೆಗಳೂ ಹತ್ತು ಕೊಂಬುಗಳುಳ್ಳ ಮೃಗ ಇರುವ ಗೂಢಾರ್ಥವನ್ನು ನಾನು ನಿನಗೆ ವಿವರಿಸುತ್ತೇನೆ.