ಆರೋನನು ಐಗುಪ್ತ ದೇಶದಲ್ಲಿ ನೀರಿರುವ ಎಲ್ಲಾ ಸ್ಥಳಗಳ ಮೇಲೆ ತನ್ನ ಕೈಚಾಚಲು ಕಪ್ಪೆಗಳು ಹೊರಟು ಬಂದು ದೇಶವನ್ನೆಲ್ಲಾ ತುಂಬಿಕೊಂಡವು.
TSK
TSK · ಪ್ರಕಟನೆ 16:13
Treasury of Scripture Knowledge references in ಕನ್ನಡ IRV.
ಅವರ ದೇಶದಲ್ಲೆಲ್ಲಾ ಕಪ್ಪೆಗಳು ತುಂಬಿಕೊಂಡವು; ಅರಮನೆಯಲ್ಲಿಯೂ ವ್ಯಾಪಿಸಿಕೊಂಡವು.
¶ ಆದರೂ ಮುಂಬರುವ ದಿನಗಳಲ್ಲಿ ಕೆಲವರು ವಂಚಿಸುವ ಆತ್ಮಗಳ ನುಡಿಗಳಿಗೂ, ದೆವ್ವಗಳ ಬೋಧನೆಗಳಿಗೂ ಲಕ್ಷ್ಯಕೊಟ್ಟು ಕ್ರಿಸ್ತ ನಂಬಿಕೆಯಿಂದ ಭ್ರಷ್ಟರಾಗುವರೆಂದು ದೇವರಾತ್ಮನು ಸ್ಪಷ್ಟವಾಗಿ ಹೇಳುತ್ತಿದ್ದಾನೆ.
¶ ಆದರೆ ಇಸ್ರಾಯೇಲ್ ಜನರೊಂದಿಗೆ ಸುಳ್ಳುಪ್ರವಾದಿಗಳೂ ಸಹ ಇದ್ದರು. ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳುಬೋಧಕರು ಇರುವರು. ಅವರು ಹಾನಿಕರವಾದ ದುರ್ಬೋಧನೆಗಳನ್ನು ರಹಸ್ಯವಾಗಿ ಒಳಗೆತರುವವರೂ ತಮ್ಮನ್ನು ಕೊಂಡುಕೊಂಡ ಒಡೆಯನನ್ನೂ ಕೂಡ ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ ಮೇಲೆ ನಾಶನವನ್ನು ಬರಮಾಡಿಕೊಳ್ಳುವರು.
ಪರಲೋಕದಲ್ಲಿ ಮತ್ತೊಂದು ಚಿಹ್ನೆಯು ಕಾಣಿಸಿತು. ಅಲ್ಲಿ ಕೆಂಪು ಘಟಸರ್ಪವೊಂದು ಇತ್ತು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳು ಇದ್ದವು. ಅದರ ತಲೆಗಳ ಮೇಲೆ ಏಳು ಕಿರೀಟಗಳು ಇದ್ದವು.
¶ ಸಮುದ್ರದಿಂದ ಒಂದು ಮೃಗವು ಏರಿಬರುವುದನ್ನು ಕಂಡೆನು. ಅದಕ್ಕೆ ಏಳು ತಲೆಗಳೂ, ಹತ್ತು ಕೊಂಬುಗಳೂ, ಕೊಂಬುಗಳ ಮೇಲೆ ಹತ್ತು ಕಿರೀಟಗಳೂ, ಹಣೆಗಳ ಮೇಲೆ ದೇವದೂಷಣೆಯ ನಾಮಗಳೂ ಇದ್ದವು.
ಇವು ಸೂಚಕಕಾರ್ಯಗಳನ್ನು ಮಾಡುವ ಭೂತಾತ್ಮಗಳಾಗಿದ್ದು ಭೂಲೋಕದ ಎಲ್ಲಾ ರಾಜರುಗಳ ಬಳಿಗೆ ಹೋಗಿ ಸರ್ವಶಕ್ತನಾದ ದೇವರ ಮಹಾದಿನದ ಯುದ್ಧಕ್ಕಾಗಿ ಅವರನ್ನು ಕೂಡಿಸುತ್ತಿದ್ದವು.
ಆಗ ಆ ಮೃಗವನ್ನು ಸೆರೆಹಿಡಿಯಲಾಯಿತು. ಇದಲ್ಲದೆ ಮೃಗದ ಪರವಾಗಿ ಮಹತ್ಕಾರ್ಯಗಳನ್ನು ಮಾಡಿ, ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹಕ್ಕೆ ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳುಪ್ರವಾದಿಯೂ ಅದರೊಂದಿಗೆ ಸೆರೆಸಿಕ್ಕಿದನು. ಇವರಿಬ್ಬರನ್ನೂ ಜೀವಸಹಿತವಾಗಿ ಗಂಧಕದಿಂದ ಉರಿಯುವ ಬೆಂಕಿಯ ಕೆರೆಗೆ ಹಾಕಲಾಯಿತು.