TSK

TSK · ಪ್ರಕಟನೆ 21:10

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅನಂತರ ಅವರು ಅವನಿಗೆ, “ನಿನ್ನ ಸೇವಕರಾದ ನಮ್ಮಲ್ಲಿ ಐವತ್ತು ಮಂದಿ ಬಲಿಷ್ಠಜನರಿದ್ದಾರೆ. ನಿನ್ನ ಯಜಮಾನನ್ನು ಹುಡುಕುವುದಕ್ಕೆ ಅವರಿಗೆ ಅಪ್ಪಣೆಯಾಗಲಿ ಯೆಹೋವನ ಆತ್ಮವು ಅವನನ್ನು ಎತ್ತಿಕೊಂಡು ಹೋಗಿ ಒಂದು ಬೆಟ್ಟದ ಮೇಲಾಗಲಿ ತಗ್ಗಿನಲ್ಲಾಗಲಿ ಇಟ್ಟಿರಬಹುದು” ಎಂದು ಹೇಳಿದರು. ಅವನು ಅವರಿಗೆ, “ನೀವು ಅವರನ್ನು ಕಳುಹಿಸಬೇಡಿರಿ” ಎಂದನು.

ಆಗ ಆ ತೇಜೋರೂಪಿಯು ಮನುಷ್ಯ ಹಸ್ತದಂಥ ಹಸ್ತವನ್ನು ಚಾಚಿ ನನ್ನ ತಲೆಯ ಕೂದಲಿನಿಂದ ಹಿಡಿಯಲು ದೇವರಾತ್ಮವು ನನ್ನನ್ನು ಎತ್ತಿಕೊಂಡು ಭೂಮ್ಯಾಕಾಶಗಳ ನಡುವೆ ಯೆರೂಸಲೇಮಿನವರೆಗೆ ಒಯ್ದು, ಒಳಗಣ ಪ್ರಾಕಾರದ ಉತ್ತರ ಬಾಗಿಲ ಮುಂದೆ, ದೇವರನ್ನು ರೋಷಗೊಳಿಸುವ ವಿಗ್ರಹವು ಮೊದಲಿದ್ದ ಸ್ಥಳದಲ್ಲಿ ನಿಲ್ಲಿಸಿದ ಹಾಗೆ ಆ ದೇವದರ್ಶನದಲ್ಲಿ ನನಗೆ ಕಂಡು ಬಂದಿತು.

ಆಮೇಲೆ ದೇವರಾತ್ಮ ಪರವಶನಾದ ನನ್ನನ್ನು ಎತ್ತಿ, ದಿವ್ಯ ದರ್ಶನದ ಮುಖಾಂತರ ಕಸ್ದೀಯರ ದೇಶದಲ್ಲಿ ಸೆರೆಯಾದವರ ಬಳಿಗೆ ಕರೆತಂದಿತು. ನನಗಾದ ದಿವ್ಯದರ್ಶನವು ಆಗ ಮಾಯವಾಯಿತು.

¶ ಇಪ್ಪತ್ತೈದು ಸಾವಿರ ಮೊಳ ಉದ್ದದ ಆ ಕ್ಷೇತ್ರದ ಪಕ್ಕದಲ್ಲಿ ಮೀಸಲು ಪಾಲಿನ ಒಟ್ಟು ಅಳತೆಯಲ್ಲಿ ಉಳಿದ ಐದು ಸಾವಿರ ಮೊಳ ಅಗಲದ ಭೂಮಿಯು ಮೀಸಲಿಲ್ಲವೆಂದೆಣಿಸಿ ಪಟ್ಟಣಕ್ಕೆ ಅಂದರೆ ಜನರ ನಿವಾಸಕ್ಕೂ ಮತ್ತು ಸುತ್ತಣ ಪ್ರದೇಶಕ್ಕೂ ಪ್ರತ್ಯೇಕಿಸಲ್ಪಡಲಿ. ಪಟ್ಟಣವು ಅದರ ಮಧ್ಯದಲ್ಲಿರಲಿ.

ಕ್ರಿಸ್ತನಲ್ಲಿದ್ದ ಒಬ್ಬ ಮನುಷ್ಯನನ್ನು ಬಲ್ಲೆನು. ಅವನು ಹದಿನಾಲ್ಕು ವರ್ಷಗಳ ಹಿಂದೆ ಮೂರನೆಯ ಸ್ವರ್ಗಕ್ಕೆ ಒಯ್ಯಲ್ಪಟ್ಟನು. ಅವನು ದೇಹಸಹಿತನಾಗಿ ಒಯ್ಯಲ್ಪಟ್ಟನೋ, ಅಥವಾ ದೇಹರಹಿತನಾಗಿ ಒಯ್ಯಲ್ಪಟ್ಟನೋ ನಾನರಿಯೆನು, ದೇವರೇ ಬಲ್ಲನು.

ಕೂಡಲೆ ನಾನು ದೇವರಾತ್ಮವಶನಾದೆನು, ಆಗ ಇಗೋ ಪರಲೋಕದಲ್ಲಿ ಒಂದು ಸಿಂಹಾಸನವಿತ್ತು. ಸಿಂಹಾಸನದ ಮೇಲೆ ಒಬ್ಬನು ಕುಳಿತಿದ್ದನು.

ಇದಲ್ಲದೆ ಪರಲೋಕದಿಂದ ಪರಿಶುದ್ಧ ಪಟ್ಟಣವಾದ ಹೊಸ ಯೆರೂಸಲೇಮ್ ದೇವರ ಬಳಿಯಿಂದ ಇಳಿದು ಬರುವುದನ್ನು ಕಂಡೆನು. ಅದು ತನ್ನ ಪತಿಗೋಸ್ಕರ ಸಿದ್ಧಳಾಗಿರುವ ಮದಲಗಿತ್ತಿಯಂತೆ ಶೃಂಗರಿಸಲ್ಪಟ್ಟಿತ್ತು.