ಹಬಕ್ಕೂಕ್ಕ 2:4
TSK
ಇಗೋ, ದುಷ್ಟನ ಅಂತರಾತ್ಮವು ತನ್ನ ಕ್ರಿಯೆಗಳಿಂದ ಉಬ್ಬಿಹೋಗಿದೆ, ಆದರೆ, ನೀತಿವಂತನು ತನ್ನ ನಂಬಿಕೆಯಿಂದಲೇ ಬದುಕುವನು.
TSK
Treasury of Scripture Knowledge references in ಕನ್ನಡ IRV.
ಇಗೋ, ದುಷ್ಟನ ಅಂತರಾತ್ಮವು ತನ್ನ ಕ್ರಿಯೆಗಳಿಂದ ಉಬ್ಬಿಹೋಗಿದೆ, ಆದರೆ, ನೀತಿವಂತನು ತನ್ನ ನಂಬಿಕೆಯಿಂದಲೇ ಬದುಕುವನು.
ಅವರಲ್ಲಿ ಕೆಲವರಿಗೆ ನಂಬಿಕೆ ಇರಲಿಲ್ಲವಾದರೂ? ಅವರ ಅಪನಂಬಿಕೆಯಿಂದ ದೇವರು ನಂಬಿಕೆಗೆ ತಪ್ಪುವವನಾದಾನೋ? ಎಂದಿಗೂ ಇಲ್ಲ.
¶ ಹಾಗಾದರೆ ಏನು ಹೇಳೋಣ? ನೀತಿಯನ್ನು ಅನುಸರಿಸದ ಅನ್ಯಜನರಿಗೆ ನೀತಿಯು ಅಂದರೆ ನಂಬಿಕೆಯಿಂದುಂಟಾದ ನೀತಿಯು ದೊರಕಿತು.
ಇದರಲ್ಲಿ ನನ್ನ ಉದ್ದೇಶವೇನೆಂದರೆ, ನಾನು ಕ್ರಿಸ್ತನನ್ನು ಸಂಪಾದಿಸಿಕೊಂಡು, ಧರ್ಮಶಾಸ್ತ್ರದ ಫಲವಾಗಿರುವ ಸ್ವನೀತಿಯನ್ನಲ್ಲ, ಕ್ರಿಸ್ತನನ್ನು ನಂಬುವುದರಿಂದ ದೊರಕುವಂಥ ಅಂದರೆ ಕ್ರಿಸ್ತನ ಮೇಲಣ ನಂಬಿಕೆಯ ಆಧಾರದಿಂದ ದೇವರು ಕೊಡುವಂಥ ನೀತಿಯನ್ನೇ ಹೊಂದಿ ಕ್ರಿಸ್ತನಲ್ಲಿರುವವನಾಗಿರಬೇಕೆಂಬುದೇ.
ಆದರೆ ನಂಬಿಕೆಯಿಲ್ಲದೆ ದೇವರನ್ನು ಮೆಚ್ಚಿಸುವುದು ಅಸಾಧ್ಯ. ಏಕೆಂದರೆ ದೇವರ ಬಳಿಗೆ ಬರುವವನು ದೇವರು ಇದ್ದಾನೆ ಮತ್ತು ತನ್ನನ್ನು ಹುಡುಕುವವರಿಗೆ ಪ್ರತಿಫಲವನ್ನು ಕೊಡುತ್ತಾನೆ ಎಂದು ನಂಬಬೇಕು.