ತನ್ನನ್ನು ತಿರಸ್ಕರಿಸಿದವರಿಗೆ ಪ್ರತಿಯಾಗಿ ನಾಶವನ್ನು ಉಂಟುಮಾಡುವವನಾಗಿಯೂ ಇದ್ದಾನೆಂದು ತಿಳಿದುಕೊಳ್ಳಿರಿ. ಹಗೆ ಮಾಡುವವರ ವಿಷಯದಲ್ಲಿ ತಡಮಾಡದೆ ಆಗಲೇ ಮುಯ್ಯಿತೀರಿಸುವನು.
TSK
TSK · ರೋಮಾಪುರದವರಿಗೆ 1:30
Treasury of Scripture Knowledge references in ಕನ್ನಡ IRV.
¶ “ಲೇವಿಯರು, ತಂದೆತಾಯಿಗಳನ್ನು ಅವಮಾನಪಡಿಸಿದವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು.
ಯೆಹೋಷಾಫಾಟನು ಯೆರೂಸಲೇಮಿಗೆ ಬಂದಾಗ ಹನಾನೀಯನ ಮಗನಾದ ಯೇಹೂ ಎಂಬ ದರ್ಶಕನು ಅರಸನನ್ನು ಎದುರುಗೊಂಡು ಅವನಿಗೆ, “ನೀನು ದುಷ್ಟರಿಗೆ ಸಹಾಯ ಮಾಡಬಹುದೇ? ಯೆಹೋವನ ಹಗೆಗಾರರನ್ನು ಪ್ರೀತಿಸಬಹುದೇ? ನೀನು ಹೀಗೆ ಮಾಡಿದ್ದರಿಂದ ಯೆಹೋವನ ಕೋಪವು ನಿನ್ನ ಮೇಲಿರುತ್ತದೆ.
ದುಷ್ಟನು ತನ್ನ ಹೃದಯದ ಸಂಕಲ್ಪಗಳು ನೆರವೇರಿತೆಂದು ಕೊಚ್ಚಿಕೊಳ್ಳುತ್ತಾನೆ; ಲಾಭಬಡುಕನು ಯೆಹೋವನನ್ನು ದೂಷಿಸಿ ತಿರಸ್ಕರಿಸುತ್ತಾನೆ.
ಪರಾಕ್ರಮಿಯೇ, ನೀನು ಕೆಡುಕುಮಾಡಿ ಹಿಗ್ಗುವುದೇನು? ದೇವರ ಕೃಪೆಯು ಯಾವಾಗಲೂ ಇರುವುದು.
ಕೆಡುಕರೆಲ್ಲರು ಉಬ್ಬಿಕೊಂಡು, ಅಹಂಕಾರವನ್ನು ಕಕ್ಕುತ್ತಾರೆ.
ನಮ್ಮ ಯೆಹೋವ ದೇವರೇ, ಅವರಿಗೆ ಸದುತ್ತರ ಕೊಟ್ಟವನು ನೀನೇ. ನೀನು ದುಷ್ಕೃತ್ಯಗಳಿಗಾಗಿ ಅವರನ್ನು ದಂಡಿಸುತ್ತಿದ್ದರೂ, ಕ್ಷಮಿಸುವ ದೇವರಾಗಿದ್ದಿ.
ಯಾವನು ನನಗೆ ತಪ್ಪುಮಾಡುತ್ತಾನೋ ಅವನು ತನ್ನ ಆತ್ಮಕ್ಕೆ ಕೇಡುಮಾಡಿಕೊಳ್ಳುತ್ತಾನೆ; ನನ್ನನ್ನು ಹಗೆಮಾಡುವವರೆಲ್ಲರೂ ಮರಣವನ್ನು ಪ್ರೀತಿಸುತ್ತಾರೆ.”
ತಂದೆಯನ್ನು ಹಾಸ್ಯಮಾಡಿ ತಾಯಿಯ ಅಪ್ಪಣೆಯನ್ನು, ಧಿಕ್ಕರಿಸುವವನ ಕಣ್ಣನ್ನು, ಹಳ್ಳಕೊಳ್ಳದ ಕಾಗೆಗಳು ಕುಕ್ಕುವವು, ರಣಹದ್ದುಗಳು ತಿಂದುಬಿಡುವವು.
ಇಸ್ರಾಯೇಲ್ ವಂಶದವರೆಲ್ಲರೂ ತಮ್ಮ ವಿಗ್ರಹಗಳ ನಿಮಿತ್ತ ನನ್ನನ್ನು ತೊರೆದುದರಿಂದ ನಾನು ಅವರನ್ನೆಲ್ಲಾ ಅವರ ಆಶಾಪಾಶದಲ್ಲೇ ಸಿಕ್ಕಿಸಿ ಹಿಡಿಯುವೆನು.”
‹ಹೇಗೆಂದರೆ›‹‘ತಂದೆತಾಯಿಗಳನ್ನು ಸನ್ಮಾನಿಸಬೇಕೆಂತಲೂ›‹ತಂದೆಯನ್ನಾಗಲಿ ತಾಯಿಯನ್ನಾಗಲಿ ದೂಷಿಸುವವನು ಸಾಯಲೇಬೇಕೆಂತಲೂ’ ದೇವರು ಹೇಳಿದ್ದಾನೆ.›
‹ಆದರೆ ತಂದೆತಾಯಿಗಳೂ, ಅಣ್ಣತಮ್ಮಂದಿರೂ, ಬಂಧುಬಾಂಧವರೂ. ಸ್ನೇಹಿತರೂ ನಿಮ್ಮನ್ನು ಅವರಿಗೆ ಒಪ್ಪಿಸಿಕೊಡುವರು ಮತ್ತು ನಿಮ್ಮಲ್ಲಿ ಕೆಲವರನ್ನು ಕೊಲ್ಲಿಸುವರು.›
‹ನನ್ನನ್ನು ದ್ವೇಷಿಸುವವನು ನನ್ನ ತಂದೆಯನ್ನು ಸಹ ದ್ವೇಷಿಸುತ್ತಾನೆ.›
¶ ನೀನು ಯೆಹೂದ್ಯನೆನಸಿಕೊಂಡು, ಧರ್ಮಶಾಸ್ತ್ರದಲ್ಲಿ ಭರವಸವಿಟ್ಟು, ದೇವರಲ್ಲಿ ಹೆಮ್ಮೆಯಿಂದ ಸಂತೋಷಿಸಿ,
¶ ಹಾಗಾದರೆ ನಮ್ಮನ್ನು ನಾವು ಹೊಗಳಿಕೊಳ್ಳುವುದಕ್ಕೆ ಅವಕಾಶವೆಲ್ಲಿ? ಅದು ಇಲ್ಲದೆ ಹೋಯಿತು. ಯಾವ ಆಧಾರದಿಂದ? ಕರ್ಮಮಾರ್ಗವನ್ನು ಅನುಸರಿಸುವುದರಿಂದಲೋ? ಅಲ್ಲ. ನಂಬಿಕೆಮಾರ್ಗವನ್ನು ಅನುಸರಿಸುವುದರಿಂದಲೇ.
ನಾವು ಮಿತಿಗಳನ್ನು ಮೀರಿ ಮತ್ತೊಬ್ಬರ ಪ್ರಯಾಸದ ಫಲಗಳನ್ನು ತೆಗೆದುಕೊಂಡು, ಇವು ನಮ್ಮವು ಎಂದು ಹಿಗ್ಗುವವರಲ್ಲ. ಆದರೆ ನಿಮ್ಮ ನಂಬಿಕೆಯು ಹೆಚ್ಚಿದಾಗೆಲ್ಲಾ ನಿಮ್ಮ ಮೂಲಕ ನಮ್ಮ ಮಿತಿಯು ಇನ್ನೂ ವಿಸ್ತರಿಸಿತು.
ಮನುಷ್ಯರು ಸ್ವಾರ್ಥಚಿಂತಕರೂ, ಹಣದಾಸೆಯವರೂ, ಬಡಾಯಿಕೊಚ್ಚುವವರೂ, ಅಹಂಕಾರಿಗಳೂ, ದೂಷಕರೂ, ತಂದೆತಾಯಿಗಳಿಗೆ ಅವಿಧೇಯರೂ, ಉಪಕಾರ ನೆನಸದವರೂ, ದೇವಭಯವಿಲ್ಲದವರೂ,
ಹಾಗೆಯೇ ನಾಲಿಗೆಯು ಕೂಡ ಚಿಕ್ಕ ಅಂಗವಾಗಿದ್ದರೂ ದೊಡ್ಡ ಕಾರ್ಯಗಳನ್ನು ಮಾಡುವ ಬಗ್ಗೆ ಕೊಚ್ಚಿಕೊಳ್ಳುತ್ತದೆ. ಬೆಂಕಿಯ ಸಣ್ಣ ಕಿಡಿ ದೊಡ್ಡ ಕಾಡನ್ನೂ ಸುಡುತ್ತದೆ.
ಕೇಡುಕಿನ ಮಾರ್ಗದಲ್ಲಿ ನಡೆಯುವವರ ಸಹವಾಸದಿಂದ ಹೊಸದಾಗಿ ತಪ್ಪಿಸಿಕೊಂಡವರ ಸಂಗಡ ಇವರು ಹುರುಳಿಲ್ಲದ ಪೊಳ್ಳು ಮಾತುಗಳನ್ನಾಡಿ ಕೆಟ್ಟ ಕಾಮಾಭಿಲಾಷೆ ಹುಟ್ಟಿಸಿ ಅತಿಯಾದ ಬಂಡುತನದಿಂದ ಅವರನ್ನು ಮರುಳುಗೊಳಿಸುತ್ತಾರೆ.