ಆಹಾ, ಈಗಲೂ ನನ್ನ ಕಡೆಯ ಸಾಕ್ಷಿಯು ಆಕಾಶದಲ್ಲಿ ಉಂಟು, ನನ್ನ ಪಕ್ಷದ ಹೊಣೆಗಾರನು ಮೇಲಣ ಲೋಕದಲ್ಲಿದ್ದಾನೆ.
TSK
TSK · ರೋಮಾಪುರದವರಿಗೆ 1:9
Treasury of Scripture Knowledge references in ಕನ್ನಡ IRV.
¶ ಬೇಸರಗೊಳ್ಳದೆ ಯಾವಾಗಲೂ ಪ್ರಾರ್ಥನೆ ಮಾಡುತ್ತಿರಬೇಕೆಂಬುದಕ್ಕೆ ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು.
ಮೊದಲು ನಿಮಗಾಗಿಯೇ ದೇವರು ತನ್ನ ಸೇವಕನನ್ನು ಪ್ರತಿಷ್ಠೆಪಡಿಸಿ ಈತನು ನಿಮ್ಮಲ್ಲಿ ಪ್ರತಿಯೊಬ್ಬನನ್ನು ಅವನವನ ಕೆಟ್ಟ ನಡತೆಗಳಿಂದ ತಿರುಗಿಸಿ ನಿಮ್ಮನ್ನು ಆಶೀರ್ವದಿಸಬೇಕೆಂದು ಆತನನ್ನು ಕಳುಹಿಸಿಕೊಟ್ಟಿದ್ದಾನೆ” ಎಂದು ಹೇಳಿದನು.
¶ ಈ ಸಂಗತಿಗಳು ಆದ ಮೇಲೆ ಪೌಲನು ತಾನು ಮಕೆದೋನ್ಯದಲ್ಲಿಯೂ, ಅಖಾಯದಲ್ಲಿಯೂ ಸಂಚಾರಮಾಡಿ ಯೆರೂಸಲೇಮಿಗೆ ಹೋಗಬೇಕೆಂದು ಮನಸ್ಸಿನಲ್ಲಿ ಯೋಚಿಸಿ; “ಅಲ್ಲಿಗೆ ಹೋದ ಮೇಲೆ ರೋಮಾಪುರವನ್ನು ಸಹ ನೋಡಬೇಕೆಂದು” ಹೇಳಿದನು.
ಏಕೆಂದರೆ, ನಾನು ಯಾರವನಾಗಿದ್ದೇನೋ, ಯಾರನ್ನು ಸ್ತುತಿಸುತ್ತೇನೋ ಆ ದೇವರಿಂದ ಬಂದ ಒಬ್ಬ ದೂತನು ಕಳೆದ ರಾತ್ರಿಯಲ್ಲಿ ನನ್ನ ಹತ್ತಿರ ನಿಂತು;
ಯಾಕೆಂದರೆ ನಾನು ಅನ್ಯಭಾಷೆಯಲ್ಲಿ ದೇವರನ್ನು ಪ್ರಾರ್ಥಿಸಿದರೆ ನನ್ನಾತ್ಮವು ಪ್ರಾರ್ಥಿಸುತ್ತಿರುತ್ತದೆ. ಆದರೆ ನನ್ನ ಬುದ್ಧಿಯು ನಿಷ್ಫಲವಾಗಿರುವುದು.
ಈ ನನ್ನ ಹೊಗಳಿಕೆಯನ್ನು ಅಖಾಯದ ಪ್ರಾಂತ್ಯಗಳಲ್ಲಿ ಒಬ್ಬರೂ ತಡೆಯಲಾರರೆಂದು ಕ್ರಿಸ್ತನ ಮುಂದೆ ಸತ್ಯವಾಗಿ ಹೇಳುತ್ತೇನೆ.
ನಾನು ನಿಮಗೆ ಬರೆಯುವ ಸಂಗತಿಗಳು ಸುಳ್ಳಲ್ಲವೆಂಬುದಕ್ಕೆ ಇಗೋ, ದೇವರೇ ಸಾಕ್ಷೀ.
¶ ಹೀಗಿರಲಾಗಿ ಯಾವ ತಂದೆಯಿಂದ ಭೂಪರಲೋಕಗಳಲ್ಲಿರುವ ಪ್ರತಿ ಜನವೂ ಹೆಸರುಗೊಂಡಿರುವುದೋ ಆ ತಂದೆಯ ಮುಂದೆ ನಾನು ಮೊಣಕಾಲೂರಿಕೊಂಡು,
ಆದರೆ ತಿಮೊಥೆಯನ ಯೋಗ್ಯತೆಯನ್ನು ನೀವು ತಿಳಿದುಕೊಂಡಿದ್ದೀರಿ. ಮಗನು ತಂದೆಗೆ ಹೇಗೋ ಹಾಗೆಯೇ ಅವನು ನನ್ನ ಜೊತೆಯಲ್ಲಿ ಸುವಾರ್ತಾಪ್ರಚಾರಕ್ಕಾಗಿ ಸೇವೆಮಾಡಿದನೆಂಬುದು ನಿಮಗೆ ಗೊತ್ತುಂಟು.
¶ ಹೀಗಿರುವುದ್ದರಿಂದ ಈ ನಿಮ್ಮ ಪ್ರೀತಿಯ ಕುರಿತು ನಾವು ಕೇಳಿದ ದಿನದಿಂದ ನಿಮಗೋಸ್ಕರ ಪ್ರಾರ್ಥಿಸುವುದನ್ನು ನಿಲ್ಲಿಸದೆ, ನೀವು ಸಕಲ ಆತ್ಮೀಕ ಗ್ರಹಿಕೆಯಿಂದಲೂ ಜ್ಞಾನದಿಂದಲೂ ದೇವರ ಚಿತ್ತದ ತಿಳಿವಳಿಕೆಯ ಕುರಿತು ಸಂಪೂರ್ಣರಾಗಬೇಕೆಂತಲೂ,
¶ ನಾವು ನಂಬಿಕೆಯ ಫಲವಾದ ನಿಮ್ಮ ಕಾರ್ಯವನ್ನೂ, ಪ್ರೀತಿಪೂರ್ವಕವಾದ ನಿಮ್ಮ ಪ್ರಯಾಸವನ್ನೂ ಮತ್ತು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೇಲಿನ ನೀವಿಟ್ಟಿರುವ ಅಚಲವಾದ ನಿರೀಕ್ಷೆಯನ್ನೂ ನಮ್ಮ ತಂದೆಯಾದ ದೇವರ ಮುಂದೆ ಎಡೆಬಿಡದೆ ಜ್ಞಾಪಕ ಮಾಡಿಕೊಂಡು, ನಾವು ಪ್ರಾರ್ಥಿಸುವಾಗಲೆಲ್ಲಾ ನಿಮ್ಮನ್ನು ಸ್ಮರಿಸುತ್ತಾ, ನಿಮ್ಮೆಲ್ಲರಿಗಾಗಿ ದೇವರಿಗೆ ಯಾವಾಗಲೂ ಕೃತಜ್ಞತಾಸ್ತುತಿ ಮಾಡುತ್ತೇವೆ.
ನಿಮ್ಮ ಮುಖವನ್ನು ನೋಡುವುದಕ್ಕೂ ನಿಮ್ಮ ನಂಬಿಕೆಯ ಕೊರತೆಗಳನ್ನು ನೀಗುವುದಕ್ಕೂ ನಾವು ಹಗಲಿರುಳು ದೇವರನ್ನು ತುಂಬಾ ಕಳಕಳಿಯಿಂದ ಬೇಡುವವರಾಗಿದ್ದೇವೆ.
ಆ ಸಾಕ್ಷಿಯನ್ನು ಪ್ರಸಿದ್ಧಿಪಡಿಸುವುದಕ್ಕಾಗಿಯೇ ನಾನು ಸಂದೇಶಕನಾಗಿಯೂ, ಅಪೊಸ್ತಲನಾಗಿಯೂ, ನಂಬಿಕೆಯಿಂದಲೂ ಸತ್ಯದಿಂದಲೂ ಅನ್ಯಜನರಿಗೆ ಬೋಧಿಸುವವನಾಗಿಯೂ ನೇಮಿಸಲ್ಪಟ್ಟಿದ್ದೇನೆ. ನಾನು ಸುಳ್ಳಾಡದೇ ಸತ್ಯವನ್ನೇ ಹೇಳುತ್ತೇನೆ.
¶ ಕರ್ತನಾದ ಯೇಸುವಿನ ಮೇಲೆ ನೀನು ಇಟ್ಟಿರುವ ನಂಬಿಕೆ, ಪ್ರೀತಿ ಹಾಗೂ ದೇವಜನರ ಮೇಲಿರುವ ನಿನ್ನ ಪ್ರೀತಿಯನ್ನು ಕುರಿತು ಕೇಳಿದ್ದರಿಂದ,