TSK

TSK · ರೋಮಾಪುರದವರಿಗೆ 10:20

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಹಿಂದಟ್ಟದಿದ್ದರೂ ದುಷ್ಟನು ಹೆದರಿ ಓಡುವನು, ಶಿಷ್ಟನು ಸಿಂಹದಂತೆ ಧೈರ್ಯದಿಂದಿರುವನು.

ಹಾಗೆಯೇ ಅನೇಕ ಜನಾಂಗಗಳವರು ಅವನನ್ನು ಕಂಡು ವಿಸ್ಮಯದಿಂದ ಚಕಿತರಾಗುವರು. ಅರಸರೂ ಅವನ ಮುಂದೆ ಬಾಯಿಮುಚ್ಚಿಕೊಳ್ಳುವರು. ಏಕೆಂದರೆ ಸುದ್ದಿಯೇ ಇಲ್ಲದ ಸಂಗತಿಯನ್ನು ನೋಡುವರು, ಎಂದೂ ಕೇಳದೇ ಇರುವ ವಿಷಯವನ್ನು ಗ್ರಹಿಸಿಕೊಳ್ಳುವರು.

ಸ್ವರವೆತ್ತಿ ಕೂಗು, ಸಂಕೋಚಪಡಬೇಡ, ಕೊಂಬಿನಂತೆ ಧ್ವನಿಗೈದು ನನ್ನ ಜನರಿಗೆ ಅವರ ದ್ರೋಹಗಳನ್ನು ತಿಳಿಯಪಡಿಸು. ಯಾಕೋಬ ವಂಶದವರಿಗೆ ಅವರ ಪಾಪಗಳನ್ನು ತಿಳಿಸು.

‹ಹೀಗೆ›‹ಕಡೆಯವರು ಮೊದಲಿನವರಾಗುವರು ಮೊದಲಿನವರು ಕಡೆಯವರಾಗುವರು”› ಎಂದು ಹೇಳಿದನು.

‹ಆಗ ಆ ಯಜಮಾನನು ತನ್ನ ಆಳಿಗೆ ಹೇಳಿದ್ದೇನೆಂದರೆ, ‘ನೀನು ಹಾದಿಗಳಿಗೂ ಬೀದಿಗಳಿಗೂ ಹೋಗಿ ಅಲ್ಲಿ ಸಿಕ್ಕಿದವರನ್ನು ಬಲವಂತಮಾಡಿ ಒಳಕ್ಕೆ ಕರೆದುಕೊಂಡು ಬಾ, ನನ್ನ ಮನೆ ತುಂಬಲಿ.›

ನಾನು ಮಾತನಾಡಲು ಬಾಯಿ ತೆರೆಯುವಾಗ ಪೂರ್ವಕಾಲದಲ್ಲಿ ಗುಪ್ತವಾಗಿದ್ದ ಸುವಾರ್ತಾಸತ್ಯಗಳನ್ನು ಭಯವಿಲ್ಲದೆ ತಿಳಿಸುವುದಕ್ಕೆ ಬೇಕಾದ ಮಾತುಗಳನ್ನು ದೇವರು ನನಗೆ ಅನುಗ್ರಹಿಸಬೇಕೆಂದು ಪ್ರಾರ್ಥಿಸಿರಿ.