TSK

TSK · ರೋಮಾಪುರದವರಿಗೆ 10:6

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆಕಾಶಕ್ಕೆ ಏರಿ ಇಳಿದಿರುವವನಾರು? ಮುಷ್ಠಿಯಲ್ಲಿ ಗಾಳಿಯನ್ನು ಕೂಡಿಸಿರುವವರು ಯಾರು? ತನ್ನ ಬಟ್ಟೆಯಲ್ಲಿ ನೀರನ್ನು ಮೂಟೆಕಟ್ಟಿರುವವರು ಯಾರು? ಭೂಮಿಯ ಎಲ್ಲೆಗಳನ್ನೆಲ್ಲಾ ಸ್ಥಾಪಿಸಿರುವವರು ಯಾರು? ಅವನ ಹೆಸರೇನು? ಅವನ ಮಗನ ಹೆಸರೇನು? ನೀನೇ ಬಲ್ಲವನು.

‹ದೇವರು ಕೊಡುವ ಆ ರೊಟ್ಟಿ ಯಾವುದೆಂದರೆ, ಪರಲೋಕದಿಂದ ಇಳಿದು ಬಂದು ಲೋಕಕ್ಕೆ ಜೀವವನ್ನು ಉಂಟುಮಾಡುವಂಥದ್ದೇ” ಎಂದು ಹೇಳಿದನು.›

‹ಪರಲೋಕದಿಂದ ಇಳಿದು ಬರುವಂಥ ಆ ರೊಟ್ಟಿ, ಎಂಥದೆಂದರೆ ಅದನ್ನು ತಿಂದವನು ಎಂದಿಗೂ ಸಾಯುವುದಿಲ್ಲ.›

ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡುವುದರ ಮೂಲಕವೇ ವಿಶ್ವಾಸಿಗಳೆಲ್ಲರಿಗೆ ದೇವರ ನೀತಿಯು ಉಂಟಾಗುತ್ತದೆ. ಇದರಲ್ಲಿ ಯಾವ ತಾರತಮ್ಯವನ್ನು ಮಾಡುವುದಿಲ್ಲ.

¶ ನೀನು ಲೋಕಕ್ಕೆ ಬಾಧ್ಯನಾಗುವಿ ಎಂಬ ವಾಗ್ದಾನವು ಅಬ್ರಹಾಮನಿಗಾಗಲಿ ಅವನ ಸಂತತಿಯವರಿಗಾಗಲಿ ಧರ್ಮಶಾಸ್ತ್ರದಿಂದ ಆದದ್ದಲ್ಲ; ನಂಬಿಕೆಯಿಂದ ಬರುವ ನೀತಿಯಾಗಿದೆ.

ಆದ್ದರಿಂದ ದೇವರವಾಕ್ಯದಲ್ಲಿ ಹೀಗೆ ಹೇಳಿದೆ, “ಆತನು ಉನ್ನತ ಸ್ಥಾನಕ್ಕೆ ಏರಿಹೋದಾಗ ತಾನು ಸೆರೆಯಾಳುಗಳನ್ನು ಸೆರೆಹಿಡಿದುಕೊಂಡು ಹೋಗಿ ಮನುಷ್ಯರಿಗೆ ವರಗಳನ್ನು ಕೊಟ್ಟನು.”

ಈತನು ದೇವರ ಮಹಿಮೆಯ ಪ್ರಕಾಶವೂ, ಆತನ ವ್ಯಕ್ತಿತ್ವದ ಪ್ರತಿರೂಪವೂ, ತನ್ನ ಶಕ್ತಿಯುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ ಪಾಪಗಳನ್ನು ಶುದ್ಧಿಮಾಡಿ, ಉನ್ನತದಲ್ಲಿರುವ ಮಹೋನ್ನತನಾದ ದೇವರ ಬಲಗಡೆಯಲ್ಲಿ ಕುಳಿತುಕೊಂಡನು.