TSK

TSK · ರೋಮಾಪುರದವರಿಗೆ 11:14

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಹಾಗಾದರೆ “ಅವರು ಬಿದ್ದೇಹೋಗುವಂತೆ ಎಡವಿದರೇನು” ಎಂದು ಕೇಳುತ್ತೇನೆ. ಹಾಗೆ ಎಂದಿಗೂ ಆಗಬಾರದು ಅವರು ಬಿದ್ದುಹೋದದ್ದರಿಂದ ಕ್ರಿಸ್ತನಿಂದ ಉಂಟಾಗುವ ರಕ್ಷಣೆಯು ಅನ್ಯಜನರಿಗೆ ಉಂಟಾಯಿತು. ಇದರಿಂದ ದೇವರು ಅವರಲ್ಲಿ ಅಸೂಯೆ ಹುಟ್ಟಿಸುತ್ತಾನೆ.

ಸ್ತ್ರೀಯೇ, ನೀನು ನಿನ್ನ ಗಂಡನನ್ನು ರಕ್ಷಿಸುವಿಯೆಂದು ನಿನಗೆ ಹೇಗೆ ಗೊತ್ತು? ಪುರುಷನೇ, ನೀನು ನಿನ್ನ ಹೆಂಡತಿಯನ್ನು ರಕ್ಷಿಸುವಿಯೆಂದು ನಿನಗೆ ಹೇಗೆ ಗೊತ್ತು?

ಎಲ್ಲಾ ಜನರೂ ರಕ್ಷಣೆಯನ್ನು ಹೊಂದಿ ಸತ್ಯದ ಜ್ಞಾನಕ್ಕೆ ಸೇರಬೇಕೆಂಬುದೇ ಆತನ ಚಿತ್ತವಾಗಿದೆ.

ಆದಕಾರಣ ದೇವರು ಆರಿಸಿಕೊಂಡವರು ಸಹ ಕ್ರಿಸ್ತ ಯೇಸುವಿನಲ್ಲಿರುವ ರಕ್ಷಣೆಯನ್ನು ನಿತ್ಯ ಮಹಿಮೆಯ ಸಹಿತವಾಗಿ ಹೊಂದಬೇಕೆಂದು ನಾನು ಅವರಿಗೋಸ್ಕರ ಎಲ್ಲವನ್ನು ತಾಳಿಕೊಳ್ಳುತ್ತೇನೆ.

ನನಗೆ ಪ್ರಾಣ ಪ್ರಿಯನಂತಿರುವ ಅವನನ್ನು ನಿನ್ನ ಬಳಿಗೆ ಕಳುಹಿಸಿ ಕೊಡುತ್ತಿದ್ದೇನೆ.