TSK

TSK · ರೋಮಾಪುರದವರಿಗೆ 11:22

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಾನೇ, ನಾನೊಬ್ಬನೇ ದೇವರಾಗಿರಲಾಗಿ ನನ್ನ ಹೊರತು ಯಾವ ದೇವರೂ ಇಲ್ಲವೆಂದು ಈಗಲಾದರೂ ತಿಳಿದುಕೊಳ್ಳಿರಿ. ಬದುಕಿಸುವವನೂ ಹಾಗೂ ಕೊಲ್ಲುವವನೂ ನಾನೇ; ಗಾಯಪಡಿಸುವವನೂ ಮತ್ತು ವಾಸಿಮಾಡುವವನೂ ನಾನೇ; ನನ್ನ ಕೈಯಿಂದ ತಪ್ಪಿಸಲು ಶಕ್ತನು ಯಾವನೂ ಇಲ್ಲ.

ದುಷ್ಟರಿಗಾಗುವ ಪ್ರತಿದಂಡನೆಯನ್ನು ಭಕ್ತರು ನೋಡಿ ಹರ್ಷಿಸಿ, ಅವರ ರಕ್ತದಲ್ಲಿ ಕಾಲಾಡಿಸುವರು.

ಫರೋಹನನ್ನೂ, ಅವನ ಸೈನ್ಯವನ್ನೂ ಕೆಂಪು ಸಮುದ್ರದಲ್ಲಿ ಕೆಡವಿಬಿಟ್ಟನು, ಆತನ ಪ್ರೀತಿಯು ಶಾಶ್ವತವಾದದ್ದು.

ಇದಲ್ಲದೆ ನೀತಿವಂತನು ತನ್ನ ನೀತಿಯನ್ನು ಬಿಟ್ಟು ಅನ್ಯಾಯಮಾಡುವವನಾದರೆ, ಆಗ ನಾನು ಅವನ ಮುಂದೆ ಅಡಚಣೆಯನ್ನು ಒಡ್ಡುವೆನು, ಎಡವಿದರೆ ಅವನು ಸಾಯುವನು; ನೀನು ಅವನನ್ನು ಎಚ್ಚರಿಸದೆ ಹೋದಕಾರಣ ಅವನು ತನ್ನ ಪಾಪದಿಂದ ಸಾಯಬೇಕಾಯಿತು. ಅವನು ಮಾಡಿದ ಒಳ್ಳೆಕಾರ್ಯಗಳು ಲೆಕ್ಕಕ್ಕೆ ಬರುವುದಿಲ್ಲ. ಆದರೆ ಅವನ ಮರಣಕ್ಕೆ ನೀನು ಹೊಣೆಯಾಗುವೆ.

ಆದರೆ ನಿನ್ನ ಜನರು ಕರ್ತನ ಮಾರ್ಗವು ಸಮವಲ್ಲವೆಂದು ಹೇಳುತ್ತಿದ್ದಾರೆ, ಆದರೆ ಅವರ ಮಾರ್ಗವೇ ಸಮವಿಲ್ಲ.

‹ಮತ್ತೆ ಕೆಲವರು ವಾಕ್ಯವನ್ನು ಕೇಳಿ ಸುಗುಣವುಳ್ಳ ತಮ್ಮ ಒಳ್ಳೆಯ ಹೃದಯದಲ್ಲಿ ಅದನ್ನು ಸಂಗ್ರಹಿಸಿ ಇಟ್ಟುಕೊಂಡು ತಾಳ್ಮೆಯಿಂದ ಫಲವನ್ನು ಕೊಡುತ್ತಾರೆ. ಇವರೇ ಒಳ್ಳೆಯ ನೆಲದಲ್ಲಿ ಬಿದ್ದ ಬೀಜಗಳು.›

‹ನನ್ನಲ್ಲಿದ್ದು ಫಲಕೊಡದಿರುವ ಪ್ರತಿಯೊಂದು ಕೊಂಬೆಯನ್ನು ಆತನು ಕತ್ತರಿಸಿಹಾಕುತ್ತಾನೆ. ಫಲ ಕೊಡುವ ಪ್ರತಿಯೊಂದು ಕೊಂಬೆಯು ಹೆಚ್ಚು ಫಲ ಕೊಡುವ ಹಾಗೆ ಅದನ್ನು ಕತ್ತರಿಸಿ ಶುದ್ಧಮಾಡುತ್ತಾನೆ.›

ಅಥವಾ ಆತನ ಅಪಾರವಾದ ದಯೆ, ಸಹನೆ, ದೀರ್ಘಶಾಂತಿಗಳನ್ನು ಕೇವಲವಾಗಿ ಯೋಚಿಸಿ, ನಿನ್ನ ಮನಸ್ಸು ಮಾರ್ಪಡಿಸಿಕೊಳ್ಳುವಂತೆ ಪ್ರೆರೇಪಿಸುವ ದೇವರ ಒಳ್ಳೆತನದ ಅರಿವು ನಿನಗಿಲ್ಲವೋ?

ಆದರೆ ದೇವರು ತನ್ನ ಕೋಪವನ್ನು ತೋರಿಸಿ ತನ್ನ ಶಕ್ತಿಯನ್ನು ಪ್ರಸಿದ್ಧಿಪಡಿಸಬೇಕೆಂದಿದ್ದರೂ ಹಾಗೆ ಮಾಡದೆ ತನ್ನ ಕೋಪಕ್ಕೆ ಗುರಿಯಾದ ನಾಶನಪಾತ್ರರನ್ನು ಬಹು ತಾಳ್ಮೆಯಿಂದ ಸಹಿಸಿಕೊಂಡಿದ್ದಾನೆ.

ಒಳ್ಳೆಯದನ್ನು ಮಾಡುವುದರಲ್ಲಿ ಬೇಸರಗೊಳ್ಳದೇ ಇರೋಣ. ಏಕೆಂದರೆ ಮನಗುಂದದಿದ್ದರೆ ತಕ್ಕ ಸಮಯದಲ್ಲಿ ಬೆಳೆಯನ್ನು ಕೊಯ್ಯುವೆವು.

ಮೊದಲಿನಿಂದಲೂ ಇರುವ ನಮ್ಮ ಭರವಸೆಯನ್ನು ಅಂತ್ಯದ ವರೆಗೂ ದೃಢವಾಗಿ ಹಿಡಿದುಕೊಳ್ಳುವುದಾದರೆ ನಾವು ಕ್ರಿಸ್ತನಲ್ಲಿ ಪಾಲುಗಾರರಾಗುತ್ತೇವೆ.

ಆದ್ದರಿಂದ ನಿಮ್ಮ ಧೈರ್ಯವನ್ನು ಬಿಟ್ಟುಬಿಡಬೇಡಿರಿ. ಅದಕ್ಕೆ ಮಹಾ ಪ್ರತಿಫಲ ಉಂಟು.

ಪ್ರಿಯರೇ, ನೀವಾದರೋ ನಿಮಗಿರುವ ಅತಿ ಪರಿಶುದ್ಧವಾದ ಕ್ರಿಸ್ತ ನಂಬಿಕೆಯನ್ನು ಆಧಾರವಾಗಿಟ್ಟುಕೊಂಡು ಅಭಿವೃದ್ಧಿಹೊಂದುತ್ತಾ, ಪವಿತ್ರಾತ್ಮಪ್ರೇರಿತರಾಗಿ ಪ್ರಾರ್ಥನೆ ಮಾಡಿರಿ.